HomeಮುಖಪುಟNALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

NALSAR ಘಟಿಕೋತ್ಸವ ವಿವಾದ: ಆಹ್ವಾನ ತಿರಸ್ಕರಿಸಿದ ಸಿಜೆಐ ಸೂರ್ಯಕಾಂತ್!

- Advertisement -
- Advertisement -

ಹೈದರಾಬಾದ್‌ನ ಪ್ರತಿಷ್ಠಿತ NALSAR ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸುವ ಕುರಿತು ಎದ್ದಿದ್ದ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ತಾವು ಈ ಆಹ್ವಾನವನ್ನು ಸ್ವೀಕರಿಸಿಲ್ಲ, ಹೀಗಾಗಿ ಘಟಿಕೋತ್ಸವದಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಸ್ಪಷ್ಟಪಡಿಸಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ ಈ ಘಟಿಕೋತ್ಸವಕ್ಕೆ ಸಿಜೆಐ ಸೂರ್ಯಕಾಂತ್ ಅವರನ್ನು ಆಹ್ವಾನಿಸಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತೀರ್ಮಾನಿಸಿತ್ತು. ಆದರೆ, NALSARನ 2026ರ ಬ್ಯಾಚ್‌ನ ವಿದ್ಯಾರ್ಥಿಗಳು ಈ ಆಹ್ವಾನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕುಲಪತಿ ಹಾಗೂ ರಿಜಿಸ್ಟ್ರಾರ್‌ಗೆ ಪತ್ರ ಬರೆದಿದ್ದರು.

ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವೇನು?

ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ನಿರುದ್ಯೋಗಿ ಯುವಕರು ಹಾಗೂ ವೃತ್ತಿಪರ ಸ್ಥಾನಮಾನವಿಲ್ಲದ ವ್ಯಕ್ತಿಗಳನ್ನು ‘ಜಿರಳೆಗಳು’ ಮತ್ತು ವ್ಯವಸ್ಥೆಯ ಮೇಲಿನ ‘ಪರಾವಲಂಬಿಗಳು’ ಎಂದು ಸಿಜೆಐ ಹೋಲಿಸಿದ್ದರು ಎನ್ನಲಾದ ಹೇಳಿಕೆಯನ್ನು ವಿದ್ಯಾರ್ಥಿಗಳು ಖಂಡಿಸಿದ್ದರು.

ಅಲ್ಲದೆ, ಜುಲೈ 20ರಂದು ಪೊಲೀಸ್ ಕ್ರಮಗಳ ಕುರಿತು ವಿದ್ಯಾರ್ಥಿಗಳು ನಡೆಸಿದ ಮೆರವಣಿಗೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸಿಜೆಐ ನೀಡಿದ್ದ ಅಸಂವೇದನಾಶೀಲ ಹೇಳಿಕೆಗಳನ್ನು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. “ವಿದ್ಯಾರ್ಥಿಗಳ ಬಗ್ಗೆ ಮತ್ತು ಪೊಲೀಸ್ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುವ ಯುವಕರ ಬಗ್ಗೆ ನಿರಾಸಕ್ತಿ ತಳೆದಿರುವ ವ್ಯಕ್ತಿಯಿಂದ ಶೈಕ್ಷಣಿಕ ಪದವಿ ಸ್ವೀಕರಿಸಲು ನಮಗೆ ಮನಸ್ಸಿಲ್ಲ” ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದರು.

ಬಾರ್ ಕೌನ್ಸಿಲ್ ಎಚ್ಚರಿಕೆ ಮತ್ತು ಯು-ಟರ್ನ್!

ವಿದ್ಯಾರ್ಥಿಗಳ ಈ ವಿರೋಧದ ನಡುವೆಯೇ ಎಂಟ್ರಿ ಕೊಟ್ಟಿದ್ದ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ, ಸಿಜೆಐ ಆಹ್ವಾನವನ್ನು ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ ತನಿಖೆ ನಡೆಸಬೇಕು ಹಾಗೂ ಅವರನ್ನು ವಕೀಲರಾಗಿ ನೋಂದಾಯಿಸಿಕೊಳ್ಳುವುದರಿಂದ ಅನರ್ಹಗೊಳಿಸಬೇಕು ಎಂದು NALSAR ಕುಲಪತಿಗೆ ಪತ್ರ ಬರೆದಿದ್ದರು.

