Homeಕರ್ನಾಟಕದರ ಹೆಚ್ಚಳ : 'ನಮ್ಮ ಮೆಟ್ರೋ' ಪ್ರಯಾಣಿಕರ ಸಂಖ್ಯೆ ಕುಸಿತ

ದರ ಹೆಚ್ಚಳ : ‘ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಕುಸಿತ

- Advertisement -
- Advertisement -

ನಮ್ಮ ಮೆಟ್ರೋ ಪ್ರಯಾಣ ದರ, ವಿಶೇಷವಾಗಿ 6 ​​ರಿಂದ 25 ಕಿ.ಮೀ. ನಡುವಿನ ದೂರಕ್ಕೆ, ‘ಅಸಹಜ’ ಅಥವಾ ಭಾರೀ ಏರಿಕೆ ಕಂಡು ಬಂದಿರುವುದು ‘ತಾಂತ್ರಿಕ ದೋಷಗಳಿಂದ’ ಆಗಿರಬಹುದು. ಈ ಬಗ್ಗೆ ಇನ್ನೂ ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಅಥವಾ ಸರಿಯಾದ ಮಾಹಿತಿ ದೊರೆತಿಲ್ಲ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಫೆಬ್ರವರಿ 9ರಂದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ರಿಯಾಯಿತಿ ರಹಿತ ದರಗಳನ್ನು ಸರಾಸರಿ ಶೇ. 51.55 ರಷ್ಟು ಮತ್ತು ರಿಯಾಯಿತಿ ಸಹಿತ ದರಗಳನ್ನು ಶೇ. 45-46 ರಷ್ಟು ಹೆಚ್ಚಿಸಿದೆ. ಜೂನ್ 2017ರ ನಂತರ ಇದೇ ಮೊದಲ ಬಾರಿಗೆ ದರ ಹೆಚ್ಚಳವಾಗಿದೆ.

ಆದಾಗ್ಯೂ, ಹಲವಾರು ಮಾರ್ಗಗಳಲ್ಲಿ ಪ್ರಯಾಣ ದರಗಳು ಶೇಕಡ 100ರಷ್ಟು ಏರಿಕೆಯಾಗಿವೆ ಎಂದು ಅನೇಕ ಪ್ರಯಾಣಿಕರು ದೂರಿದ್ದಾರೆ. ನಿಯಮಿತ ಪ್ರಯಾಣಿಕರು, ವಿಶೇಷವಾಗಿ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಉದಾಹರಣೆಗೆ : ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ನಡುವಿನ 6.7 ಕಿ.ಮೀ ಪ್ರಯಾಣ ದರ ಪ್ರಸ್ತುತ 40 ರೂಪಾಯಿ ಆಗಿದ್ದು, ಹಿಂದಿನ ದರಕ್ಕಿಂತ 20 ರೂಪಾಯಿ ಹೆಚ್ಚಾಗಿದೆ. ಇತರ ಹಲವು ಮಾರ್ಗಗಳಲ್ಲಿ ಇದೇ ರೀತಿಯ ಹೆಚ್ಚಳ ಕಂಡು ಬಂದಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ವಿವರಿಸಿದೆ.

ಭಾರೀ ದರ ಹೆಚ್ಚಳದ ಸಂಬಂಧ ಪ್ರಯಾಣಿಕರಿಗೆ ತಕ್ಷಣಕ್ಕೆ ಯಾವುದೇ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಬಿಎಂಆರ್‌ಸಿಎಲ್ ಈ ಸಮಸ್ಯೆಯನ್ನು ಇನ್ನೂ ಪರಿಶೀಲಿಸುತ್ತಿರುವುದಾಗಿ ಹೇಳಿದೆ.

