Homeಕರ್ನಾಟಕರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಿಸುವುದು ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ ಎಂದಿದ್ದಾರೆ.

ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ? ಇಡುವರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್‌ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ ಎಂದಿದ್ದಾರೆ.

ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...