Homeಕರ್ನಾಟಕಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ...

ಒಳಮೀಸಲಾತಿ ಕುರಿತು ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿ ಇಂದು ಸಲ್ಲಿಕೆ: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ಕುತೂಹಲ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆಯಾಗಲಿದೆ. ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.

ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದೆ. ಇಂದು ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಸಿದ್ಧತೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಒಳ ಮೀಸಲಾತಿ ವಿಷಯದಿಂದಾಗಿ ಸಾರ್ವಜನಿಕ ಸೇವೆಗಳ ನೇಮಕಾತಿಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ವರದಿ ಸಲ್ಲಿಕೆಯಾದ ನಂತರ ಮತ್ತು ಶಿಫಾರಸುಗಳು ಅಂಗೀಕಾರಗೊಂಡ ನಂತರ ನೇಮಕಾತಿ ಪ್ರಕ್ರಿಯೆ ಪುನರಾರಂಭವಾಗಲಿದೆ.

ಆಯೋಗವು ಮೇ 5 ರಿಂದ 3 ತಿಂಗಳ ಸಮೀಕ್ಷೆ ನಡೆಸಿದ್ದು, ರಾಜ್ಯದಲ್ಲಿನ 1.16 ಕೋಟಿ ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 93 ರಷ್ಟು ಜನರನ್ನು ಗುರುತಿಸಿದೆ. ಆದರೆ, ಬೆಂಗಳೂರು ನಗರದಲ್ಲಿ ಮಾತ್ರ ಸಮೀಕ್ಷೆ ನಿಧಾನವಾಗಿದ್ದು, ಇಲ್ಲಿನ 13.62 ಲಕ್ಷ ಅಂದಾಜು ಪರಿಶಿಷ್ಟ ಜಾತಿ ಜನಸಂಖ್ಯೆಯ ಪೈಕಿ ಶೇ. 53 ರಷ್ಟು ಜನರನ್ನು ಮಾತ್ರ ಗುರುತಿಸಲಾಗಿದೆ.

ಸುಪ್ರೀಂ ಕೋರ್ಟ್ ಆಗಸ್ಟ್ 2024 ರಲ್ಲಿ ನೀಡಿದ ತೀರ್ಪಿನ ನಂತರ ರಾಜ್ಯ ಸರ್ಕಾರ ಈ ಆಯೋಗವನ್ನು ರಚಿಸಿತ್ತು. ಈ ತೀರ್ಪು ರಾಜ್ಯದಲ್ಲಿನ 101 ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ಅವಕಾಶ ಮಾಡಿಕೊಟ್ಟಿತ್ತು. ದಲಿತ ಎಡ (ಮಾದಿಗ) ಸಮುದಾಯಗಳು ಒಳ ಮೀಸಲಾತಿಗೆ ಪ್ರಮುಖ ಬೇಡಿಕೆ ಇಟ್ಟಿದ್ದು, ಮೀಸಲಾತಿ ಸೌಲಭ್ಯಗಳು ಇದುವರೆಗೆ ದಲಿತ ಬಲ (ಹೊಲೆಯ), ಭೋವಿ ಮತ್ತು ಲಂಬಾಣಿ ಸಮುದಾಯಗಳಿಗೆ ಮಾತ್ರ ದೊರೆತಿವೆ ಎಂದು ಆರೋಪಿಸಿವೆ.

ಒಳಮೀಸಲಾತಿ ಸಮೀಕ್ಷಾ ಅಂತಿಮ ವರದಿಯನ್ನು ಇಂದು ಸಲ್ಲಿಕೆಯಾಗಲಿದೆ. ಕೂಡಲೇ ಮುಂದಿನ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆಯಾಗಿ ಜಾರಿಯಾಗಲೇಬೇಕು.

