Homeಮುಖಪುಟಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಐಪಿಎಸ್‌ ನಾಗೇಶ್ವರ್‌ ರಾವ್‌ ವಿರುದ್ದ ಕ್ರಮ ಕೈಗೊಳ್ಳುವಂತೆ ಬೃಂದಾ ಕಾರಟ್‌ ಪತ್ರ

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ನಾಗೇಶ್ವರ್‌ ರಾವ್‌ ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

- Advertisement -
- Advertisement -

ಸರ್ಕಾರಿ ಅಧಿಕಾರಿಯಾಗಿದ್ದುಕೊಂಡು ಕೋಮು ಸಾಮರಸ್ಯ ಕದಡುವ ಐಪಿಎಸ್ ನಾಗೇಶ್ವರರಾವ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿಐ (ಎಂ) ಪಾಲಿಟ್ ಬ್ಯೂರೋ ಸದಸ್ಯರಾದ ಬೃಂದಾ ಕಾರಟ್‌ ಕೇಂದ್ರ ಗೃಹಸಚಿವ ಅಮಿ‌ತ್‌ ಶಾ ಮತ್ತು ದೆಹಲಿ ಪೋಲೀಸರಿಗೆ ಪತ್ರ ಬರೆದಿದ್ದಾರೆ.

ಗೃಹ ಸಚಿವಾಲಯದ ಅಡಿಯಲ್ಲಿ ಅಗ್ನಿಶಾಮಕ ಸೇವೆಗಳು, ಗೃಹರಕ್ಷಕರು ಮತ್ತು ನಾಗರಿಕ ರಕ್ಷಣಾ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಕೇಡರ್ ನಾಗೇಶ್ವರ ರಾವ್ ಟ್ವಿಟರ್‌ನಲ್ಲಿ ಅತ್ಯಂತ ಅತಿರೇಕದ ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡಿದ್ದು ಅದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಗೃಹಸಚಿವ ಅಮಿತ್‌ ಷಾಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್ ಕಲಾಂ ಆಜಾದ್, ಶಿಕ್ಷಣಕ್ಕೆ ಗಮನಾರ್ಹ ಕೊಡುಗೆ ನೀಡಿದ್ದ ಮುಸ್ಲಿಂ ಶಿಕ್ಷಣ ತಜ್ಞರನ್ನು ಹಾಗೂ ಎಡಪಂಥೀಯರ ವಿರುದ್ದ ಅವರು ಟ್ವಿಟ್ಟರ್‌ನಲ್ಲಿ ಅವಹೇಳನಕಾರಿ ಭಾಷೆ ಬಳಸಿ ಟೀಕಿಸಿದ್ದರು.

ಅಲ್ಲದೆ ಆರೆಸ್ಸೆಸ್‌ ಮತ್ತು ಬಿಜೆಪಿ ಭಾರತದ ಪುನರ್ ನಿರ್ಮಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಪ್ರಸ್ತುತ ಐಪಿಎಸ್‌ ಸೇವೆಯಲ್ಲಿ ಇರುವ ನಾಗೇಶ್ವರ ರಾವ್ ಹೊಗಳಿದ್ದಾರೆ.

ಇದನ್ನು ಖಂಡಿಸಿರುವ ಬೃಂದಾ ಕಾರಟ್, ಸಾಂವಿಧಾನಿಕ ಹಕ್ಕಿನ ಪ್ರಕಾರ ಒಬ್ಬ ವ್ಯಕ್ತಿಯು ತನ್ನ ಅಭಿಪ್ರಾಯ ಹೇಳುವುದು ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ. ಆದರೆ ನಾಗರಿಕ ಸೇವೆ ಸಲ್ಲಿಸುತ್ತಿರುವ ಅಧಿಕಾರಿಯಾಗಿ, ನಾಗೇಶ್ವರ ರಾವ್ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಐಪಿಸಿಯ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಈ ಅಪರಾಧಗಳಿಗೆ ಅವರು ತಪ್ಪಿತಸ್ಥನಾಗಿದ್ದಾರೆ ಎಂದು ಹೇಳಿದ್ದಾರೆ.

ನಾಗೇಶ್ವರ್‌ ರಾಮ್‌ ಸೇವಾ ನಿಯಮಗಳನ್ನು ಉಲ್ಲಂಘಿಸಿರುವುದು ಅಥವಾ ಕೋಮು ಭಾವನೆಗಳನ್ನು ಪ್ರಚೋದಿಸುವುದು ಇದೇ ಮೊದಲಲ್ಲ ಎಂದು ಅವರು ಹಲವಾರು ಘಟನೆಗಳ ಉದಾಹಣೆ ನೀಡಿದ್ದಾರೆ.

ನಾಗೇಶ್ವರ್‌ ಹೇಳಿಕೆಗಳು ನೋಡಿದರೆ ಜುಲೈ 31 ರಂದು ನಿವೃತ್ತಿಯ ನಂತರ ಬಿಜೆಪಿ ಅಥವಾ ಆರೆಸ್ಸೆಸ್‌‌ಗೆ ಸೇರ್ಪಡೆಗೊಳ್ಳಲು ಅರ್ಹರಾಗಬಹುದು ಎಂದು ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಬಂದಿರುವ ವರದಿಗಳನ್ನು ಉಲ್ಲೇಖಿಸಿರುವ ಬೃಂದಾ ಕಾರಟ್‌, ಸೇವೆ ಸಲ್ಲಿಸುವ ಅಧಿಕಾರಿಯಾಗಿ ನಾಗೇಶ್ವರ್‌ ರಾವ್‌ ಪಕ್ಷಾಪಾತಿ ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ ಸೇವಾ ನಿಯಮಗಳ ಉಲ್ಲಂಘನೆಗಾಗಿ ಅವರ ಮೇಲೆ ಐಪಿಸಿಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಿ ಚಾರ್ಜ್‌ಶೀಟ್ ಹಾಕಬೇಕು ಎಂದು ಬರೆದಿದ್ದಾರೆ.

ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಎಫ್‌ಐಆರ್ ನೋಂದಣಿ ಮಾಡುವಂತೆ ಕೋರಿ ನಾಗೇಶ್ವರ್‌ ರಾವ್‌ ವಿರುದ್ಧ ದೂರು ದಾಖಲಿಸಿರುವ ಬೃಂದಾ ಕಾರಟ್‌, ಅವರ ವಿಚಾರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಗೃಹಸಚಿವರಿಗೆ ವಿನಂತಿಸಿದ್ದಾರೆ.


ಇದನ್ನೂ ಓದಿ: ಡೀಸೆಲ್ ಮೇಲಿನ ವ್ಯಾಟ್ ಕಡಿತ; ದೆಹಲಿಯಲ್ಲಿ ಡೀಸೆಲ್ ಬೆಲೆ ಲೀಟರ್‌ಗೆ 8 ರೂ. ಇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...