Homeಮುಖಪುಟನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ನಾಗಾಲ್ಯಾಂಡ್ ಹತ್ಯಾಕಾಂಡ: AFSPA ರದ್ದತಿಗೆ ಮೇಘಾಲಯ ಮತ್ತು ನಾಗಾಲ್ಯಾಂಡ್ ಸಿಎಂಗಳ ಒತ್ತಾಯ

ವಿಶೇಷವೇನೆಂದರೆ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ.

- Advertisement -
- Advertisement -

ಭಾನುವಾರ ನಾಗಾಲ್ಯಾಂಡ್‌ನಲ್ಲಿ ನಡೆದ ನಾಗರಿಕ ಹತ್ಯೆಗಳ ನಡುವೆ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ-1958’(AFSPA) ಯನ್ನು ವಾಪಾಸು ಪಡೆಯಬೇಕು ಎಂದು ನಾಗಾಲ್ಯಾಂಡ್‌ ಮತ್ತು ಮೇಘಾಲಯ ಮುಖ್ಯಮಂತ್ರಿಗಳಿಬ್ಬರೂ ಒತ್ತಾಯಿಸಿದ್ದಾರೆ. ವಿಶೇಷವಾಗಿ ಎರಡು ರಾಜ್ಯಗಳಲ್ಲೂ ಬಿಜೆಪಿ ಮೈತ್ರಿ ಸರ್ಕಾರವಿದೆ. ನಾಗರಿಕ ಹಕ್ಕುಗಳ ಹೋರಾಟಗಾರರು “ಕಠಿಣ” ಕಾನೂನನ್ನು ಹಿಂತೆಗೆದುಕೊಳ್ಳಬೇಕೆಂದು ಹಲವಾರು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಈ ಕಾಯ್ದೆಯ ಅಡಿಯಲ್ಲಿ ಭದ್ರತಾ ಪಡೆಗಳು ಮಿತಿ ಮೀರಿ ನಡೆಯುತ್ತಿವೆ ಎಂದು ಅವರು ಆರೋಪ ಮಾಡುತ್ತಲೇ ಇದ್ದಾರೆ.

ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆ ಅಥವಾ AFSPA ಹಲವಾರು ದಶಕಗಳಿಂದ ನಾಗಾಲ್ಯಾಂಡ್ ಮತ್ತು ಈಶಾನ್ಯದ ಭಾಗಗಳಲ್ಲಿ ಜಾರಿಯಲ್ಲಿದೆ. ವಿವಾದಿತ ಕಾನೂನಿನ ಅಡಿಯಲ್ಲಿ ಭದ್ರತಾ ಪಡೆಗಳು ರಾಜ್ಯದಲ್ಲಿ ಎಲ್ಲಿಯಾದರೂ ಕಾರ್ಯಾಚರಣೆಯನ್ನು ನಡೆಸಲು ಮತ್ತು ಯಾವುದೇ ಪೂರ್ವ ವಾರಂಟ್ ಇಲ್ಲದೆ ಯಾರನ್ನಾದರೂ ಬಂಧಿಸಬಹುದಾಗಿದೆ. ಅಸ್ಸಾಂ, ನಾಗಾಲ್ಯಾಂಡ್, ಮಣಿಪುರ (ಇಂಫಾಲ್ ಮುನ್ಸಿಪಲ್ ಕೌನ್ಸಿಲ್ ಪ್ರದೇಶವನ್ನು ಹೊರತುಪಡಿಸಿ), ಅರುಣಾಚಲ ಪ್ರದೇಶದ ಚಾಂಗ್ಲಾಂಗ್, ಲಾಂಗ್ಡಿಂಗ್ ಮತ್ತು ತಿರಾಪ್ ಜಿಲ್ಲೆಗಳು ಮತ್ತು ಅಸ್ಸಾಂ ಗಡಿಯಲ್ಲಿರುವ ಅರುಣಾಚಲ ಪ್ರದೇಶದ ಎಂಟು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ AFSPA ಜಾರಿಯಲ್ಲಿದೆ.

