Homeಕರ್ನಾಟಕನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

- Advertisement -
- Advertisement -

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ ಮೇಲಿನ ಷಡ್ಯಂತ್ರ- ಕುತಂತ್ರಕ್ಕೆ ಸಿಕ್ಕ ಗೆಲುವು ಎಂದು ಕರ್ನಾಟಕ ಕಾಂಗ್ರೆಸ್ ಘಟಕದ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ನಡಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ನಾಯಕರು ನಾಗೇಂದ್ರ ಅವರ ರಾಜೀನಾಮೆಯನ್ನು ‘ಒಂದು ವಿಕೆಟ್ ಬಿದ್ದಿದೆ’ ಎಂದು ಸಂಭ್ರಮಿಸುತ್ತಿದ್ದಾರೆ. ರಾಜಕೀಯ ಎಂದರೆ ಐಪಿಎಲ್ ಕ್ರಿಕೆಟ್ ಪಂದ್ಯವಲ್ಲ. ವಿಕೆಟ್ ಬಿದ್ದಿದೆ ಎನ್ನುವವರು ಮೊದಲು ಬಿಜೆಪಿ ತಂಡದಲ್ಲಿ ಎಷ್ಟು ಜನ ಚಾರ್ಜ್‌ಶೀಟ್ ಹಾಕಿಸಿಕೊಂಡಿದ್ದಾರೆ, ಜೈಲುವಾಸ ಅನುಭವಿಸಿದ್ದಾರೆ, ತನಿಖೆ ಎದುರಿಸುತ್ತಿದ್ದಾರೆ, ಜಾಮೀನಿನ ಮೇಲೆ ಹೊರಗಡೆ ಇದ್ದು ಎಷ್ಟು ಜನ ಬ್ಯಾಟಿಂಗ್, ಬೌಲಿಂಗ್ ಮಾಡುತ್ತಿದ್ದಾರೆ ಎಂದು ನೋಡಿಕೊಳ್ಳಲಿ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

“ಆರೋಪ ಮಾಡುವುದು ತನಿಖಾ ಸಂಸ್ಥೆಗಳ ಕೆಲಸ; ಅಪರಾಧಿ ಹೌದೋ ಅಲ್ಲವೋ ತೀರ್ಮಾನಿಸುವುದು ನ್ಯಾಯಾಲಯದ ಕೆಲಸ. ಬಿಜೆಪಿ ಕಚೇರಿ ನ್ಯಾಯಾಲಯವೂ ಅಲ್ಲ; ತೀರ್ಪು ಕೊಡಲು ಬಿಜೆಪಿ ನಾಯಕರು ನ್ಯಾಯಧೀಶರೂ ಅಲ್ಲ ” ಎಂದು ಕಿಡಿಕಾರಿದರು.

“ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ ಎಂದ ತಕ್ಷಣ ನಮ್ಮ ಸರ್ಕಾರ ಎಸ್ಐಟಿ ತನಿಖೆಗೆ ಆದೇಶ ಮಾಡಿತ್ತು. ತನಿಖೆಯಿಂದ ಸತ್ಯಾಸತ್ಯತೆ ಹೊರಗಡೆ ಬಂದು, ಅಧಿಕಾರಿಗಳ ಮೇಲೆ ಕ್ರಮ ತೆಗದುಕೊಂಡಿದ್ದೇವೆ. ಇದನ್ನೂ ಮೀರಿ ಇಡಿ ತನಿಖೆ ನಡೆಸಿದೆ. ಆದರೂ ಕೂಡ ನಾಗೇಂದ್ರ ಸಹಕಾರ ನೀಡಿದ್ದಾರೆ. ಅನಗತ್ಯವಾಗಿ ಒಬ್ಬ ದಲಿತ ಸಮುದಾಯದ ಜನಪ್ರತಿನಿಧಿಯನ್ನ ಯಾವುದೇ ಸಾಕ್ಷ್ಯ ಇಲ್ಲದೆ ಜೈಲಿಗೆ ಕಳಿಸಿದರು. ಇದಕ್ಕಲ್ಲಾ ನಾಗೇಂದ್ರ ಬಿಜೆಪಿಗೆ ಸೇರಲಿಲ್ಲ ಎಂಬ ಕಾರಣವೇ ಹೊರತು ಬೇರೆ ಏನೂ ಇರಲಿಲ್ಲ” ಎಂದರು.