ಒಂದು ವೇಳೆ ಉಪ ಸಮಿತಿನೋ ಮತ್ತೊಂದೊ ಮಾಡುವ ಪ್ರಯತ್ನವನ್ನೇನಾದರೂ ಸರ್ಕಾರ ಮಾಡುವ ಪ್ರಯತ್ನ ಮಾಡಿದರೆ ನಿಜಕ್ಕೂ ಮೀಸಲಾತಿ ವಿರೋಧಿ ಬಿಜೆಪಿ ಸಂಘಪರಿವಾರದ ಖೂಳರು ಇದರ ಎಲ್ಲಾ ಲಾಭವನ್ನು ಪಡೆದೇ ಪಡೆಯುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಮತ್ತೆ ಬಿಜೆಪಿಯ ಸಂಘಪರಿವಾರದ ಖೂಳರು ಇದರ ಲಾಭ ಪಡೆಯುತ್ತಾರೆಂದ ಒಳಮೀಸಲಾತಿ ಮಾಡಬೇಕಿಲ್ಲ.  35 ವರ್ಷಗಳ ನ್ಯಾಯದ ಬೇಡಿಕೆ ಇದು. ಇದನ್ನು ಜಾರಿ ಮಾಡಬೇಕಿರುವುದು ಕಾಂಗ್ರೆಸ್ ನ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಒಳಮೀಸಲಾತಿ ಪರ ಹೋರಾಟಗಾರ ಚಂದ್ರು ತರಹುಣಸೆ ತಿಳಿಸಿದ್ದಾರೆ.

ಒಳಮಿಸಲಾತಿ ವರದಿ ಸಲ್ಲಿಸಲು ಇಂದಿಗೆ (ಜು.4) ಸಮಯ ನಿಗದಿಯಾಗಿದೆ. ಹಾಗಂತ ಇದಕ್ಕಾಗಿ ಸಂಭ್ರಮಿಸಬೇಕಿಲ್ಲ ಮತ್ತು ಮೈ ಮರೆಯಬೇಕಿಲ್ಲ. ವರದಿ ಜಾರಿ ಆಗಿ ಸರ್ಕಾರದ ಆದೇಶದ ಪ್ರತಿ ಕೈ ಸೇರುವವರೆಗೂ ಸರ್ಕಾರದ ಮೇಲೆ ಒತ್ತಡ ನಿರಂತರವಾಗಿರಲಿ ಮತ್ತು ಒಳಮೀಸಲಾತಿ ಜಾರಿ ಪ್ರಮಾಣದಲ್ಲಿ ಅಂದರೇ ಪರ್ಸಂಟೇಜ್ ಹಂಚಿಕೆ ವಿಚಾರದಲ್ಲಿ ಯಾವ ಮೋಸ, ಅನ್ಯಾಯ ಆಗದಂತೆ ಹಕ್ಕೊತ್ತಾಯ ನಿರಂತರವಾಗಿರಲಿ. ಕಳೆದ ಮುವ್ವತೈದು ವರ್ಷಗಳಲ್ಲಿ ಆದ ಅದೆಷ್ಟೋ ನಂಬಿಕೆ ದ್ರೋಹಗಳು ಇನ್ನೂ ನಮ್ಮ ಕಣ್ಣಿಗೆ ಕಟ್ಟಿದಂತಿರುವಾಗ ಮತ್ತೊಂದು ನಂಬಿಕೆ ದ್ರೋಹ ಆಗದಂತೆ ಜಾಗ್ರತೆ ವಹಿಸೋಣ. ಸಂಭ್ರಮ ಅಂತ ಮೈ ಮರೆತು ಬಿಡೋದು ಬೇಡ. ಸದಾಶಿವ ಆಯೋಗದ ವರದಿ ಸಲ್ಲಿಕೆಯಾದಾಗ ಮತ್ತು ಮಾದುಸ್ವಾಮಿ ವರದಿ ಸಲ್ಲಿಕೆಯಾದಾಗಲೂ ಹೀಗೆಯೇ ಸಂಭ್ರಮ ಪಟ್ಟಿದ್ದು. ಕೊನೆಗೆ ಏನಾಯಿತೆಂಬ ಉದಾಹರಣೆಗೆ ನಾವೆ ಜೀವಂತ ಸಾಕ್ಷಿಗಳು ಇದ್ದೇವೆಯಲ್ಲ ಎಂದು ಹೋರಾಟಗಾರ ಬಿ ಆರ್ ಭಾಸ್ಕರ್ ಪ್ರಸಾದ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅಭಿಪ್ರಾಯಿಸಿದ್ದಾರೆ.

ಸೇನಾ ಅಧಿಕಾರಿಯಿಂದ ಸ್ಪೈಸ್‌ಜೆಟ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ: ಪಂಚ್‌ಗಳಿಂದ ಹೊಡೆತ, ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದ ನೌಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...