Homeಚಳವಳಿಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಇನ್ನಿಲ್ಲ

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

- Advertisement -
- Advertisement -

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ.

ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ ಮನೆಯಲ್ಲಿ ಸದ್ಯಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಇಂದು ಮಧ್ಯಾಹ್ನ ಅವರ ಸ್ವಗ್ರಾಮವಾದ ಕೊಪ್ಪಗೆ ಕೊಂಡೊಯ್ದು ಅಂತ್ಯ ಸಂಸ್ಕಾರ ನೇರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.

 

ಮಹೇಂದ್ರ ಕುಮಾರ್‌ರವರು ದಿಟ್ಟ ಹೋರಾಟಗಾರರಾಗಿದ್ದರು. ಯುವಕರಾಗಿದ್ದಲೇ ಹೋರಾಟದ ಮನೋಭಾವ ಬೆಳೆಸಿಕೊಂಡಿದ್ದ ಅವರು ಭಜರಂಗದಳ ಸಂಘಟನೆ ಸೇರಿದ್ದರಲ್ಲದೇ ಅದರ ರಾಜ್ಯಾಧ್ಯಕ್ಷರು ಸಹ ಆಗಿದ್ದರು. ಆ ನಂತರ ಆ ಸಂಘಟನೆಯೊಂದಿಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಕಾರಣಕ್ಕೆ ಅದರಿಂದ ಹೊರಬಂದು ಪ್ರಗತಿಪರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದರು.

ಜೀವಪರ ಚಳವಳಿಯೊಂದಿಗೆ ಬೆರೆತುಹೋದ ಅವರು ಈ ಮೊದಲು ಭಜರಂಗದಳ ಸಂಘಟನೆ ಸೇರಿ ಎಂತಹ ತಪ್ಪು ಮಾಡಿದ್ದೆ ಎಂಬುದನ್ನು ಅರಿತು, ಜನರ ಪರ ಕೆಲಸ ಮಾಡಲು ನಿರ್ಧರಿಸಿದ್ದರು.

ತಮ್ಮ ಮೂಲ ಸಂಘಟನೆಯ ಹುಳುಕುಗಳನ್ನು ವಿಮರ್ಶಿಸುತ್ತಲೇ, ಪ್ರಸ್ತುತ ಸಾಮಾಜಿಕ, ರಾಜಕೀಯ, ಆರ್ಥಿಕ ವಿಷಯಗಳ ಕುರಿತು, ಸಮಾಜದ ಆಗು ಹೋಗುಗಳಿಗೆ ಬಹಳ ಹತ್ತಿರದಿಂದ ಸ್ಪಂದಿಸುತ್ತಿದ್ದರು. ನಂತರ ನಮ್ಮ ಧ್ವನಿ ಬಳಗ ಎಂಬ ಸಮಾನ ಮನಸ್ಕರ ಸಂಘಟನೆಯೊಂದನ್ನು ಹುಟ್ಟುಹಾಕಿ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಶೋಷಿತರ ಜಾಗೃತಿಗಾಗಿ ಶ್ರಮಿಸುತ್ತಿದ್ದರು.

ಸಂವಿಧಾನದ ಆಶಯಗಳು, ಜಾತ್ಯಾತೀತತೆ, ಸೌಹಾರ್ದತೆಯ ಕುರಿತಾಗಿದ್ದ ಅವರ ನಿಲುವು ಮತ್ತು ಆಚರಣೆಗಳಿಗಾಗಿ ಅವರು ರಾಜ್ಯಾದ್ಯಂತ ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದರು.

ಡಿಜಿಟಲ್‌ ಮಾಧ್ಯಮ ವಿಭಾಗದಲ್ಲಿ ಮುಂದಿದ್ದ ಅವರು ಪ್ರತಿನಿತ್ಯ ತಮ್ಮ ಹರಿತ ಬರಹ ಮತ್ತು ವಿಡಿಯೋಗಳ ಮೂಲಕ ಲಕ್ಷಾಂತರ ಜನರನ್ನು ತಲುಪಿದ್ದರು. ಚಿಂತನಾರ್ಹ, ಸಕಾಲಿಕ ವಿಡಿಯೋಗಳಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿದ್ದರು.