“ತನಿಖೆಯಲ್ಲಿ ನಾಗೇಂದ್ರ ಅವರ ಪಾತ್ರವೇ ಇಲ್ಲ ಎಂದು ರಿಪೋರ್ಟ್ ಬಂದಿದೆ. ನಾಗೇಂದ್ರ ಅವರಿಗೆ ಜಾಮೀನು ನೀಡುವಾಗ ಕೋರ್ಟ್ ಏನು ಹೇಳಿದೆ ಎಂದು ಬಿಜೆಪಿ ನಾಯಕರು ಅರ್ಥ‌ಮಾಡಿಕೊಳ್ಳಬೇಕು. ಇಡಿ ತನಿಖೆಯ ಪ್ರಕಾರ ರೂ. 94.73 ಕೋಟಿ ಹಣವನ್ನು ನಾಗೇಂದ್ರ ಸ್ವೀಕರಿಸಿದ್ದಾರೆ ಅಥವಾ ಬಳಸಿದ್ದಾರೆ ಎಂಬುದನ್ನು ತೋರಿಸುವ ಸಾಕ್ಷ್ಯ ನೀಡಿಲ್ಲ ಎಂದು ವಿಶೇಷ ನ್ಯಾಯಾಲಯವೇ ಜಾಮೀನು ಆದೇಶದಲ್ಲಿ ದಾಖಲಿಸಿದೆ” ಎಂದು ಹೇಳಿದರು.

“ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲೂ ನಾಗೇಂದ್ರ ಆರೋಪಿಯಾಗಿರಲಿಲ್ಲ.ವಾಲ್ಮೀಕಿ ಹಗರಣವನ್ನು ಸಿಬಿಐ ತನಿಖೆ ಮಾಡಲಿ, ಇಡಿ ತನಿಖೆ ಮಾಡಲಿ, ದಾಖಲೆ ಇದ್ದರೆ ನ್ಯಾಯಾಲಯದಲ್ಲಿ ಸಾಬೀತುಪಡಿಸಲಿ. ಆದರೆ ಆರೋಪವನ್ನೇ ಶಿಕ್ಷೆಯಾಗಿ ಬಿಂಬಿಸುವ ರಾಜಕೀಯವನ್ನು ಒಪ್ಪಲು ಸಾಧ್ಯವಿಲ್ಲ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದ್ದರೆ ಬಳ್ಳಾರಿಯಿಂದಲೇ ಚರ್ಚೆ ಮಾಡೋಣ ಬನ್ನಿ. 2011ರ ಲೋಕಾಯುಕ್ತ ಅಕ್ರಮ ಗಣಿಗಾರಿಕೆ ವರದಿ, ರೆಡ್ಡಿ ಸಹೋದರರು ಹಾಗೂ ಆ ಕಾಲದ ಬಳ್ಳಾರಿ ರಾಜಕಾರಣ ಇವೆಲ್ಲವನ್ನೂ ಕರ್ನಾಟಕದ ಜನ ಮರೆತಿಲ್ಲ. ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೂರು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿದ್ದರು. ನಂತರ ವಿಶೇಷ ಸಿಬಿಐ ನ್ಯಾಯಾಲಯ ಶಿಕ್ಷೆಯನ್ನೂ ವಿಧಿಸಿತು. ಇವರೆಲ್ಲ ಭ್ರಷ್ಟಾಚಾರದ ಕುರಿತು ಮಾತನಾಡುತ್ತಾರೆ” ಎಂದು ಬಿಜೆಪಿಗೆ ತಿರುಗೇಟು ನೀಡಿದರು.

“ಸ್ವಂತ ತಂದೆಯನ್ನೇ ಚೆಕ್ ನಲ್ಲಿ ಲಂಚ ತೆಗೆದುಕೊಂಡು ಜೈಲಿಗೆ ಕಳಿಸಿದ ಜೂನಿಯರ್ ಯಡಿಯೂರಪ್ಪ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ನೈತಿಕತೆ ಇದೆಯೇ? ಬಿ.ಎಸ್. ಯಡಿಯೂರಪ್ಪ 2011ರಲ್ಲಿ ನ್ಯಾಯಾಂಗ ಬಂಧನಕ್ಕೆ ಹೋಗಿದ್ದನ್ನು ಕರ್ನಾಟಕ ಮರೆತಿಲ್ಲ. ನಾಗೇಂದ್ರ ‘ಚಿಕ್ಕ ಮೀನು’ ಎಂದು ವಿಜಯೇಂದ್ರ ಹೇಳಿದ್ದಾರೆ. ಹಾಗಾದರೆ ನಿಮ್ಮ ಬಳಿ ಇರುವ ‘ದೊಡ್ಡ ಮೀನು’ ಯಾರು ಎಂಬ ದಾಖಲೆ ಇದ್ದರೆ, ಬಿಜೆಪಿಯವರ ಭಾಷೆಯಲ್ಲಿ ಹೇಳುವುದಾದರೆ ಧಮ್ಮು, ತಾಕತ್ ಇದ್ದರೆ ಸಾಬೀತು ಮಾಡಲಿ” ಎಂದು ಸವಾಲು ಹಾಕಿದರು.

