Homeಮುಖಪುಟಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚಿನ ವಿಧಾನಸಭಾ ಚುನಾವಣೆಯ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಾಧ್ಯಕ್ಷನಾಗಿ ಎರಡು ವರ್ಷದ ಅವಧಿ ಮುಗಿದಿದೆ. ಚುನಾವಣೆಯ ಕಾರಣಕ್ಕೆ ಮುಂದುವರಿದಿದ್ದೆ. ಈಗ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದಾರೆ.

ಲಿಖಿತ, ಮೌಖಿಕವಾಗಿ ರಾಜೀನಾಮೆ ನೀಡಿದ್ದೇನೆ ಎಂದು ನಳಿನ್ ಕುಮಾರ್ ಕಟೀಲ್ ಬಳ್ಳಾರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಸೋಮಣ್ಣ ಅವರು, ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದಾರೆ.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದ್ದಾರೆ.

ಇದನ್ನೂ ಓದಿ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮಣ್ಣ ಪಟ್ಟು: ಬಿಜೆಪಿಯಲ್ಲಿ ಶುರುವಾಯಿತು ಟೆನ್ಷನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...