HomeUncategorizedನಾಗುಪುರ ವಿವಿ MA ಪಠ್ಯಪುಸ್ತಕದಲ್ಲಿ ಬಿಜೆಪಿ ಇತಿಹಾಸ ಸೇರ್ಪಡೆ

ನಾಗುಪುರ ವಿವಿ MA ಪಠ್ಯಪುಸ್ತಕದಲ್ಲಿ ಬಿಜೆಪಿ ಇತಿಹಾಸ ಸೇರ್ಪಡೆ

- Advertisement -
- Advertisement -

ನಾಗ್ಪುರ ವಿಶ್ವವಿದ್ಯಾನಿಲಯವು ಎಂಎ ನಾಲ್ಕನೇ ಸೆಮಿಸ್ಟರ್‌ ಪಠ್ಯಪುಸ್ತಕದಲ್ಲಿ ಬಿಜೆಪಿಯ ಇತಿಹಾಸ ಮತ್ತು ರಾಮಜನ್ಮ ಭೂಮಿ ವಿವಾದದ ಕುರಿತು ಪಠ್ಯವನ್ನು ಸೇರ್ಪಡೆ ಮಾಡಲು ಮುಂದಾಗಿದೆ.

ವರದಿ ಪ್ರಕಾರ,  ಕಮ್ಯುನಿಸ್ಟ್ ಪಕ್ಷದ ಇತಿಹಾಸವನ್ನು ರಾಷ್ಟ್ರೀಯ ಪಕ್ಷದಿಂದ ತೆಗೆದುಹಾಕಲಾಗಿದೆ ಮತ್ತು  ಬಿಜೆಪಿಯ ಇತಿಹಾಸವನ್ನು ಸೇರಿಸಲಾಗುತ್ತಿದೆ.

ನಾಗಪುರ  ವಿವಿ ಎಂದು ಕರೆಯಲ್ಪಡುವ  ರಾಷ್ಟ್ರಸಂತ್ ತುಕ್ಡೋಜಿ ಮಹಾರಾಜ್ ವಿಶ್ವವಿದ್ಯಾನಿಲಯದಲ್ಲಿ ನಾಲ್ಕನೇ ಸೆಮಿಸ್ಟರ್ MAನಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಜನತಾ ಪಕ್ಷ ಮತ್ತು ರಾಮ ಜನ್ಮಭೂಮಿ ಕುರಿತ ಪಠ್ಯವನ್ನು ಇತಿಹಾಸ ಪಾಠಪುಸ್ತಕದಲ್ಲಿ ಸೇರಿಸಲಾಗುವುದು ಎಂದು  ವಿವಿಯ ಇತಿಹಾಸ ವಿಭಾಗ ಹೇಳಿದೆ. ಈ ಕುರಿತ ಪ್ರಸ್ತಾವನೆಗೆ ನಾಗಪುರ ವಿವಿ ಇತಿಹಾಸ ವಿಭಾಗ ಸಮ್ಮತಿಯನ್ನು ನೀಡಿದೆ.

ಇದೇ ಮೊದಲ ಬಾರಿಗೆ ನಾಗ್ಪುರ ವಿಶ್ವವಿದ್ಯಾನಿಲಯವು ಹೊಸ ಪಠ್ಯಕ್ರಮದ ಮೂಲಕ ಬಿಜೆಪಿಯ ಇತಿಹಾಸವನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಮುಂದಾಗಿದೆ.

ಇನ್ನು ಮುಂದೆ ನಾಗ್ಪುರ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಪಕ್ಷದ ಇತಿಹಾಸದ ಪಠ್ಯದಲ್ಲಿ ಕಮ್ಯುನಿಸ್ಟ್ ಪಕ್ಷದ ಇತಿಹಾಸವನ್ನು ಕಲಿಸಲಾಗುವುದಿಲ್ಲ. ಬದಲಿಗೆ ಬಿಜೆಪಿ ಇತಿಹಾಸವನ್ನು ಬೋಧಿಸಲಿದ್ದಾರೆ.

ಇದೇ ವಿವಿಯಲ್ಲಿ 2019ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಇತಿಹಾಸವನ್ನು ಬಿಎ ಪಠ್ಯಕ್ರಮದಲ್ಲಿ ಸೇರಿಸಲಾಗಿತ್ತು.

ಹೊಸ ಪಠ್ಯದಲ್ಲಿ ಜನಸಂಘ, ಭಾರತೀಯ ಜನತಾ ಪಕ್ಷದ ಕೆಲಸ ಏನು? ಪಕ್ಷವನ್ನು ಹೇಗೆ ರಚಿಸಲಾಯಿತು? ಅದು ಹೇಗೆ ಸ್ಥಿರ ಸರ್ಕಾರವನ್ನು ನೀಡಿದೆ ಇತ್ಯಾದಿಗಳನ್ನು ಬೋಧಿಸಲಾಗುತ್ತಿದೆ. ಈ ಕೋರ್ಸ್‌ನ್ನು ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿ ಇರಿಸಲಾಗಿದೆ.

ನಾಗಪುರ ವಿವಿಯ ಈ ನಿರ್ಧಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಭಾರತೀಯ ಜನತಾ ಪಕ್ಷದ ಇತಿಹಾಸವು ಓದಲು ಅಥವಾ ಬರೆಯಲು ಯೋಗ್ಯವಾಗಿಲ್ಲ ಎಂದು ಹೇಳಿದೆ.

ಇದನ್ನು ಓದಿ: ಮಧ್ಯಪ್ರದೇಶ: ಮಹಿಳೆಗೆ ಥಳಿಸಿದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...