ಆದರೆ, BCIಯ ಈ ಬೆದರಿಕೆ ಪತ್ರಕ್ಕೆ ದೇಶಾದ್ಯಂತ ಕಾನೂನು ಕ್ಷೇತ್ರದಲ್ಲಿ ವ್ಯಾಪಕ ಆಕ್ರೋಶ ಮತ್ತು ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಿ‌ಸಿಐ ತಕ್ಷಣವೇ ತನ್ನ ಸುತ್ತೋಲೆಯನ್ನು ಹಿಂಪಡೆದುಕೊಂಡಿತ್ತು. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ, ತಾವು ಆಹ್ವಾನವನ್ನೇ ಸ್ವೀಕರಿಸಿಲ್ಲವೆಂದು ಸಿಜೆಐ ಸ್ಪಷ್ಟಪಡಿಸುವ ಮೂಲಕ ವಿವಾದಕ್ಕೆ ತಾತ್ಕಾಲಿಕ ತೆರೆ ಎಳೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರತಿ ಗಲ್ಲಿಯೂ ಜಂತರ್ ಮಂತರ್..’; ಎಸ್‌ಐಆರ್‌ ವಿರುದ್ಧ ಅ.23ರಂದು ದೇಶಾದ್ಯಂತ ಪ್ರತಿಭಟನೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರನ್ನು ಸಂಸತ್ತಿನ ಮೂಲಕ ಪದಚ್ಯುತಗೊಳಿಸಬೇಕು ಹಾಗೂ "ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಬೇಕು" ಎಂದು ಆಗ್ರಹಿಸಿ "ಪೀಪಲ್‌...

SIR ಅಂತಿಮ ಪಟ್ಟಿಯಲ್ಲಿದ್ದ 13 ಸಾವಿರಕ್ಕೂ ಹೆಚ್ಚು ಮತದಾರರ ಹೆಸರುಗಳಲ್ಲಿ ಬದಲಾವಣೆ : ಯುಪಿಯಲ್ಲಿ ಮತಗಳ್ಳತನದ ಹೊಸ ಸಂಚು ಬೆಳಕಿಗೆ; ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಉತ್ತರ ಪ್ರದೇಶದ ಪಿಲಿಭಿತ್ ವಿಧಾನಸಭಾ ಕ್ಷೇತ್ರದ ಇಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬುಧವಾರ (ಅಕ್ಟೋಬರ್ 21) ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ) ಸೂಚಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಮತದಾರರ ಗುರುತಿನ...

ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ ಮೆರವಣಿಗೆ; ಎಸ್‌ಐಆರ್ ವಿರೋಧಿ ಪ್ರತಿಭಟನೆ ನಿಮ್ಮೂರಲ್ಲೆಲ್ಲಿ ಗೊತ್ತಾ?

ಎಸ್ಐಆರ್ ರದ್ದುಪಡಿಸುವಂತೆ ಆಗ್ರಹಿಸಿ ಹಾಗೂ ನವದೆಹಲಿಯ 'ಜಂತರ್ ಮಂತರ್' ಮೈದಾನದಲ್ಲಿ ಪ್ರತಿಭಟನೆ ಮಾಡದಂತೆ ನಿರ್ಬಂಧಿಸಿರುವ ದೆಹಲಿ ಪೊಲೀಸರ ಪ್ರಜಾಪ್ರಭುತ್ವ ವಿರೋಧಿ ನಿಲುವು ಖಂಡಿಸಿ ದೇಶದಾದ್ಯಂತ ಜನಪರ ಸಂಘಟನೆಗಳು ಏಕಕಾಲದಲ್ಲಿ 'ಪ್ರಜಾಪ್ರಭುತ್ವ ಉಳಿವಿಗಾಗಿ ಜನತೆಯ...

‘ಯುದ್ಧದ ಮುಂಚೂಣಿ ರೇಖೆಗಳ ಸ್ಥಗಿತಕ್ಕೆ ಸಿದ್ಧ..’; ಉಕ್ರೇನ್‌ನ ಶೇ. 25ರಷ್ಟು ಭೂಭಾಗವನ್ನು ರಷ್ಯಾಕ್ಕೆ ಬಿಟ್ಟುಕೊಡಲು ಒಪ್ಪಿದರೇ ಝೆಲೆನ್‌ಸ್ಕಿ?

ರಷ್ಯಾದೊಂದಿಗಿನ ಶಾಂತಿ ಒಪ್ಪಂದದ ಭಾಗವಾಗಿ ಪ್ರಸ್ತುತ ಯುದ್ಧದ ಮುಂಚೂಣಿ ರೇಖೆಗಳನ್ನು ಸ್ಥಗಿತಗೊಳಿಸಲು ಸಿದ್ಧವಿರುವುದಾಗಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. 2022ರ ಫೆಬ್ರವರಿಯಲ್ಲಿ ಆರಂಭವಾದ ಯುದ್ಧವನ್ನು ಅಂತ್ಯಗೊಳಿಸುವ ನಿಟ್ಟಿನಲ್ಲಿ ಈ ಕ್ರಮ ಅಗತ್ಯ...

ಸೌದಿ ಅರೇಬಿಯಾದ ದಮ್ಮಾಮ್‌ ವಿಮಾನ ನಿಲ್ದಾಣದ ಮೇಲೆ ದಾಳಿ : ಭಾರತೀಯ ಪ್ರಜೆ ಸೇರಿ ಇಬ್ಬರು ಸಾವು, 8 ಮಂದಿಗೆ ಗಾಯ

ಸೌದಿ ಅರೇಬಿಯಾದ ದಮ್ಮಾಮ್‌ನಲ್ಲಿರುವ ಕಿಂಗ್ ಫಹದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಒಬ್ಬರು ಭಾರತೀಯ ಪ್ರಜೆ, ಮತ್ತೊಬ್ಬರು ಸೌದಿ ಪ್ರಜೆ ಮೃತಪಟ್ಟಿದ್ದಾರೆ ಎಂದು ಸೌದಿ ಅರೇಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ...

ಸಿಇಸಿ ಗ್ಯಾನೇಶ್ ಕುಮಾರ್ ಸಹೋದರನ ನೇತೃತ್ವದ ದೆಹಲಿ ಕಸ್ಟಮ್ಸ್‌ನಲ್ಲಿ ಪಂಜಾಬ್‌ ಮುಖ್ಯಮಂತ್ರಿಯನ್ನು ತಡೆದು ದಂಡ ವಿಧಿಸಲಾಯಿತೇ?

ಪ್ರಸ್ತುತ ಇಡೀ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಸಹೋದರ ಮನೀಶ್ ಕುಮಾರ್ ಮುಖ್ಯ ಆಯುಕ್ತರಾಗಿರುವ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ನಲ್ಲಿ ಪಂಜಾಬ್ ಮುಖ್ಯಮಂತ್ರಿ...

ಸಂಸತ್ತಿನ ಅನುಮೋದನೆ ಇಲ್ಲದೆ ಕೇಂದ್ರ ಸರ್ಕಾರ ಫಾರ್ಮ್‌-6 ತಿದ್ದುಪಡಿ ಮಾಡಬಹುದೇ?

ಮತದಾರರ ಪಟ್ಟಿಯಲ್ಲಿ ವ್ಯಕ್ತಿಯ ಹೆಸರನ್ನು ನೋಂದಾಯಿಸಲು ಬಳಸುವ ಫಾರ್ಮ್‌-6 ಅನ್ನು ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬಹುದು. ಆದರೆ, ಇಂತಹ ಬದಲಾವಣೆಗಳನ್ನು ಕಾನೂನಿನಲ್ಲಿ ನಿಗದಿಪಡಿಸಿರುವ ಪ್ರಕ್ರಿಯೆಯ ಅನುಸಾರವೇ ಕೈಗೊಳ್ಳಬೇಕು. ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಆಂಧ್ರ ಪ್ರದೇಶ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸ್ಥಗಿತ

ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹಿನ್ನೆಲೆ, ಅಕ್ಟೋಬರ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದ ಎಲ್ಲಾ 100 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆಯನ್ನು ತಕ್ಷಣವೇ ತಡೆಹಿಡಿಯುವಂತೆ ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯುಕ್ತ (ಎಸ್‌ಇಸಿ) ಅನಿಲ್...

ಜೆಎನ್‌ಯು ಪಿಎಚ್‌ಡಿ ಪ್ರವೇಶದಲ್ಲಿ ಪಾಲನೆಯಾಗದ ಮೀಸಲಾತಿ ಮಾನದಂಡ; 56 ಕೋರ್ಸ್‌ಗಳಲ್ಲಿ ಇಲ್ಲ ಒಂದೇ ಒಂದು ಎಸ್‌ಟಿ ಸೀಟ್

ಮೀಸಲಾತಿ ಸೀಟುಗಳ ಹಂಚಿಕೆ ವ್ಯತ್ಯಾಸಕ್ಕೆ ವಿವರಣೆ ನೀಡುವಂತೆ ಬಾಪ್ಸಾ ಆಗ್ರಹ 2026-27ನೇ ಶೈಕ್ಷಣಿಕ ಸಾಲಿನ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪಿಎಚ್‌ಡಿ ಪ್ರವೇಶ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಪ್ರಮಾಣದಲ್ಲಿ ಕೊರತೆಯಾಗಿದೆ ಎಂದು...

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು...