Homeಮುಖಪುಟನಾಗಮಂಗಲ: ಬಿಜೆಪಿ ಟಿಕೆಟ್ ಪಡೆದ ಸುಧಾ ಶಿವರಾಮೇಗೌಡ ಯಾರು?

ನಾಗಮಂಗಲ: ಬಿಜೆಪಿ ಟಿಕೆಟ್ ಪಡೆದ ಸುಧಾ ಶಿವರಾಮೇಗೌಡ ಯಾರು?

- Advertisement -
- Advertisement -

ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿಯು ಕರ್ನಾಟಕ ಚುನಾವಣೆಗೆ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಈ ಬಾರಿ 52 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಒಬಿಸಿ –32, ಎಸ್‌ಸಿ –30, ಎಸ್‌ಟಿ– 16, 09 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ ಎಂದು ಬಿಜೆಪಿ ಚುನಾವಣಾ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಮದ್ದೂರಿನಲ್ಲಿ ಎಸ್‌.ಪಿ ಸ್ವಾಮಿ, ಮಳವಳ್ಳಿ ಪ.ಜಾ ಮೀಸಲು ಕ್ಷೇತ್ರಕ್ಕೆ ಮುನಿರಾಜು, ಮಂಡ್ಯಕ್ಕೆ ಅಶೋಕ್ ಜಯರಾಮ್, ಶ್ರೀರಂಗಪಟ್ಟಣಕ್ಕೆ ಸಚ್ಚಿದಾನಂದ, ಕೆ.ಆರ್ ಪೇಟೆಗೆ ನಾರಾಯಣಗೌಡ, ಮೇಲುಕೋಟೆಗೆ ಡಾ.ಇಂದ್ರೇಶ್ ಕುಮಾರ್ ಮತ್ತು ನಾಗಮಂಗಲಕ್ಕೆ ಸುಧಾ ಶಿವರಾಮ್‌ರವರಿಗೆ ಟಿಕೆಟ್ ನೀಡಲಾಗಿದೆ.

ನಾಗಮಂಗಲ ಬಿಜೆಪಿ ಟಿಕೆಟ್‌ಗಾಗಿ ಫೈಟರ್ ರವಿ ಮತ್ತು ಜೆಡಿಎಸ್‌ನಿಂದ ಉಚ್ಛಾಟನೆಗೊಂಡು ಇತ್ತೀಚಿಗೆ ಬಿಜೆಪಿ ಸೇರಿದ ಎಲ್.ಆರ್ ಶಿವರಾಮೇಗೌಡ ಪೈಪೋಟಿ ನಡೆಸಿದ್ದರು. ಆದರೆ ಅವರಿಬ್ಬರನ್ನೂ ಬಿಟ್ಟು ಅಚ್ಚರಿಯ ನಡೆಯಲ್ಲಿ ಶಿವರಾಮೇಗೌಡರ ಪತ್ನಿ ಸುಧಾ ಶಿವರಾಮೇಗೌಡರವರಿಗೆ ಬಿಜೆಪಿ ಟಿಕೆಟ್ ಲಭಿಸಿದೆ.

ತುರುವೇಕೆರೆ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಎಚ್ ರಾಮಕೃಷ್ಣಯ್ಯನವರ ಪುತ್ರಿಯಾದ ಸುಧಾ ಶಿವರಾಮೇಗೌಡರು ಸದ್ಯ ನಾಗಮಂಗಲದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

 

ಎಲ್.ಆರ್ ಶಿವರಾಮೇಗೌಡರು ಕಳೆದ ವರ್ಷ ಜಿ.ಮಾದೇಗೌಡರ ವಿರುದ್ಧ ಹಗುರವಾಗಿ ಮಾತನಾಡಿದ ಕಾರಣದಿಂದ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿತ್ತು. ಅವರು ಕಳೆದ ವಾರದಲ್ಲಿ ಬಿಜೆಪಿ ಸೇರಿದ್ದರು. ಅವರೇ ಅಭ್ಯರ್ಥಿ ಎನ್ನಲಾಗುತ್ತಿತ್ತು. ಆದರೆ ಅವರು ತಮ್ಮ ಪತ್ನಿಗೆ ಟಿಕೆಟ್ ತಂದಿದ್ದಾರೆ.

ಇದನ್ನೂ ಓದಿ; 189 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ; ಸಂಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...