Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

- Advertisement -
- Advertisement -

ನಾಗಾಲ್ಯಾಂಡ್‌ನಲ್ಲಿ ಭಾನುವಾರ ಭದ್ರತಾ ಪಡೆಗಳು 13 ನಾಗರಿಕರನ್ನು ಗುಂಡಿಕ್ಕಿ ಕೊಂದ ಘಟನೆಯ ನಂತರ, ಈಶಾನ್ಯ ಭಾರತದಿಂದ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ-1958(AFSPA) ಅನ್ನು ಹಿಂತೆಗೆದುಕೊಳ್ಳಬೇಕು ಎಂಬ ಹೋರಾಟದ ಧ್ವನಿಗೆ ಮತ್ತಷ್ಟು ಕಾವು ಹೆಚ್ಚಾಗಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು ಮತ್ತು ಪ್ರದೇಶದ ರಾಜಕೀಯ ಮುಖಂಡರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ಈಶಾನ್ಯ ಜನರ ಕಲ್ಯಾಣ ಮತ್ತು ಯೋಗಕ್ಷೇಮದ ಬಗ್ಗೆ ಕಾಳಜಿ ಇದ್ದರೆ ಒಕ್ಕೂಟ ಸರ್ಕಾರವು ಈ ಕರಾಳ ಕಾನೂನನ್ನು ಹಿಂಪಡೆಯಬೇಕು ಎಂದು ಪ್ರದೇಶದ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ಈಶಾನ್ಯ ವಿದ್ಯಾರ್ಥಿಗಳ ಸಂಘಟನೆ (ಎನ್‌ಇಎಸ್‌ಒ) ಹೇಳಿದೆ. “…ಇಲ್ಲದಿದ್ದರೆ ಈ ಕಾನೂನು ಪ್ರದೇಶದ ಜನರನ್ನು ಮತ್ತಷ್ಟು ದೂರವಿಡುತ್ತದೆ” ಎಂದು NESO ಅಧ್ಯಕ್ಷ ಸ್ಯಾಮ್ಯುಯೆಲ್ ಬಿ ಜಿರ್ವಾ ಹೇಳಿದ್ದಾರೆ.

“ನಾಗಾಲ್ಯಾಂಡ್‌ನ ಸೋಮದಲ್ಲಿ ನಡೆದ ಘಟನೆಯು, ಹಿಂಸಾಚಾರದ ವಿರುದ್ದದ ಹೋರಾಟದ ಹೆಸರಿನಲ್ಲಿ ಭದ್ರತಾ ಪಡೆಗಳು ಹಲವಾರು ಸಂದರ್ಭಗಳಲ್ಲಿ ಹತ್ಯಾಕಾಂಡ, ಅಮಾಯಕ ಗ್ರಾಮಸ್ಥರನ್ನು ಹಿಂಸಿಸಿ ಮತ್ತು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ ಈ ಹಿಂದಿನ ಭಯಾನಕ ನೆನಪುಗಳನ್ನು ಮರಳಿ ತರುತ್ತದೆ” ಎಂದು ಅವರು ಹೇಳಿದ್ದಾರೆ.

TIPRA ಪಕ್ಷದ ಅಧ್ಯಕ್ಷ ಪ್ರದ್ಯೋತ್ ದೇಬ್ ಬರ್ಮಾ, “ಘಟನೆಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು. ಜೊತೆಗೆ AFSPA ನಂತಹ ಕಾನೂನುಗಳನ್ನು ರದ್ದುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಅಸ್ಸಾಂನ ರಾಜ್ಯಸಭಾ ಸದಸ್ಯ ಮತ್ತು ಹಿರಿಯ ಪತ್ರಕರ್ತ ಅಜಿತ್ ಕುಮಾರ್ ಭುಯಾನ್ ಮಾತನಾಡಿ, ಗ್ರಾಮಸ್ಥರ ಹತ್ಯೆಯು ಎಲ್ಲರ ಕಣ್ಣು ತೆರೆಸುವಂತಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ತಮಿಳುನಾಡು ಸಂಸದನ ಮಾನಹಾನಿ: BJP ನಾಯಕನ ವಿರುದ್ಧ 1 ಕೋಟಿ ಮಾನನಷ್ಟ ಮೊಕದ್ದಮೆ

“ಇಂತಹ ಘಟನೆಗಳು ನಡೆಯಬಾರದು ಎಂದು ಕಠೋರವಾದ AFSPA ವಿರುದ್ಧ ನಾವು ನಿರಂತರವಾಗಿ ಪ್ರತಿಭಟಿಸುತ್ತಿದ್ದೇವೆ. ಇದು ಮೊದಲ ಘಟನೆಯಲ್ಲ, ಆದರೆ ಇದು ಕೊನೆಯದು ಎಂದು ನಾನು ಭಾವಿಸುತ್ತೇನೆ” ಎಂದು ಆಲ್ ಅಸ್ಸಾಂ ವಿದ್ಯಾರ್ಥಿಗಳ ಒಕ್ಕೂಟದ (ಎಎಎಸ್‌ಯು) ಮುಖ್ಯ ಸಲಹೆಗಾರ ಸಮುಜ್ಜಲ್ ಕುಮಾರ್ ಭಟ್ಟಾಚಾರ್ಯ ಹೇಳಿದ್ದಾರೆ. ಭದ್ರತಾ ಪಡೆಗಳ ನಡೆಯು ಕ್ಷಮಿಸಲಾಗದ ಮತ್ತು ಘೋರ ಅಪರಾಧವಾಗಿದೆ. ಈ ಘಟನೆಯು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಸರ್ಕಾರಕ್ಕೆ ಇಷ್ಟವಿಲ್ಲದಿರುವುದನ್ನು ಬಹಿರಂಗಪಡಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ. ನಾಗರಿಕರ ರಕ್ಷಣೆಗಾಗಿ “ಕಠಿಣ ಮತ್ತು ಪ್ರಜಾಪ್ರಭುತ್ವ ವಿರೋಧಿ” AFSPA ಅನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳಿಂದ ಕನಿಷ್ಠ 13 ನಾಗರಿಕರನ್ನು ಹೊಡೆದುರುಳಿಸಲಾಗಿದೆ. ಇದರ ನಂತರ ನಡೆದ ಗಲಭೆಯಲ್ಲಿ ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಶನಿವಾರ ಸಂಜೆ ಕಲ್ಲಿದ್ದಲು ಗಣಿಯಿಂದ ಕೆಲವು ದಿನಗೂಲಿ ಕಾರ್ಮಿಕರು ಪಿಕಪ್ ವ್ಯಾನ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಓಟಿಂಗ್ ಮತ್ತು ತಿರು ಗ್ರಾಮಗಳ ನಡುವೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇನೆಯು ನಾಗರಿಕರ ಹತ್ಯೆಯ ಕುರಿತು ನ್ಯಾಯಾಲಯದ ವಿಚಾರಣೆಗೆ ಭಾನುವಾರ ಆದೇಶಿಸಿದ್ದು, ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಮ್ಯಾನ್ಮಾರ್‌ನ ಗಡಿಯಲ್ಲಿರುವ ಮೋನ್ ಜಿಲ್ಲೆಯ ಈ ಪ್ರದೇಶದಲ್ಲಿ ದಂಗೆಕೋರರ ಚಲನವಲನದ ಬಗ್ಗೆ “ವಿಶ್ವಾಸಾರ್ಹ” ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳಿಗೆ ತೀವ್ರ ಗಾಯಗಳಾಗಿವೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಸಾಧ್ಯವಿಲ್ಲ: ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...