“2014 ನಂತರ ಕೇಂದ್ರ ತನಿಖಾ ಸಂಸ್ಥೆಗಳ ಕ್ರಮ ಎದುರಿಸುತ್ತಿದ್ದ 25 ಪ್ರಮುಖ ವಿರೋಧ ಪಕ್ಷದ ನಾಯಕರು ಬಿಜೆಪಿ ಅಥವಾ ಬಿಜೆಪಿ ನೇತೃತ್ವದ ಮೈತ್ರಿಗೆ ಹೋದರು. 23 ಪ್ರಕರಣಗಳಲ್ಲಿ ಅವರಿಗೆ ರಿಲೀಫ್ ಸಿಕ್ಕಿದೆ. ಮೂರು ಪ್ರಕರಣಗಳು ಮುಚ್ಚಲ್ಪಟ್ಟಿದೆ. ‘ನಾ ಖಾವೂಂಗಾ ನಾ ಖಾನೇದೂಂಗಾ” ಎಂದು ಹೇಳುತ್ತಿದ್ದ ಪ್ರಧಾನಿಗಳೇ ಭ್ರಷ್ಟಾರಿಗಳ ಜೊತೆಗೆ ಶಾಮೀಲಾಗಿದ್ದಾರೆ. ಭ್ರಷ್ಟರನ್ನೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಈಗ ನಾಗೇಂದ್ರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ” ಎಂದು ಹರಿಪ್ರಸಾದ್ ಪ್ರಶ್ನಿಸಿದರು.

“ಬಿಜೆಪಿಯವರು ನಿರುದ್ಯೋಗಿಗಳು ಪಾದಯಾತ್ರೆ ಮಾಡುವುದಾದರೆ ಮಾಡಲಿ, ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದು. ಆದರೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಬಿಜೆಪಿಯವರಿಗಿಲ್ಲ. ನಾಗೇಂದ್ರ ನಾಲ್ಕು ಬಾರಿ ಶಾಸಕರಾಗಿದ್ದವರು. ಎಸ್‌ಟಿ ಸಮುದಾಯದ ಬಲಿಷ್ಟ ನಾಯಕರು. ಅವರನ್ನು ಪಕ್ಷ ನಡುನೀರಿನಲ್ಲಿ ಕೈ ಬಿಡುವುದಿಲ್ಲ; ಸೂಕ್ತ ಸ್ಥಾನಮಾನ ನೀಡುತ್ತೇವೆ” ಎಂದು ಭರವಸೆ ನೀಡಿದರು.

“ಬರದ ಬಗ್ಗೆ ಚರ್ಚೆ ಮಾಡಲು ಬಿಜೆಪಿಗೆ ಧೈರ್ಯ ಇಲ್ಲ, ಸದನದಲ್ಲಿ ಚರ್ಚೆ ಮಾಡಿದರೆ ಕೇಂದ್ರದಿಂದ ಬರುವ ಪಾಲನ್ನು ಕೇಳುತ್ತೇವೆ ಎಂದು ಬಿಜೆಪಿ ನಾಯಕರು ಚರ್ಚೆಗೆ ಬರದೆ ನಾಗೇಂದ್ರ ಅವರ ವಿಷಯದಲ್ಲಿ ಕಲಾಪವನ್ನೇ ಹಾಳು ಮಾಡಿದ್ದಾರೆ. ಇಡಿ ಸಿಬಿಐ ತನಿಖಾ ಸಂಸ್ಥಗಳು ವಿರೋಧ ಪಕ್ಷದ ನಾಯಕರ ಮೇಲೆ ಮಾತ್ರ ತನಿಖೆ ನಡೆಸುತ್ತಿದೆ. ರಾಜ್ಯಪಾಲರು ತ್ರಿಶಂಕುವಿನಲ್ಲಿದ್ದಾರೆ. ರಾಜ್ಯಪಾಲರ ಕಚೇರಿ ಮೇಲೆ ಕೇಂದ್ರದವರು ಒತ್ತಡ ಹಾಕಿ ಪ್ರಾಸಿಕ್ಯೂಷನ್‌ಗೆ ಪರ್ಮಿಷನ್ ಕೊಡಿಸುತ್ತಾರೆ” ಎಂದು ಆರೋಪಿಸಿದರು.

“ಬಿಜೆಪಿ ನಾಯಕರು ಯಾರೂ ಸತ್ಯಹರಿಶ್ಚಂದ್ರರಲ್ಲ. ಆಪಾದನೆ ಬಂದ ತಕ್ಷಣ ಯಾರಾದರೂ ರಾಜೀನಾಮೆ ನೀಡಿದ್ದಾರಾ? ಬಿಜೆಪಿಯವರಿಗೆ ಜನರು ತಕ್ಕ ಪಾಠ ಕಲಿಸುತ್ತಾರೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...