ನಿನ್ನೆಯವರೆಗೂ ಸಹ ಸಕ್ರಿಯರಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿದ್ದ ಮಹೇಂದ್ರ ಕುಮಾರ್‌ರವರು ರಾತ್ರಿ ಧೀಡಿರನೆ ಕಾಣಿಸಿಕೊಂಡ ಹೃದಯಾಘಾತದಿಂದಾಗಿ ಇಹಲೋಕ ತ್ಯಜಿಸಿದ್ದು ಅವರ ಅಪಾರ ಅಭಿಮಾನಿಗಳು, ಕುಟುಂಬ ಸದಸ್ಯರ, ಸಹ ಹೋರಾಟಗಾರರನ್ನು ಅಗಲಿದ್ದಾರೆ.

ಮಹೇಂದ್ರ ಕುಮಾರ್‌ರವರ ನಿಧಾನಕ್ಕೆ ರಾಜ್ಯದಾದ್ಯಂತ ಹಲವಾರು ಜನರು ಸಂತಾಪ ಸೂಚಿಸಿದ್ದು, ಧಿಡೀರ್‌ ಆಘಾತಕ್ಕೆ ಕಂಬನಿ ಮಿಡಿದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. ನಮಸ್ಕಾರ, ನಿಜವಾದ ಸುದ್ದಿ ನಮ್ಮ ದೇಶದ ಜನಕ್ಕೆ ಏನಾದ್ರೂ ಈ ರೀತಿ ಮಾಧ್ಯಮಗಳಲ್ಲಿ ತಿಳಿಸಿದ್ದರೆ ನೇಮದಿಯಿ ಬದುಕು ಬಹುದು .

  2. ಮಹೆಂದರಕುಮಾರ ಅಣ್ಣಾ ಅವರು ಹೃದಯಾಘಾತ
    ವಾಗಿ ನಮ್ಮನ್ನು ಅಗಲಿದ ಸುದ್ದಿ ಕೇಳಿ ತುಂಬಾ
    ಧುಃಖ ವಾಯಿತು, ಸಂಕಷ್ಟದ ಸಮಯದಲ್ಲಿ
    ಅವರ ಅಗಲುವಿಕೆ ನಮ್ಮ ರಾಜ್ಯಕ್ಕೆ, ರಾಷ್ಟ್ರಕ್ಕೆ
    ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ
    ಶಾಂತಿ ನೀಡಲಿ ಹಾಗೂ ಅವರ ಕುಟಂಬದ
    ಎಲ್ಲಾ ಸದಸ್ಯರಿಗೆ ನೋವು ಸಹಿಸುವ ಶಕ್ತಿ
    ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ
    ನಿಮ್ಮ ವಿಚಾರ ಧಾರೆ ಸಮಾಜದಲ್ಲಿ ಬಿತ್ತುವ
    ಬೆಳೆಸುವ ಮೂಲಕ ನಿಮಗೆ ನನ್ನ ನುಡಿ ನಮನ
    ಸಲ್ಲಿಸುತ್ತೇನೆ.
    ಇಂತಿ ತಮ್ಮವನೆ ಆದ ಶರಣ ಶ್ರೀಶೈಲ ಜಿ ಮಸೂತಿ ಲಿಂಗಾಯತ ಬೆಂಗಳೂರು??????

  3. ಪ್ರಗತಿಪರ ಚಿಂತಕ, ಜಾತ್ಯಾತೀತ ನಿಲುವಿನ ಪ್ರಬಲ ಪ್ರತಿಪಾದಕ, ನೇರ ನಿಷ್ಟೂರ ಪತ್ರಕರ್ತ ಶ್ರೀ ಮಹೇಂದ್ರ ಕುಮಾರ್ ರವರ ಅಕಾಲಿಕ ನಿಧನ ರಾಜ್ಯದ ಪ್ರಗತಿಪರ ಹೋರಾಟಕ್ಕಾದ ತುಂಬಲಾರದ ನಷ್ಟ. ಭಗವಂತ ದಿವಂಗತರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ತೀಸುತ್ತೇನೆ.

    ಹೊ.ನಾರಯಣ
    ಬೆಂಗಳೂರು.

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...