Homeಮುಖಪುಟರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

ತನ್ನ ಹೆಸರನ್ನು ’ಮಕ್ಕಳ್ ಸೇವೈ ಕಚ್ಚಿ’ ಎಂದು ಬದಲಾಯಿಸಿಕೊಂಡ ಪಕ್ಷವು ಈ ಹಿಂದೆ 'ಆಲ್ ಇಂಡಿಯಾ ಮಕ್ಕಳ್ ಶಕ್ತಿ ಕಳಗಂ’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ ಮಾಹಿ ತಿಳಿಸಿದೆ.

- Advertisement -
- Advertisement -

ನಟ ರಜನಿ ಕಾಂತ್‌ ತಮ್ಮ‌ ಹೊಸ ಪಕ್ಷ ಪ್ರಾರಂಭ ದಿನಾಂಕ ಮತ್ತು ಇತರ ವಿವರಗಳನ್ನು ಈ ತಿಂಗಳ 31 ರಂದು ತಿಳಿಸಲಾಗುವುದು ಎಂದು ಘೋಷಿಸಿದ್ದ ಹಿನ್ನಲೆಯಲ್ಲಿ, ಈಗಾಗಲೇ ಚುನಾವಣಾ ಆಯೋಗದಲ್ಲಿ ನೋಂದಾಯಿಸಿರುವ ರಾಜಕೀಯ ಪಕ್ಷ ‘ಮಕ್ಕಳ್ ಸೇವೈ ಕಚ್ಚಿ’ ಎಂಬ ಹೆಸರನ್ನು ನಟ ರಜನಿಕಾಂತ್ ಬಳಸಲಿದ್ದಾರೆ ತಮಿಳುನಾಡು ಮಾಧ್ಯಮಗಳು ವರದಿ ಮಾಡಿದೆ.

ಆ ಈ ಬಗ್ಗೆ ರಜನಿಕಾಂತ್ ಅವರ ಪಕ್ಷ ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. “ನಾಯಕತ್ವವು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವವರೆಗೆ ಕಾಯಿರಿ” ಎಂದು ರಜನಿಕಾಂತ್‌ ಅಭಿಮಾನಿ ಸಂಘದ ಮುಖ್ಯಸ್ಥ ಸುಧಾಕರ್ ಹೇಳಿದ್ದಾರೆ.

ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ರಜನಿ ಅಭಿಮಾನಿಗಳ ಸಂಘ ಹೇಳಿಕೆ

“ಭಾರತದ ಚುನಾವಣಾ ಆಯೋಗ ಹೊರಡಿಸಿದ ಹೇಳಿಕೆಯನ್ನು ಉಲ್ಲೇಖಿಸಿ, ಕೆಲವು ಮಾಧ್ಯಮಗಳು ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ರಜಿನಿ ಅಭಿಮಾನಿಗಳ ಸಂಘಕ್ಕೆ ಸೇರಿದೆ ಎಂದು ಹೇಳಿದ್ದು, ನಾಯಕತ್ವದ ಅಧಿಕೃತ ಪ್ರಕಟಣೆ ಬರುವವರೆಗೂ ಕಾಯುವಂತೆ ಅಭಿಮಾನಿಗಳಲ್ಲಿ ಕೇಳಿಕೊಳ್ಳುತ್ತೇವೆ” ಎಂದು ಸಂಘದ ಮುಖ್ಯಸ್ಥ ವಿ.ಎಂ ಸುಧಾಕರ್ ಹೇಳಿದ್ದಾರೆ.

ಕಳೆದ ಸೆಪ್ಟೆಂಬರ್ ನಲ್ಲಿ ತನ್ನ ಹೆಸರನ್ನು ’ಮಕ್ಕಳ್ ಸೇವೈ ಕಚ್ಚಿ’ ಎಂದು ಬದಲಾಯಿಸಿಕೊಂಡ ಪಕ್ಷವು ಈ ಹಿಂದೆ ‘ಆಲ್ ಇಂಡಿಯಾ ಮಕ್ಕಳ್ ಶಕ್ತಿ ಕಳಗಂ’ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿತ್ತು ಎಂದು ಚುನಾವಣಾ ಆಯೋಗದಲ್ಲಿ ನೋಂದಾಯಿಸಲಾದ ಮಾಹಿತಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾವು ನಂಬಿಯೇಬಿಟ್ಟಿದ್ದ ಈ ವಾರದ 5 ಫೇಕ್‌ನ್ಯೂಸ್‌ಗಳು ಮತ್ತು ಅದರಿಂದಿರುವ ಸತ್ಯಗಳು

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ರಜನಿಕಾಂತ್ ಬೆಂಬಲ ಕೇಳುತ್ತೇನೆ: ಕಮಲ್ ಹಾಸನ್

ಈ ಹಿನ್ನೆಲೆಯಲ್ಲಿ ಚುನಾವಣಾ ಸ್ಪರ್ಧೆಯಲ್ಲಿ ರಾಜಕೀಯ ಪಕ್ಷಗಳಿಗೆ ನೀಡಬೇಕಾದ ಚಿಹ್ನೆಗಳ ಬಗ್ಗೆ ಚುನಾವಣಾ ಆಯೋಗವು ಡಿಸೆಂಬರ್ 14 ರಂದು ಆದೇಶ ಹೊರಡಿಸಿದ್ದು, ಇದಕ್ಕೆ ಮಕ್ಕಳ್ ಸೇವೈ ಕಚ್ಚಿಗೆ ’ಆಟೋ’ ಚಿಹ್ನೆಯನ್ನು ನೀಡಿದೆ.

ಈ ಸಂಬಂಧಿತ ವಿಷಯದಲ್ಲಿ ‘ಎರಡು ಬೆರಳುಗಳ ಹಸ್ತ ಮುದ್ರೆ’ ಅಥವಾ ‘ಬಾಬಾ ಮುದ್ರೆ’ಯ ಚಿಹ್ನೆಯನ್ನು ಕೊಡಬೇಕು ಎಂದು ಪಕ್ಷವು ಕೇಳಿಕೊಂಡಿತ್ತು. ಆದರೆ ಹಸ್ತವು ಕಾಂಗ್ರೆಸ್ ಪಕ್ಷದ ಚುನಾವಣಾ ಚಿಹ್ನೆಯನ್ನು ಹೋಲುತ್ತದೆ ಎಂದು ಅದನ್ನು ನೀಡಲು ನಿರಾಕರಿಸಿದ ಚುನಾವಣಾ ಆಯೋಗವು ಆಟೋ ಚಿಹ್ನೆಯನ್ನು ನೀಡಿದೆ.

ಇದಲ್ಲದೆ, ಚುನಾವಣಾ ಆಯೋಗವು ಡಿಸೆಂಬರ್ 14 ರಂದು ಭಾರತದ ಇತರ ರಾಜಕೀಯ ಪಕ್ಷಗಳಿಗೆ ಚುನಾವಣಾ ಚಿಹ್ನೆಗಳನ್ನು ನಿಗದಿಪಡಿಸಿತ್ತು.

ಇದನ್ನೂ ಓದಿ: ಮುಖ್ಯಮಂತ್ರಿಯಾಗಲು ಎಂದಿಗೂ ಬಯಸಲಿಲ್ಲ: ಹೊಸ ಪಕ್ಷ ಘೋಷಿಸಿದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...