Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

- Advertisement -
- Advertisement -

ಭಾನುವಾರ ನಾಗಾಲ್ಯಾಂಡ್‌ನಲ್ಲಿ ಸೇನೆಯ ದಾಳಿಯಿಂದ ಮೃತಪಟ್ಟ 14 ನಾಗರಿಕರ ಸಾವಿಗೆ ಒಕ್ಕೂಟ ಸರ್ಕಾರ ವಿಷಾದ ವ್ಯಕ್ತಪಡಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಸೋಮವಾರ ಲೋಕಸಭೆಗೆ ತಿಳಿಸಿದ್ದಾರೆ. ಸಂಜೆ ರಾಜ್ಯಸಭೆಯಲ್ಲಿ ನಾಗಾಲ್ಯಾಂಡ್ ವಿಷಯದ ಕುರಿತು ಮತ್ತೊಮ್ಮೆ ಅಮಿತ್‌‌ ಶಾ ಹೇಳಿಕೆ ನೀಡಲಿದ್ದಾರೆ.

“ಭಾರತ ಸರ್ಕಾರವು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತದೆ ಮತ್ತು ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸುತ್ತದೆ. ಘಟನೆಯ ತನಿಖೆಗಾಗಿ SIT ರಚಿಸಲಾಗಿದ್ದು, ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ. ನಾಗಾಲ್ಯಾಂಡ್ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ ಆದರೆ ನಿಯಂತ್ರಣದಲ್ಲಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಎಲ್ಲಾ ಸಂಸ್ಥೆಗಳು ಅದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ಅಮಿತ್‌ ಶಾ ಹೇಳಿಕೆಯ ನಂತರ ಆಕ್ರೊಶಗೊಂಡ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ಮತ್ತು ಆಕ್ಷೇಪಣೆಗಳನ್ನು ಕೂಗಿದ್ದಾರೆ. ಈ ವಿಷಯದ ಬಗ್ಗೆ ವಿವರವಾದ ಚರ್ಚೆಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಹಾಜರಿರಬೇಕೆಂದು ಕಾಂಗ್ರೆಸ್ ಕೂಡ ಒತ್ತಾಯಿಸಿತ್ತು, ಆದರೆ ಪ್ರಧಾನಿ ಮೋದಿ ಈ ಅಧಿವೇಶನದಿಂದ ದೂರ ಉಳಿದಿದ್ದಾರೆ.

ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಅಮಿತ್‌ ಷಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ತಮ್ಮ ಸಂಪುಟದ ಹಿರಿಯ ಸದಸ್ಯರನ್ನು ಭೇಟಿಯಾಗಿ ಪರಿಸ್ಥಿತಿ ಮತ್ತು ಒಕ್ಕೂಟ ಸರ್ಕಾರದ ಪ್ರತಿಕ್ರಿಯೆಯನ್ನು ಚರ್ಚಿಸಿದ್ದಾರೆ. ನಾಗಾಲ್ಯಾಂಡ್ ಮತ್ತು ಮೇಘಾಲಯ ಮುಖ್ಯಮಂತ್ರಿಗಳು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ-1958(AFSPA) ಅನ್ನು ರದ್ದುಗೊಳಿಸುವ ಬಗ್ಗೆ ಬೇಡಿಕೆಗಳನ್ನು ಮುಂದಿಟ್ಟಿದ್ದು, ತಮ್ಮ ನಾಗರಿಕರ ಸಾವಿನ ವಿರುದ್ದ ಒಕ್ಕೂಟ ಸರ್ಕಾರದ ಮೇಲೆ ದಾಳಿ ಮಾಡಿದ್ದಾರೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

ಇದನ್ನೂ ಓದಿ:ಕಾಶ್ಮೀರದಲ್ಲಿ 370 ನೇ ವಿಧಿ ರದ್ದುಪಡಿಸಿರುವುದರಿಂದ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಂಡಿದೆ: ಸಿಪಿಐ(ಎಂ) ನಾಯಕ ಯೂಸುಫ್ ತರಿಗಾಮಿ

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭಾನುವಾರ ನಡೆದ ಸೇನೆಯ ಕಾರ್ಯಾಚರಣೆಯಲ್ಲಿ ಭೀಕರವಾಗಿ ಹತ್ಯಾಕಾಂಡ ನಡೆದಿದೆ. ಇದರಲ್ಲಿ 14 ಗ್ರಾಮಸ್ಥರು ಮತ್ತು ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಸೇನೆಯ 21 ಪ್ಯಾರಾ ವಿಶೇಷ ಪಡೆಗಳು ಏಕಾಏಕಿಯಾಗಿ ಗುಂಡು ಹಾರಿಸಿದವು ಎಂದು ಪೊಲೀಸ್ ಎಫ್‌ಐಆರ್ ಹೇಳಿದೆ. ಘಟನೆಯ ಬಗ್ಗೆ ಸೇನೆಯು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದು, ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...