Homeಮುಖಪುಟನಾಗ್ಪುರ ಹಿಂಸಾಚಾರ | ಬಜರಂಗದಳ, ವಿಹೆಚ್‌ಪಿ ಕಾರ್ಯಕರ್ತರು ಸೇರಿ 78 ಮಂದಿಯ ಬಂಧನ

ನಾಗ್ಪುರ ಹಿಂಸಾಚಾರ | ಬಜರಂಗದಳ, ವಿಹೆಚ್‌ಪಿ ಕಾರ್ಯಕರ್ತರು ಸೇರಿ 78 ಮಂದಿಯ ಬಂಧನ

- Advertisement -
- Advertisement -

ಕಳೆದ ಸೋಮವಾರ (ಮಾ.17) ರಾತ್ರಿ ಹಿಂಸಾಚಾರ ನಡೆದ ಮಹಾರಾಷ್ಟ್ರದ ನಾಗ್ಪುರ ನಗರದ ವಿವಿಧ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿದಿದ್ದು, ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಜರಂಗದಳ ಮತ್ತು ವಿಎಚ್‌ಪಿಯ ಎಂಟು ಸದಸ್ಯರು ಸೇರಿದಂತೆ 78 ಜನರನ್ನು ಪೊಲೀಸರು ಬಂಧಿಸಿದ್ದಾರೆ.

“ಗಲಭೆಯ ಹಿಂದಿನ ಪ್ರಮುಖ ಆರೋಪಿ ಎಂದು ಪೊಲೀಸರು ಗುರುತಿಸಿರುವ 38 ವರ್ಷದ ಫಾಹೀಮ್ ಖಾನ್ ಅವರನ್ನು ನಗರದ ಅವರ ಮನೆಯಿಂದ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬುರ್ಖಾ ಮಾರಾಟಗಾರ ಹಾಗೂ ಸೈಕಲ್ ರಿಪೇರಿ ಅಂಗಡಿ ಮಾಲೀಕರ ಮಗನಾಗಿರುವ ಖಾನ್, 2024ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಸ್ಪರ್ಧಿಸಿ 1,000 ಮತಗಳನ್ನು ಗಳಿಸಿದ್ದರು” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿಯನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿ ಬಜರಂಗದಳ ಮತ್ತು ವಿಎಚ್‌ಪಿ ನಡೆಸಿದ ಪ್ರತಿಭಟನೆ ವೇಳೆ ಔರಂಗಜೇಬ್ ಪ್ರತಿಕೃತಿ ಮತ್ತು ಮುಸ್ಲಿಮರ ಧಾರ್ಮಿಕ ಚಾದರ್ ಸುಟ್ಟಿದ್ದಕ್ಕಾಗಿ ದೂರು ದಾಖಲಿಸಲು ನಾಗ್ಪುರದ ಗಣೇಶಪೇಟೆ ಪೊಲೀಸ್ ಠಾಣೆಗೆ ತೆರಳಿದ್ದ ಜನರ ಗುಂಪಿ ನೇತೃತ್ವವನ್ನು ಫಾಹೀಮ್ ಖಾನ್ ವಹಿಸಿದ್ದರು ಎಂದು ವರದಿ ಹೇಳಿದೆ.

ಪೊಲೀಸ್ ಠಾಣೆಯಿಂದ ಹೊರಬಂದ ಸ್ವಲ್ಪ ಸಮಯದ ನಂತರ, ಪ್ರತಿಭಟನೆ ಹಮ್ಮಿಕೊಂಡಿದ್ದ ಬಜರಂಗದಳ ಮತ್ತು ವಿಹೆಚ್‌ಪಿ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರನ್ನು ದೂಷಿಸುವ ಮತ್ತು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಟೀಕಿಸುವ ವಿಡಿಯೋವನ್ನು ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ತ್ವರಿತವಾಗಿ ವೈರಲ್ ಆಗಿದ್ದು, ಇದು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಿಂದ ಕೇವಲ 2 ಕಿಮೀ ದೂರದಲ್ಲಿರುವ ಕೇಂದ್ರ ನಾಗ್ಪುರದ ಮಹಲ್‌ ಪ್ರದೇಶದಲ್ಲಿ ಗಲಭೆಗೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಗಣೇಶಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸುವ ಮುನ್ನವೇ ಎಂಟು ಮಂದಿ ಬಜರಂಗದಳ ಮತ್ತು ವಿಎಚ್‌ಪಿ ಸದಸ್ಯರು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಆದರೆ, ಒಂಬತ್ತು ಗಂಟೆಗಳ ವಿಚಾರಣೆಯ ನಂತರ ಇತರ 27 ಮಂದಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಹಿಂಸಾಚಾರದ ವೇಳೆ ತೀವ್ರವಾಗಿ ಗಾಯಗೊಂಡ ಒಬ್ಬರು ಅಪ್ರಾಪ್ತ ಮತ್ತು ವೆಂಟಿಲೇಟರ್ ಸಹಾಯದಲ್ಲಿರುವ 40 ವರ್ಷದ ವ್ಯಕ್ತಿ ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ. ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾದ ಆರು ಪ್ರಕರಣಗಳ ಶಂಕಿತರಿಗಾಗಿ ಹುಡುಕಾಟವನ್ನು ವಿಸ್ತರಿಸುವುದರ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಮತ್ತು ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ನಗರದಾದ್ಯಂತ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಪೊಲೀಸರು 1,200ಕ್ಕೂ ಹೆಚ್ಚು ಜನರ ಮೇಲೆ ವಿವಿಧ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯ ನಾಗ್ಪುರದಲ್ಲಿ ಹಿಂಸಾಚಾರ ನಡೆದ ಪ್ರದೇಶಗಳ 70 ಸೇರಿದಂತೆ ಕನಿಷ್ಠ 1,500 ಕಣ್ಗಾವಲು ಕ್ಯಾಮರಾಗಳ ವೈಫಲ್ಯ ಪೊಲೀಸರು ಪ್ರಯತ್ನಗಳಿಗೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ.

11 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ನಿರ್ಬಂಧಗಳನ್ನು ತೆಗೆದುಹಾಕುವಂತೆ ವ್ಯಾಪಾರ ಗುಂಪುಗಳು ಮತ್ತು ಇತರ ಸಮುದಾಯ ಸಂಘಟನೆಗಳಿಂದ ಒತ್ತಡ ಹೆಚ್ಚಾಗಿದ್ದು, ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಗುರುವಾರ ಅಧಿಕಾರಿಗಳು ಕರ್ಫ್ಯೂ ನಿರ್ಬಂಧವನ್ನು ಮರುಪರಿಶೀಲಿಸುವ ನಿರೀಕ್ಷೆಯಿದೆ.

ಆಪಾದಿತ ಮಾಸ್ಟರ್ ಮೈಂಡ್ ಫಾಹೀಮ್ ಖಾನ್ ಈ ಹಿಂದೆ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ಆಯೋಜಿಸಿದ್ದರು. ಅವರ ವಿರುದ್ದ ದ್ವೇಷ ಭಾಷಣದ ಆರೋಪ ಹೊರಿಸಲಾಗಿತ್ತು. ಕಾಲೇಜು ಬಿಟ್ಟಿರುವ ಅವರು, 2019 ರಿಂದ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ಸುನ್ನಿ ಯೂಥ್ ಫೋರ್ಸ್‌ನೊಂದಿಗೆ ಸಂಯೋಜಿತವಾಗಿರುವ ಮೈನಾರಿಟಿ ಡೆಮಾಕ್ರಟಿಕ್ ಪಾರ್ಟಿಯ (MDP)ಸ್ಥಾಪಕ-ಸದಸ್ಯರಾಗಿದ್ದಾರೆ.

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...