Homeಮುಖಪುಟಬಿಜೆಪಿ ತೊರೆದ ಮಾಜಿ ರೌಡಿ ಶೀಟರ್ ಫೈಟರ್ ರವಿ

ಬಿಜೆಪಿ ತೊರೆದ ಮಾಜಿ ರೌಡಿ ಶೀಟರ್ ಫೈಟರ್ ರವಿ

- Advertisement -
- Advertisement -

ಬಿಜೆಪಿ ಬಂಡಾಯ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷ ತೊರೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಆ ಪಟ್ಟಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೈ ಮುಗಿದಿದ್ದ, ಮಾಜಿ ರೌಡಿ ಶೀಟರ್ ಫೈಟರ್ ರವಿ ಸೇರ್ಪಡೆಯಾಗಿದ್ದಾರೆ. ಅವರಿಂದು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನಾಗಮಂಗಲ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟು ಆರು ತಿಂಗಳ ಹಿಂದೆ ಪಕ್ಷ ಸೇರಿದ್ದ ಅವರು ಸಮಾಜ ಸೇವೆ ಹೆಸರಿನಲ್ಲಿ ಕೋಟ್ಯಾಂತರ ರೂ ಖರ್ಚು ಮಾಡಿದ್ದರು. ಅಷ್ಟು ಮಾತ್ರವಲ್ಲದೇ ಇದುವರೆಗೂ ನೆಲೆಯಿಲ್ಲದ ಬಿಜೆಪಿ ಪಕ್ಷಕ್ಕೆ ಒಂದಷ್ಟು ಸದಸ್ಯತ್ವ ಮಾಡಿಸುವ ಮೂಲಕ ಹೆಸರು ತಂದು ಕೊಟ್ಟಿದ್ದರು.

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಫೈಟರ್ ರವಿಗೆ ಟಿಕೆಟ್ ಎಂಬ ಆತ್ಮವಿಶ್ವಾಸದಲ್ಲಿ ಮಾತನಾಡಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೈಟರ್ ರವಿರವರಿಗೆ ಕೈಮುಗಿಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಎರಡು ವಾರದ ಹಿಂದಷ್ಟೇ ಬಿಜೆಪಿ ಸೇರಿದ ಎಲ್.ಆರ್ ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಬಂಡಾಯವೆದ್ದಿರುವ ಫೈಟರ್ ರಾಜಿ ಬಿಜೆಪಿ ತೊರೆದಿದ್ದಾರೆ.

2018 ರ ಚುಣಾವಣೆ ವೇಳೆ ಫೈಟರ್ ರವಿ ಜೆಡಿಎಸ್ ಅಭ್ಯರ್ಥಿ ಸುರೇಶ್ ಗೌಡರ ಪರವಾಗಿ ಕೆಲಸ ಮಾಡಿದ್ದರು. ಆದರೆ ಆನಂತರ ಅವರ ವಿರುದ್ಧ ಸಿಡಿದೆದ್ದ ಅವರನ್ನು ಸೋಲಿಸುವ ಗುರಿಯೊಂದಿಗೆ ಬಿಜೆಪಿ ಸೇರಿದ್ದರು. ಈಗ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರ? ಇಲ್ಲ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿ ಸೋಲಿಸುವ ಕೆಲಸ ಮಾಡುತ್ತಾರ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ; ನಾಗಮಂಗಲ: ಬಿಜೆಪಿ ಟಿಕೆಟ್ ಪಡೆದ ಸುಧಾ ಶಿವರಾಮೇಗೌಡ ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...