Homeಚಳವಳಿನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

ನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಡಿಸೆಂಬರ್ 5 ರಂದು 14 ನಾಗರಿಕರನ್ನು ಬಲಿತೆಗೆದುಕೊಂಡ ಕಾರ್ಯಾಚರಣೆಯಲ್ಲಿ ತೊಡಗಿದ್ದ ಸೈನಿಕರ ಹೇಳಿಕೆಯನ್ನು ದಾಖಲಿಸಲು ಸೇನೆಯು ರಾಜ್ಯದ ತನಿಖಾ ತಂಡಕ್ಕೆ ಅನುಮತಿ ನೀಡಿದೆ.

ಗುಂಡಿನ ದಾಳಿ ಪ್ರಕರಣದ ತನಿಖೆಗಾಗಿ ನಾಗಾಲ್ಯಾಂಡ್ ತಲುಪಿದ ಸೇನಾ ತಂಡವು ನಾಗರಿಕರ ಹತ್ಯಾಕಾಂಡದ ಕಾರ್ಯಾಚರಣೆಯಲ್ಲಿ ತೊಡಗಿದ್ದ ಯೋಧರ ಹೇಳಿಕೆಯನ್ನು ದಾಖಲಿಸಿಕೊಳ್ಳಲು ರಾಜ್ಯದ ತನಿಖಾ ತಂಡಕ್ಕೆ ಅನುಮತಿ ನೀಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ನಾಗಾಲ್ಯಾಂಡ್ ವಿಶೇಷ ತನಿಖಾ ತಂಡ ಅಥವಾ ಎಸ್‌ಐಟಿ ಈ ವಾರ 21 ಪ್ಯಾರಾ ವಿಶೇಷ ಪಡೆಯ ಯೋಧರ ಹೇಳಿಕೆಗಳನ್ನು ದಾಖಲಿಸುವ ಸಾಧ್ಯತೆಯಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 ನಾಗಾಲ್ಯಾಂಡ್‌ನ ಮಯನ್ಮಾರ್‌ ಗಡಿಯ ಬಳಿ ದಂಗೆಕೋರರ ವಿರುದ್ಧದ ಕಾರ್ಯಾಚರಣೆಯ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 13 ಮಂದಿ ಗ್ರಾಮಸ್ಥರು ಸಾವನ್ನಪ್ಪಿದ್ದರು. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರು.

ಇದನ್ನೂ ಓದಿ: AFSPA ರದ್ದತಿ ಕುರಿತು ಸಮಿತಿ ರಚನೆ: ಅಮಿತ್ ಶಾ ಜೊತೆ ಸಭೆ ನಂತರ ನಾಗಾಲ್ಯಾಂಡ್‌ ಸಿಎಂ ಹೇಳಿಕೆ

ನಾಗಾಲ್ಯಾಂಡ್ ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಅಡಿಯಲ್ಲಿ ಇರುವುದರಿಂದ ರಾಜ್ಯ ಮಟ್ಟದ ತಂಡದಿಂದ ತನಿಖೆ ಹೇಗೆ ನಡೆಸುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ತನಿಖೆಯನ್ನು ವೇಗಗೊಳಿಸಲು ನಾಗಾಲ್ಯಾಂಡ್ ಎಸ್‌ಐಟಿಯನ್ನು ಎಂಟು ಸದಸ್ಯರಿಂದ 22 ಸದಸ್ಯರಿಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ದೊಡ್ಡ ತಂಡವು ಐದು ಭಾರತೀಯ ಪೊಲೀಸ್ ಸೇವಾ ಅಧಿಕಾರಿಗಳನ್ನು ಒಳಗೊಂಡಿದೆ. ಎಸ್‌ಐಟಿಯನ್ನು ಏಳು ತಂಡಗಳಾಗಿ ವಿಂಗಡಿಸಲಾಗಿದೆ.

ಇನ್ನು ವಿವಾದಿತ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’ (AFSPA) ಯನ್ನು ವಾಪಾಸ್ ಪಡೆಯುವ ಕುರಿತು ನಿರ್ಧರಿಸಲು ಸಮತಿ ರಚಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾರೊಂದಿಗಿನ ಸಭೆಯ ಬಳಿಕ ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ತಿಳಿಸಿದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.


ಇದನ್ನೂ ಓದಿ: ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Tu loafer nanmakla nachike, maana, maryade enu ella Tu nim janmakke, enta naayi jeevana nimdu, sainikara bagge mathadoke yogyate beeku ayogya nanmakla, terrorists, naxal galige support mado sule malli neevu

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...