Homeಕರ್ನಾಟಕಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

ಪ್ರಚೋದನಕಾರಿ ಹೇಳಿಕೆ | ಶೋಭಾ ಕರಂದ್ಲಾಜೆ & ಆರ್. ಅಶೋಕ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೋಮುಗಲಭೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರೂ ನಾಯಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 192 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾಗಮಂಗಲ ಟೌನ್ ಪೊಲೀಸ್ ಠಾಣೆಯ ಗುಪ್ತಚರ ವಿಭಾಗದ ಪೊಲೀಸ್ ಅಧಿಕಾರಿ ಎಂ ರಮೇಶ ಅವರು ದೂರು ದಾಖಲಿಸಿದ್ದಾರೆ. ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕೋಮುಗಲಭೆ ಭುಗಿಲೆದ್ದ ನಂತರ ಆರೋಪಿಗಳ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು “ಅಶಾಂತಿಯನ್ನು ಪ್ರಚೋದಿಸುವ” ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.

ಸಚಿವೆ ಶೋಭಾ ಅವರು ಸೆಪ್ಟೆಂಬರ್ 13 ರಂದು ತಮ್ಮ ಎಕ್ಸ್ ಖಾತೆಯಲ್ಲಿ ತಪ್ಪುದಾರಿಗೆಳೆಯುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದರೂ ಶೋಭಾ ಬೇರೆ ಫೋಟೋಗಳನ್ನು ಪೋಸ್ಟ್ ಮಾಡಿ, ಅದು ನಾಗಮಂಗಲದ ಚಿತ್ರ ಎಂದು ಪ್ರತಿಪಾದಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.

ಪೊಲೀಸ್ ಅಧಿಕಾರಿಯೊಬ್ಬರು ಗಣೇಶನ ವಿಗ್ರಹವನ್ನು ತಬ್ಬಿಕೊಂಡಿರುವ ಚಿತ್ರಗಳನ್ನು ಹಂಚಿ, ವಿಗ್ರಹವನ್ನು “ಬಂಧಿಸಲಾಗಿದೆ” ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ನಾಗಮಂಗಲದ “ಘಟನೆಗಳ ಸುಳ್ಳು ನಿರೂಪಣೆಯನ್ನು ಪ್ರಸ್ತುತಪಡಿಸಿ ಸಾಮಾಜಿಕ ಅಶಾಂತಿಯನ್ನು ಪ್ರಚೋದಿಸಲು” ಪೋಸ್ಟ್ ಪ್ರಯತ್ನಿಸಿದೆ ಎಂದು ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ.

ಇದನ್ನೂಓದಿ: ದಿನೇಶ್‌ ಪತ್ನಿ ಮುಸ್ಲಿಂ ಆದ ಮಾತ್ರಕ್ಕೆ ಅವರ ಮನೆಯನ್ನು ಅರ್ಧ ಪಾಕಿಸ್ತಾನ ಎನ್ನಬಹುದೇ? ಯತ್ನಾಳ್‌ಗೆ ಹೈಕೋರ್ಟ್‌ ತರಾಟೆ

ಆರ್ ಅಶೋಕ ಅವರು X ನಲ್ಲಿ ಸಂಬಂಧವಿಲ್ಲದ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ ಎಂಬ ಆರೋಪಿಸಲಾಗಿದೆ. ತಪ್ಪಾದ ವಿಡಯೊ ಹಾಕಿ ನಾಗಮಂಗಲ ಗಣೇಶ ವಿಸರ್ಜನೆಯ ಮೆರವಣಿಗೆಯ ಹಿಂಸಾಚಾರ ಎಂದು ಬಿಂಬಿಸಲಾಗಿದೆ. ಆದರೆ ಈ ದೃಶ್ಯಾವಳಿಗಳು ಸೆಪ್ಟೆಂಬರ್ 11 ರಂದು ಪಟ್ಟಣದಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿಲ್ಲ ಎಂದು ಎಫ್‌ಐಆರ್ ಹೇಳಿದೆ. ಅಶೋಕ ಅವರ ಪೋಸ್ಟ್‌ಗಳು, ಹಿಂಸಾಚಾರದ ಘಟನೆಗಳು ದೊಡ್ಡ ಕೋಮು ಪಿತೂರಿಯ ಭಾಗವಾಗಿದೆ ಎಂದು ಸೂಚಿಸುವ ಮೂಲಕ ಮತ್ತಷ್ಟು ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಗುರಿಯನ್ನು ಹೊಂದಿದ್ದವು ಎಂದು ಆರೋಪಿಸಲಾಗಿದೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂಸಾಚಾರದ ಸಂದರ್ಭದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರ್‌. ಅಶೋಕ ಹೇಳಿಕೊಂಡಿದ್ದು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೀಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಈ ಘಟನೆಗಳ ಹಿಂದೆ ನಿಷೇಧಿತ ಸಂಘಟನೆಗಳ ಕೈವಾಡವಿದ್ದು, ಕೋಮುಗಲಭೆಗೆ ಮತ್ತಷ್ಟು ಉತ್ತೇಜನ ನೀಡುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದರು. ಪ್ರಚೋದನಕಾರಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸೆಪ್ಟೆಂಬರ್ 12 ರ ಬುಧವಾರ ರಾತ್ರಿ ಗಣೇಶ ಚತುರ್ಥಿ ಮೆರವಣಿಗೆ ವೇಳೆ ಮಸೀದಿ ಬಳಿ ಸಾಗುತ್ತಿದ್ದಾಗ ಕೋಮು ಘರ್ಷಣೆ ಸಂಭವಿಸಿದೆ. ಈ ವೇಳೆ ಕಿಡಿಗೇಡಿಗಳು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯು ನಾಗಮಂಗಲ ಟೌನ್ ಬಳಿ ಮೈಸೂರು ರಸ್ತೆ ಬಳಿ ಸಾಗುತ್ತಿದ್ದಾಗ ಘರ್ಷಣೆ ಸಂಭವಿಸಿತ್ತು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...