Homeಕರ್ನಾಟಕ125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಯುಗಾದಿ ಬಳಿಕ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

- Advertisement -
- Advertisement -

ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ 71 ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಮೊದಲ ಪಟ್ಟಿಯನ್ನು ಯುಗಾದಿ ಹಬ್ಬದ ನಂತರ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಹಾಲಿ ಶಾಸಕರ ಜತೆ ಕಳೆದ ಬಾರಿ ಕಡಿಮೆ ಅಂತದಲ್ಲಿ ಸೋತವರಿಗೂ ಟಿಕೆಟ್​ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಹರಿಹರ (ಆರ್‌.ರಾಮಪ್ಪ), ಕುಂದಗೋಳ (ಕುಸುಮಾ ಶಿವಳ್ಳಿ) ಹಾಗೂ ಲಿಂಗಸುಗೂರು (ಡಿ.ಎಸ್‌.ಹೂಲಗೇರಿ) ಕ್ಷೇತ್ರಗಳಲ್ಲಿ ಹಾಲಿ ಶಾಸಕರನ್ನು ಕಣಕ್ಕೆ ಇಳಿಸಿದರೆ ಗೆಲುವು ಕಷ್ಟ ಎಂದು ಪಕ್ಷದ ಆಂತರಿಕ ಸಮೀಕ್ಷೆಗಳು ತಿಳಿಸಿವೆ. ಹಾಗಾಗಿ ಈ  ಕ್ಷೇತ್ರಗಳಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಿ ಮುಂದಿನ ತೀರ್ಮಾನಕ್ಕೆ ಬರಲು  ಹೈಕಮಾಂಡ್ ನಿರ್ಧರಿಸಿದೆ.

ಪಾವಗಡ (ವೆಂಕಟರಮಣಯ್ಯ),  ಅಫಜಲಪುರ (ಎಂ.ವೈ.ಪಾಟೀಲ) ಕ್ಷೇತ್ರದ ಶಾಸಕರು ತಮ್ಮ ಪುತ್ರರಿಗೆ ಟಿಕೆಟ್‌ ನೀಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಒಪ್ಪಿದೆ. ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ) ಕ್ಷೇತ್ರದ ಕುರಿತು ಹಿರಿಯ ನಾಯಕರು ಇನ್ನಷ್ಟು ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುವುದು ಉತ್ತಮ ಎಂಬ ನಿರ್ಧಾರಕ್ಕೆ ಬರಲಾಯಿತು.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ: ಸಿ.ಟಿ ರವಿ-ವಿಜಯೇಂದ್ರ ನಡುವೆ ವಾಕ್ಸಮರ

ಪಟ್ಟಿ ಬಿಡುಗಡೆ ಬಗ್ಗೆ ಮಾತನಾಡಿದ ಹಿರಿಯ ಮುಖಂಡರೊಬ್ಬರು, ”ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇದೇ 20ರಂದು ಬೆಳಗಾವಿಯಲ್ಲಿ ನಡೆಯುವ ‘ಯುವ ಕ್ರಾಂತಿ ರ‍್ಯಾಲಿ’ಗೆ ಬರಲಿದ್ದಾರೆ. ಆ ಬಳಿಕವೇ  ಮೊದಲ ಪಟ್ಟಿ ಪ್ರಕಟಿಸಬೇಕು ಎಂದು ಹಲವು ನಾಯಕರು ಸಲಹೆ ನೀಡಿದ್ದಾರೆ. ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕವಾಗಿ ಒಪ್ಪಿದೆ ಎಂದು ಹೇಳಿದರು.

ಈ ಬಾರಿ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಅವರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ಅವರು ಸೂಚಿಸುವ ಮುಖಂಡರಿಗೆ ಟಿಕೆಟ್‌ ನೀಡಲು ತೀರ್ಮಾನಿಸಲಾಯಿತು. ಜತೆಗೆ, ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ, ಎರಡು ತಿಂಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಯಾದ ಮುಳಬಾಗಿಲಿನ ಶಾಸಕ ಎಚ್‌.ನಾಗೇಶ್‌ ಅವರನ್ನು ಮಹದೇವಪುರದಲ್ಲಿ, ವಿಧಾನ ಪರಿಷತ್‌ ಸದಸ್ಯ ಯು.ಬಿ.ವೆಂಕಟೇಶ್‌ ಅವರನ್ನು ಬಸವನಗುಡಿ ಕ್ಷೇತ್ರದಲ್ಲಿ ಟಿಕೆಟ್ ನೀಡಲು ನಿರ್ಧರಿಸದಲಾಯಿತು.

ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ವಿಧಾನ ಪರಿಷತ್‌ ಸದಸ್ಯ ಪುಟ್ಟಣ್ಣ ಅವರಿಗೆ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ನೀಡಲು ಕೆಲವು ನಾಯಕರಿಂದ ಒಲವು ವ್ಯಕ್ತಪಡಿಸಿದರು. ಆದರೆ ಅವರು ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ಪಡೆದ ಬಳಿಕ ಅಂತಿಮಗೊಳಿಸುವುದು ಉತ್ತಮ ಎಂದು ಹಲವು ಮುಖಂಡರು ಸಲಹೆ ನೀಡಿದರು.

ಚುನಾವಣಾ ಸಮಿತಿ ಸಭೆಯಲ್ಲಿ ರಾಹುಲ್‌ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌, ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ಶಾಸಕ ಜಿ.ಪರಮೇಶ್ವರ ಹಾಗೂ ಹಿರಿಯ ಮುಖಂಡ ಎಂ.ವೀರಪ್ಪ ಮೊಯಿಲಿ ಭಾಗವಹಿಸಿದ್ದರು.

70 ಕ್ಷೇತ್ರಗಳಿಗೆ ಎರಡು–ಮೂವರು ಸಂಭವನೀಯ ಅಭ್ಯರ್ಥಿಗಳ ಹೆಸರು ಗುರುತಿಸಿ ಪರಿಶೀಲನಾ ಸಮಿತಿ ಪಟ್ಟಿ ಮಾಡಿದೆ. ಈ ಪಟ್ಟಿಯ ಕುರಿತು ಸಹ ಸಭೆಯಲ್ಲಿ ಚರ್ಚಿಸಲಾಯಿತು. ಈ ಕ್ಷೇತ್ರಗಳ ಆಕಾಂಕ್ಷಿಗಳ ಜತೆಗೆ ರಾಜ್ಯ ನಾಯಕರು ಚರ್ಚೆ ನಡೆಸಿ ಯಾವುದೇ ಗೊಂದಲಕ್ಕೆ ಎಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೈಕಮಾಂಡ್‌ ಸೂಚಿಸಿದೆ.  ಸಭೆಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್‌ನ ಮುಖಂಡರ ಜತೆಗೆ ಮತ್ತೊಂದು ಸುತ್ತಿನ ಸಭೆ ನಡೆಸಿದರು.

ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸಭೆಯಲ್ಲಿ ಭಾಗವಹಿಸಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಏಕಾಂಗಿಯಾಗಿ ಚುನಾವಣೆ ಎದುರಿಸಲಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

0
"ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ" ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ...