Homeಮುಖಪುಟನಾಗ್ಪುರ ಸ್ಥಳೀಯ ಚುನಾವಣೆ: ಬಿಜೆಪಿಗೆ ಭಾರಿ ಹಿನ್ನಡೆ, ಕಾಂಗ್ರೆಸ್ ಗೆ ಭರ್ಜರಿ ಗೆಲುವು

ನಾಗ್ಪುರ ಸ್ಥಳೀಯ ಚುನಾವಣೆ: ಬಿಜೆಪಿಗೆ ಭಾರಿ ಹಿನ್ನಡೆ, ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರೆಸ್ಸೆಸ್‌‌ನ ಪ್ರಧಾನ ಕಛೇರಿ ಕೂಡಾ ನಾಗ್ಪುರದಲ್ಲಿದೆ

- Advertisement -
- Advertisement -

ಆರೆಸ್ಸೆಸ್‌‌ನ ಕೇಂದ್ರ ಕಚೇರಿ ಇರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಪಂಚಾಯತ್ ಸಮಿತಿಯ ಚುನಾವಣೆಯಲ್ಲಿ ಅಧ್ಯಕ್ಷರು ಮತ್ತು ಉಫಾಧ್ಯಕ್ಷರ ಹುದ್ದೆಗಳಿಗೆ ನಡೆದ ಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದೆ.

ಬಿಜೆಪಿ ಒಂದೇ ಒಂದು ಅಧ್ಯಕ್ಷ ಸ್ಥಾನವನ್ನು ಗೆದ್ದಿಲ್ಲ ಎಂದು ವರದಿಯಾಗಿದ್ದು, ಕೇವಲ ಮೂರು ಉಪಾಧ್ಯಕ್ಷ ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಕೊಂಡಿದೆ. ಶನಿವಾರ ನಡೆದ ಸ್ಥಳೀಯ ಚುನಾವಣೆಯಲ್ಲಿ ಜನರು ಮತ ಚಲಾಯಿಸಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಗ್ಪುರವು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಅವರ ತವರು ಕ್ಷೇತ್ರವಾಗಿದೆ. ಜೊತೆಗೆ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರೆಸ್ಸೆಸ್‌‌ನ ಪ್ರಧಾನ ಕಛೇರಿ ಕೂಡಾ ನಾಗ್ಪುರದಲ್ಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಚುನಾವಣೆ: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ಗೆಲುವಿಗಾಗಿ ನಾಮಪತ್ರ ಹಿಂಪಡೆದ ಬಿಜೆಪಿ

ನಾಗ್ಪುರದ 13 ಪಂಚಾಯತ್‌‌ ಅಧ್ಯಕ್ಷ ಸ್ಥಾನಗಳಲ್ಲಿ ಒಂಬತ್ತು ಮತ್ತು 13 ಉಪಾಧ್ಯಕ್ಷ ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಎನ್‌ಸಿಪಿ ಮೂರು ಅಧ್ಯಕ್ಷ ಸ್ಥಾನಗಳನ್ನು ಗೆದ್ದರೆ, ಶಿವಸೇನೆ ಒಂದು ಹುದ್ದೆಯನ್ನು ಗೆದ್ದಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಹಿರಿಯ ನಾಯಕರಾದ ನಿತಿನ್ ಗಡ್ಕರಿ, ದೇವೇಂದ್ರ ಫಡ್ನವಿಸ್ ಮತ್ತು ಚಂದ್ರಶೇಖರ್ ಬಾವಂಕುಲೆ ಅವರ ತವರು ನೆಲದಲ್ಲಿ ಪಕ್ಷವು ಸೋಲನ್ನು ಎದುರಿಸುತ್ತಿರುವಂತೆ ಪಂಚಾಯತ್ ಸಮಿತಿ ಫಲಿತಾಂಶಗಳು ಬಿಜೆಪಿ ಕಾರ್ಯಕರ್ತರನ್ನು ಹತಾಶಗೊಳಿಸಿವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಗ್ರಾಮೀಣ ಘಟಕದ ಮುಖ್ಯಸ್ಥ ರಾಜೇಂದ್ರ ಮುಲಾಕ್ ಪಿಟಿಐಗೆ ತಿಳಿಸಿದ್ದಾರೆ.

ಸೋಲು ಗೆಲುವು ನಡೆಯುತ್ತಲೇ ಇರುತ್ತವೆ, ಆದರೆ ಅವರು ಸೋತಿರುವ ರೀತಿ ನೋಡಿದರೆ ಜಿಲ್ಲೆಯಲ್ಲಿ ಬಿಜೆಪಿ ಕಾರ‌್ಯಕರ್ತರಿಗೆ ಹಿಡಿತವಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ಗ್ರಾಮ ಪಂಚಾಯಿತಿಗಳ ಸರಪಂಚ್ ಮತ್ತು ಸದಸ್ಯರ ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಮತದಾನ ಮತ್ತು ಮತ ಎಣಿಕೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

0
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ? ಹೌದು ಈಗೊಂದು ಆರೋಪವನ್ನು ಸ್ಪರ್ಧೆಯ ಆಕಾಂಕ್ಷಿಗಳಾಗಿದ್ದ ಹಲವು ಅಭ್ಯರ್ಥಿಗಳು ಮಾಡಿದ್ದಾರೆ. ವಾರಾಣಾಸಿಯಲ್ಲಿ ಚುನಾವಣಾಧಿಕಾರಿಗಳು ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದ...