Homeಕರ್ನಾಟಕನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ - ಬಿಕೆ ಹರಿಪ್ರಸಾದ್

ನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ – ಬಿಕೆ ಹರಿಪ್ರಸಾದ್

- Advertisement -
- Advertisement -

ಬಿಜೆಪಿ ಶಾಸಕರಿಗೆ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವುದರಲ್ಲೇ ಅತಿ ಪ್ರೀತಿ ಅನಿಸುತ್ತದೆ ಎಂದು ವಿಧಾನ ಪರಿಷತ್‌ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದು, “ಸ್ವಾಮಿ ಅರವಿಂದ ಬೆಲ್ಲದ ಅವರೇ, ಇತಿಹಾಸದ ಗೊತ್ತು ಗುರಿ ಇಲ್ಲದೇ ಪೇಲವ ರೀತಿ ಯಾಕೆ ತೌಡು ಕುಟ್ಟುತ್ತೀರಿ. ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ದೇಶದ ಸಂವಿಧಾನ ರಚನೆಯ ಉದ್ದೇಶ, ದೂರದೃಷ್ಟಿ ಹಾಗೂ ಬಾಬಾ ಸಾಹೇಬರ ಶ್ರಮದ ಬಗ್ಗೆ ಎಳ್ಳಷ್ಟು ತಿಳಿವಳಿಕೆಯೂ ಇಲ್ಲದೆ ಇದ್ದರೆ ನಿಮ್ಮ ಕರ್ಮ. ಆದರೆ ಕನಿಷ್ಠ ಪಕ್ಷ ಸಂವಿಧಾನ ಹಾಗೂ ತುರ್ತುಪರಿಸ್ಥಿತಿಯ ಬಗ್ಗೆ ನಿಮ್ಮ ಪಕ್ಷ ಹಾಗೂ ನಿಮ್ಮ ನಾಯಕರ ನಿಲುವುಗಳ ಇತಿಹಾಸವನ್ನಾದರೂ ಓದಬಾರದೇ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಾಂಗ್ರೆಸ್ ಪಕ್ಷ ಹಾಗೂ ನೆಹರೂ ಅವರ ಮುತುವರ್ಜಿಯಲ್ಲೇ ಬಾಬಾ ಸಾಹೇಬರಿಗೆ ನೀಡಿದ ಜವಾಬ್ದಾರಿಯಿಂದಲೇ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಲು ಸಾಧ್ಯವಾಗಿದೆ. ಅದಕ್ಕೆ ನಡೆದ ಚರ್ಚೆಗಳು, ಸಂವಿಧಾನ ರಚನಾ ಸಮಿತಿಯ ನಡಾವಳಿಗಳು ಕನ್ನಡದಲ್ಲೇ ಪ್ರತಿ ಸಿಗುತ್ತದೆ. ಸಾಧ್ಯವಾದರೆ ಓದುವ ಹವ್ಯಾಸವಾದರೂ ರೂಢಿಸಿಕೊಳ್ಳಿ” ಎಂದು ಅವರು ಲೇವಡಿ ಮಾಡಿದ್ದಾರೆ.

“ಭಾರತ ಸಂವಿಧಾನ ಸ್ವೀಕರಿಸಲು ಅನರ್ಹ” ಎಂಬ ಶೀರ್ಷಿಕೆಯಲ್ಲಿ 1949 ನವೆಂಬರ್ 30ರಂದು ಆರ್ ಎಸ್ ಎಸ್ ನ ಮುಖವಾಣಿ “ಆರ್ಗನೈಸರ್” ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ನೆನಪಿದೆಯೇ? ಆರ್.ಎಸ್.ಎಸ್ ನ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್, ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದ ಇತಿಹಾಸ ಅರಿವಿದೆಯೇ? ಗೋಳ್ವಾಲ್ಕರ್ ಬರೆದ ಆರ್ ಎಸ್ ಎಸ್ ನ “ಧರ್ಮಗ್ರಂಥ” “ಬಂಚ್ ಆಫ್ ಥಾಟ್ಸ್” ಕೃತಿಯಲ್ಲಿ ಸಂವಿಧಾನ , ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ಪರಿವಾರದ ನಿಲುವುಗಳನ್ನು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದೆ” ಎಂದು ಅವರು ಹೀಗೆಳೆದಿದ್ದಾರೆ. ಈ ಪುಸ್ತಕದ ಪ್ರತಿ ಖಾಲಿಯಾಗಿದ್ದರೆ ತರಿಸಿಕೊಡುತ್ತೇನೆ. ಒಮ್ಮೆ ಓದಿ ಇದರ ನಿಲುವಿಗೆ ವಿರುದ್ಧವಾಗಿದ್ದೇನೆ ಎಂದು ಹೇಳುವ ಧೈರ್ಯ ಮಾಡುತ್ತೀರಾ? ಎಂದು ಹರಿಪ್ರಸಾದ್ ಅವರು ಸವಾಲು ಹಾಕಿದ್ದಾರೆ.

ಬೆಲ್ಲದ ಅವರೇ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಹೆಸರುವಾಸಿಯಾಗಿರುವ ಸಾವರ್ಕರ್ ಭಾರತಕ್ಕೆ ಮನುಸ್ಮೃತಿಯೇ ಶ್ರೇಷ್ಠ, ಈ ದೇಶ ಮುಂದಿನ ನಡೆಗಳು‌ ಮನುಸ್ಮೃತಿಯನ್ನೇ ಅನುಸರಿಸಬೇಕು ಎಂದು 1932 ತಮ್ಮ “ಕಿರ್ಲೋಸ್ಕರ್” ಲೇಖನದಲ್ಲಿ ಬರೆದಿದ್ದಾರೆ. ಈ ನಿಲುವಿನ ವಿರುದ್ಧ ನಾನಿದ್ದೇನೆ ಎಂದು ಹೇಳುವ ಕಿಂಚಿತ್ತಾದರೂ ಧೈರ್ಯ ಉಳಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

“ನೆಹರೂ ಅವರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ನಿಮ್ಮ ಸಂಘದ ಶ್ಯಾಮ ಪ್ರಸಾದ್ ಮುಖರ್ಜಿಯ ಗೃಹ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸದೆ ಸಂವಿಧಾನಕ್ಕೆ ಅಪಚಾರ ಮಾಡಿ, ಮೂರು ಸಂಖ್ಯೆಗಳು ನಮಗೆ ಅಪಶಕುನ ಎಂದಿದ್ದು ನೆನಪಿದೆಯೇ? ಭಾರತೀಯ ನಾಯಕರು ನಮ್ಮ ಕೈಗೆ ತ್ರಿವರ್ಣ ಧ್ವಜವನ್ನು ಕೊಡಬಹುದು. ಆದರೆ ನಾವ್ಯಾವತ್ತೂ ಅದನ್ನು ಗೌರವಿಸುವುದಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳುವುದೂ ಇಲ್ಲ. ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ‘ದಿ ಆರ್ಗನೈಸರ್’ ಪತ್ರಿಕೆಯಲ್ಲಿ ಬರೆದುಕೊಂಡಿದ್ದರ ಪ್ರತಿ ಇದ್ದರೆ ಒಮ್ಮೆ ಓದಿಕೊಳ್ಳಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ತುರ್ತುಸ್ಥಿತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬೆಲ್ಲದ ಅವರಿಗೆ ತಮ್ಮ ನಾಯಕ ವಾಜಪೇಯಿಯವರು ತುರ್ತು ಪರಿಸ್ಥಿತಿ ಬೆಂಬಲಿಸಿ ಮುಚ್ಚಳಿಕೆ ಬರೆದು ಕೊಟ್ಟು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದು ನೆನಪಿಲ್ಲವೇ? ಇಡೀ ಸಂಘ ಪರಿವಾರದ ಮುಂಚೂಣಿಯ ನಾಯಕರು ತುರ್ತುಸ್ಥಿತಿ ಬೆಂಬಲಿಸಿ ನಡೆಸಿದ ಸಭೆಗಳು ಗುಪ್ತವಾಗಿ ಉಳಿಯಲು ಸಾಧ್ಯವೇ? ಈ ದಾಖಲೆಗಳು ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಣೆಯಾಗಿದ್ದರೆ ಬಿಡುವು ಮಾಡಿಕೊಂಡು ನಿಮ್ಮದೇ ಪಕ್ಷದ ನಾಯಕ ಸುಬ್ರಮಣ್ಯ ಸ್ವಾಮಿಯವರ ಸಾಮಾಜಿಕ ಜಾಲತಾಣವನ್ನೊಮ್ಮೆ ಕಣ್ಣಾಡಿಸಿ, ಕಣ್ಣೀರಾದರೂ ಉಳಿದೀತು” ಎಂದು ಅವರು ಹೇಳಿದ್ದಾರೆ.

“ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂವಿಧಾನವೇ ನೀಡಿರುವ ಆರ್ಟಿಕಲ್ 368 ಹಕ್ಕಿನ ಪರವಾಗಿ ಕಾಂಗ್ರೆಸ್ ಪಕ್ಷ ಇದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬದಲಾಯಿಸುವ ನಿಲುವು ಹೊಂದಿದೆ. ಸಂವಿಧಾನ ತಿದ್ದುಪಡಿಗೂ, ಬದಲಾವಣೆಗೂ ಭಾರಿ ಅಂತರವಿದೆ. ಈ ನೆಲದ ಕಾನೂನಿಗೆ ಅತೀತರಾಗಿದ್ದೇವೆ, ಜನೋಪಕಾರಿ ನಿಲುವುಗಳನ್ನು ತೆಗೆದುಕೊಳ್ಳಲು ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿದ್ದೇವೆ. ಕಳೆದ 75 ವರ್ಷಗಳಲ್ಲಿ 106 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ. 70ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಆಡಳಿತದಲ್ಲಿ ಹಾಗೂ 36ಕ್ಕೂ ಹೆಚ್ಚು ಬಾರಿ ಕಾಂಗ್ರೇಸತರ ಸರ್ಕಾರದ ಆಡಳಿತದಲ್ಲಿ ತಿದ್ದುಪಡಿಗಳಾಗಿದೆ” ಎಂದು ಅವರು ವಿವರಿಸಿದ್ದಾರೆ.

“ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ತಿದ್ದುಪಡಿ ಮಾಡುವುದು ಆಯಾ ಕಾಲಘಟ್ಟದ ಜನರ ಹಕ್ಕು ಮತ್ತು ಅಧಿಕಾರ” ಎಂದು ಬಾಬಾ ಸಾಹೇಬರು 1949 ಜನವರಿ 25ರ ಭಾಷಣದಲ್ಲಿಯೂ ಸ್ಪಷ್ಟಪಡಿಸಿದ್ದಾರೆ. ಒಮ್ಮೆ ಅಂಬೇಡ್ಕರ್ ಭಾಷಣ ಮತ್ತು ಬರಹ ಪುಸ್ತಕದ ಪುಟಗಳನ್ನು ತಿರುವಿ ಹಾಕಿ. ಜನಪರವಲ್ಲದ, ಒಂದಿಷ್ಟು ಕಾನೂನುಗಳಿಗೆ ತೊಡಕು ಆಗಲಿದೆ ಎಂದರೆ ಅದನ್ನು ಪ್ರತಿಭಟಿಸುವ ಹಾಗೂ ವಿರೋಧ ವ್ಯಕ್ತಪಡಿಸುವ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮಲ್ಲಿ ಉಳಿಸಿಕೊಂಡಿದ್ದೇವೆ. ಆದರೆ ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ಕೊನೆಯದಾಗಿ ಬೆಲ್ಲದ ಅವರೇ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರುವ ಸಂಘಪರಿವಾರದ ಹೋರಾಟಕ್ಕೆ ನಿಮ್ಮ ಬೆಂಬಲವೂ ಇದ್ದರೇ, ಕಬ್ಬನ್ನು ಹಿಂಡಿ ಹಿಪ್ಪೆ ಮಾಡಿ ನೊಣ, ಇರುವೆಗಳಂತೆ ಶೂದ್ರರು, ದಲಿತರ , ಬಹುಜನರಿಗೆ ಹಂಚುತ್ತಾರೆ. ಆಗ ಕಬ್ಬಿನ ಸಿಪ್ಪೆ ಮಾತ್ರ ನಿಮಗೆ, ‘ಬೆಲ್ಲ’ ದ ರುಚಿ ಮಾತ್ರ ಪರಿವಾರದ್ದು ಸ್ವಲ್ಪ ಜಾಗೃತೆ ಇರಲಿ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...