Homeಮುಖಪುಟಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

- Advertisement -
- Advertisement -

ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹವೊಂದು ಪತ್ತೆಯಾಗಿದೆ. ಮೃತದೇಹ ಯಾರದ್ದು ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕೆಲವು ಮೂಲಗಳ ಪ್ರಕಾರ ಮೃತ ವ್ಯಕ್ತಿ ಸುಧಾಂಗ್ಶು ದಾಸ್ ಎಂದು ಹೇಳಲಾಗುತ್ತಿದ್ದರೂ, ಪೊಲೀಸರು ಖಚಿತಪಡಿಸಿಲ್ಲ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕ್ಯಾಚಾರ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ”ಯಾರಾದರೂ ಸತ್ತ ವ್ಯಕ್ತಿಯ ಪರಿಚಯವಿದ್ದರೆ, ಅವರು ಮುಂದೆ ಬಂದು ತಿಳಿಸಬೇಕು ಎಂದು ಜನರಿಗೆ ಮನವಿ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

”ಯಾವ ಸಂದರ್ಭದಲ್ಲಿ ಈ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುದೂ ತಿಳಿದಿಲ್ಲ. ಆದರೆ ಶವಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವ್ಯಕ್ತಿ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾನೆಯೇ ಅಥವಾ ಅವನನ್ನು ಕೊಲೆ ಮಾಡಲಾಗಿದೆಯಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಕ್ಯಾಚಾರ್‌ನ ಪೊಲೀಸ್ ಅಧೀಕ್ಷಕ ನುಮಲ್ ಮಹತ್ತಾ ಮಾತನಾಡಿ, ”ತನಿಖೆ ನಡೆಯುತ್ತಿದೆ ಮತ್ತು ಸಾಧ್ಯವಿರುವ ಎಲ್ಲ ದೃಷ್ಟಿಕೋನಗಳಲ್ಲೂ ವಿಚಾರಣೆ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಮೃತ ವ್ಯಕ್ತಿ ಸುಧಾಂಗ್ಶು ದಾಸ್ ಕಳೆದ ಒಂದು ವರ್ಷದಿಂದ ನಂಟು ರಾಯ್ ಎನ್ನುವವರೊಂದಿಗೆ ಕೆಲಸ ಮಾಡಿದ್ದಾರೆ ಎಂದು ವರದಿಯಾಗಿದೆ. ನಂಟು ರಾಯ್ ಕ್ಯಾಂಟೀನ್ ಉದ್ಯೋಗಿಯಾಗಿದ್ದು, ಮೃತ ವ್ಯಕ್ತಿಯು ಮಲಗಿದ್ದ ಕೊಠಡಿಯು ಮುಚ್ಚಿದ್ದರಿಂದ ತೆರೆಯಲು ಸಾಧ್ಯವಾಗದಿದ್ದಾರೆ ಬಿಜೆಪಿ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ.

ದಾಸ್ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ ಅಥವಾ ಬುಧವಾರ ರಾತ್ರಿ ಕಚೇರಿಯಲ್ಲಿ ಮಲಗಿದ್ದಾನೆ ಎಂಬುದು ತನಗೆ ತಿಳಿದಿರಲಿಲ್ಲ ಎಂದು ಬಿಮಲೇಂದು ರಾಯ್ ಹೇಳಿದ್ದಾರೆ. ದಾಸ್ ಬಿಜೆಪಿ ಕಚೇರಿಯ ಉದ್ಯೋಗಿ ಅಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

”ಪ್ರತಿದಿನದಂತೆ ಬೆಳಿಗ್ಗೆ ಕೊಠಡಿಯನ್ನು ತೆರೆಯಲು ಸಾಧ್ಯವಾಗಲಿಲ್ಲ ಎಂದು ನಂಟು ರಾಯ್ ನನಗೆ ಫೋನ್ ಮೂಲಕ ತಿಳಿಸಿದರು. ಆನಂತರ ನಾನು ಪೊಲೀಸರಿಗೆ ತಿಳಿಸಿದೆ, ಬಾಗಿಲು ಒಡೆದು ತೆರೆದ ನಂತರ ಶವ ಪತ್ತೆಯಾಗಿದೆ” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ತಿಳಿಸಿದ್ದಾರೆ.

ಕ್ಯಾಚಾರ್‌ ಬಿಜೆಪಿ ಕಚೇರಿಯಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಹಾಗೂ ಕಚೇರಿಯ ಮೂಲೆ ಮೂಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಮಧ್ಯೆ, ಮೃತ ವ್ಯಕ್ತಿ ನಂಟು ರಾಯ್‌ಗೆ ಕನಿಷ್ಠ ಒಂದು ವರ್ಷದಿಂದ ಪರಿಚಿತನಾಗಿದ್ದರೂ, ಆ ವ್ಯಕ್ತಿಯ ಸರಿಯಾದ ವಿಳಾಸವನ್ನು ನೀಡಿರಲಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...