ಇದನ್ನೂ ಓದಿ: ನಾಗಾಲ್ಯಾಂಡ್ ಹತ್ಯಾಕಾಂಡ: ವಿಷಾದ ವ್ಯಕ್ತಪಡಿಸಿದ ಅಮಿತ್‌ ಶಾ

“ AFSPA ರದ್ದುಗೊಳಿಸಬೇಕು” ಎಂದು ಕಾನ್ರಾಡ್ ಕೆ ಸಂಗ್ಮಾ ಟ್ವೀಟ್‌ ಮಾಡಿದ್ದಾರೆ, ಅವರ ಪಕ್ಷವು ಬಿಜೆಪಿಯ ಮಿತ್ರ ಪಕ್ಷವಾಗಿದೆ. ಮುಖ್ಯಮಂತ್ರಿಯ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಕೂಡ ಬೆಂಬಲಿಸಿದ್ದು, ಈ ಕುರಿತು ಸಮಾಲೋಚನೆಗಾಗಿ ಸಭೆ ಕರೆಯುವಂತೆ ಒತ್ತಾಯಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಅವರು AFSPA ವಿಸ್ತರಣೆಗಾಗಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ಇದು ಗೊಂದಲದ ಪ್ರದೇಶ ಎಂದು ಪ್ರತಿಪಾದಿಸಿ ಪ್ರತಿ ವರ್ಷ ಒಕ್ಕೂಟ ಸರ್ಕಾರ ನಾಗಾಲ್ಯಾಂಡ್‌ನಲ್ಲಿ ಎಎಫ್‌ಎಸ್‌ಪಿಎ ಅನ್ನು ವಿಸ್ತರಿಸುತ್ತದೆ. ಆದರೆ ಎಲ್ಲಾ ಸಶಸ್ತ್ರ ಗುಂಪುಗಳು ಕದನ ವಿರಾಮ ಮತ್ತು ಶಾಂತಿ ಮಾತುಕತೆಯ ಭಾಗವಾಗಿದೆ. ಹಾಗಾದರೆ ಅದನ್ನು ವಿಸ್ತರಿಸುವುದು ಯಾಕೆ?” ಎಂದು ಕೇಳಿದ್ದಾರೆ.

“ಎಎಫ್‌ಎಸ್‌ಪಿಎ ಸಶಸ್ತ್ರ ಪಡೆಗಳಿಗೆ ವಿನಾಯಿತಿ ನೀಡುತ್ತದೆ…ಈ ಕಾನೂನು ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಚರ್ಚೆಯಾಗುತ್ತಿದೆ. ನಾವು ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಬಹಳಷ್ಟು ಜನರು ಎಎಫ್‌ಎಸ್‌ಪಿಎ ತೆಗೆದುಹಾಕಬೇಕೆಂದು ಒತ್ತಾಯಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ನಾಗಾಲ್ಯಾಂಡ್ ಹತ್ಯಾಕಾಂಡ: ಈಶಾನ್ಯ ಭಾರತದಲ್ಲಿ AFSPA ರದ್ದತಿ ಹೋರಾಟಕ್ಕೆ ಮತ್ತಷ್ಟು ಧ್ವನಿ

ನಾಗಾಲ್ಯಾಂಡ್‌ನ ಸೋಮ ಜಿಲ್ಲೆಯಲ್ಲಿ ಭಾನುವಾರ ನಡೆದ ಸೇನೆಯ ಕಾರ್ಯಾಚರಣೆಯಲ್ಲಿ ಭೀಕರವಾಗಿ ಹತ್ಯಾಕಾಂಡ ನಡೆದಿದೆ. ಇದರಲ್ಲಿ 14 ಗ್ರಾಮಸ್ಥರು ಮತ್ತು ಒಬ್ಬ ಯೋಧ ಸಾವನ್ನಪ್ಪಿದ್ದಾರೆ. ಸೇನೆಯ 21 ಪ್ಯಾರಾ ವಿಶೇಷ ಪಡೆಗಳು ಏಕಾಏಕಿಯಾಗಿ ಗುಂಡು ಹಾರಿಸಿದವು ಎಂದು ಪೊಲೀಸ್ ಎಫ್‌ಐಆರ್ ಹೇಳಿದೆ. ಘಟನೆಯ ಬಗ್ಗೆ ಸೇನೆಯು ತೀವ್ರ ವಿಷಾದವನ್ನು ವ್ಯಕ್ತಪಡಿಸಿದ್ದು, ಉನ್ನತ ಮಟ್ಟದಲ್ಲಿ ತನಿಖೆ ನಡೆಸಲಾಗುವುದು ಎಂದು ಭರವಸೆ ನೀಡಿದೆ.

ಇದನ್ನೂ ಓದಿ:ನಾಗಾಲ್ಯಾಂಡ್: ದಂಗೆಕೋರರ ವಿರುದ್ಧದ ಕಾರ್ಯಚರಣೆಯಲ್ಲಿ 13 ಮಂದಿ ಗ್ರಾಮಸ್ಥರನ್ನು ಹತ್ಯೆಗೈದ ಸೇನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...