Homeಮುಖಪುಟನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು...

ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

- Advertisement -
- Advertisement -

‘ಲೋಕಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ನಗರದ ನಗರ್ತಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡುವ ಮೂಲಕ, ಪ್ರಕರಣಕ್ಕೆ ಕೋಮು ದ್ವೇಷ ಹರಡಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿಸೂರ್ಯ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು’ ಎಂದು ಕಾಂಗ್ರೆಸ್ ಕಾನೂನು ಘಟಕದಿಂದ ಚುನಾವಣಾ ಆಯೋಗಕ್ಕೆ ಮಂಗಳವಾರ ದೂರು ಸಲ್ಲಿಕೆಯಾಗಿದೆ.

ಕಾಂಗ್ರೆಸ್ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿಹಕ್ಕು ಘಟಕದ ಪ್ರಧಾನ ಕಾರ್ಯದರ್ಶಿ, ಹೈಕೋರ್ಟ್‌ ವಕೀಲ ಸೂರ್ಯ ಮುಕುಂದರಾಜ್ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿ, ಕ್ರಮಕ್ಕೆ ಆಗ್ರಹಿಸಿದ್ದಾರೆ.

‘ಬೆ೦ಗಳೂರಿನ ನಗರ್ತ ಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ತಿರುಚಿರುತ್ತಾರೆ. ದಿನಾ೦ಕ:18-03-2024 ರ೦ದು ಬೆ೦ಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಸ್ಥಳಕ್ಕೆ ಭೇಟಿ ನೀಡಿ, ಅಂಗಡಿಯ ಮುಂದೆ ಗುಂಪು ಸೇರಿಸಿ, 19 ಮಾರ್ಚ್‌ 2024ರ ಮಧ್ಯಾಹ್ನ 12 ಗ೦ಟೆಗೆ ಹನುಮಾನ್‌ ಚಾಲೀಸ ಪಠಣ ಮಾಡಲು ಕರೆ ನೀಡಿ, ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ’ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಿರುವ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಮೂವರ ಬಂಧನ:

ಮೊಬೈಲ್ ಅಂಗಡಿಯಲ್ಲಿ ಜೋರಾಗಿ ಸ್ಪೀಕರ್ ಶಬ್ದ ಹಾಕಿದ್ದಕ್ಕೆ ಕೋಪಗೊಂಡು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಹಲಸೂರು ಗೇಟ್ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲೇಮಾನ್(25), ಶಾನವಾಝ್(25) ರೋಹಿತ್(25) ಬಂಧಿತ ಆರೋಪಿಗಳು. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ದಾನಿಶ್ ಮತ್ತು ತರುಣ ಎಂಬವರಿಗೆ ಶೋಧ ಕಾರ್ಯ ಮುಂದುವರಿದಿದೆ. ಅರೋಪಿಗಳ ವಿರುದ್ಧ ಐಪಿಸಿ ಸೆಕ್ಸನ್‌ 506, 504, 149, 307, 323 ಹಾಗೂ 324ರಡಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿತ್ತು.

ನಗರದ ಸಿದ್ದಣ್ಣ ಗಲ್ಲಿಯ ನಗರ್ತಪೇಟೆಯಲ್ಲಿ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಮುಖೇಶ್ ಅಂಗಡಿಗೆ ಬಂದ ಯುವಕರ ಗುಂಪಿನ ಜೊತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು, ಮಾತಿಗೆ ಮಾತು ಬೆಳೆದು ಗುಂಪಿನಲ್ಲಿದ್ದ ಯುವಕನೊಬ್ಬ ಮುಖೇಶ್‍ ಮೇಲೆ ಹಲ್ಲೆ ಮಾಡುವುದು. ಈ ವೇಳೆ ಅಂಗಡಿಯಿಂದ ಹೊರ ಬರುವ ಮುಖೇಶ್ ಯುವಕರ ಮೇಲೆ ಪ್ರತಿ ಹಲ್ಲೆ ನಡೆಸುವುದು ಸೆರೆಯಾಗಿದೆ.

ಇದನ್ನೂ ಓದಿ; ಮೊಬೈಲ್ ಅಂಗಡಿಯಲ್ಲಿ ಲೌಡ್‌ ಸ್ಪೀಕರ್‌ ವಿಚಾರಕ್ಕೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...