ದರ ಏರಿಕೆ ಮಾತ್ರವಲ್ಲದೆ, ಸ್ಮಾರ್ಟ್ ಕಾರ್ಡ್‌ಗಳಲ್ಲಿನ ಕನಿಷ್ಠ ಉಳಿತಾಯ ಮಿತಿಯನ್ನು 50 ರೂಪಾಯಿಯಿಂದ 90 ರೂಪಾಯಿಗೆ ಏರಿಸಿರುವ ಬಗ್ಗೆಯೂ ಟೀಕೆಗಳು ವ್ಯಕ್ತವಾಗಿವೆ.

ಒಂದು ಬಾರಿಯ ಪ್ರಯಾಣಕ್ಕೆ ಬೇಕಾಗುವ ಗರಿಷ್ಠ ದರದಷ್ಟು ಮೊತ್ತ ಕಾರ್ಡ್‌ನಲ್ಲಿ ಇರಬೇಕು ಎಂದು ನಿಗಮದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಯಾಣಿಕರೊಬ್ಬರು, ಈ ಹಿಂದೆ ಗರಿಷ್ಠ ಮೊತ್ತ 60 ರೂಪಾಯಿ ಇದ್ದಾಗ ಕಾರ್ಡ್‌ನ ಉಳಿತಾಯ ಮಿತಿ 50 ರೂಪಾಯಿ ಇದ್ದದ್ದು ಏಕೆ? ಎಂಬುವುದಾಗಿ ಪ್ರಶ್ನಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕನಿಷ್ಠ ಮೊತ್ತವನ್ನು ಕಡಿಮೆ ಮಾಡುವ ಸಾಧ್ಯತೆಯನ್ನು ಬಿಎಂಆರ್‌ಸಿಎಲ್ ಅಧಿಕಾರಿ ತಳ್ಳಿಹಾಕಿದ್ದಾರೆ. ಅದೇ ರೀತಿ, ಕ್ಯೂಆರ್ ಕೋಡ್ ಟಿಕೆಟ್‌ಗಳ ಮೇಲಿನ ಶೇಕಡ 5 ರಷ್ಟು ರಿಯಾಯಿತಿಯನ್ನು ಕೂಡ ಮರುಸ್ಥಾಪಿಸಲಾಗುವುದಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಯಾಣ ದರ ಹೆಚ್ಚಳವು ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತಿರುವಂತೆ ತೋರುತ್ತಿದೆ ಎಂದು ವರದಿ ಹೇಳಿದೆ.

ದರ ಏರಿಕೆ ಜಾರಿಗೆ ಬಂದ ನಂತರದ ವಾರದ ಮೊದಲ ದಿನವಾದ ಸೋಮವಾರ, ಒಟ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ 8,28,149 ರಷ್ಟಿತ್ತು. ಈ ವರ್ಷದ ನಾಲ್ಕು ಸೋಮವಾರಗಳಲ್ಲಿ (ಜನವರಿ 13, ಮಕರ ಸಂಕ್ರಾಂತಿಯ ಮುನ್ನಾದಿನ ಹೊರತುಪಡಿಸಿ) ದಾಖಲಾದ 8.8 ಲಕ್ಷ ಪ್ರಯಾಣಿಕರ ಸಂಖ್ಯೆಗಿಂತ ಇದು ಶೇಕಡಾ 6 ರಷ್ಟು ಕಡಿಮೆಯಾಗಿದೆ.

ಪ್ರಯಾಣ ದರ ಏರಿಕೆಯ ನಂತರ ದಿನಕ್ಕೆ ಹೆಚ್ಚುವರಿಯಾಗಿ 55-60 ಲಕ್ಷ ರೂಪಾಯಿ ಗಳಿಸುವ ಅಂದಾಜು ಮಾಡಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 1-2 ರಷ್ಟು ಇಳಿಕೆ ನಿರೀಕ್ಷಿಸಿದೆ.

2025ರ ನಂತರ ಪ್ರತಿ ಸೋಮವಾರ ಪ್ರಯಾಣಿಸಿದವರ ಸಂಖ್ಯೆ

ಜನವರಿ 6: 8,61,593

ಜನವರಿ 13: 7,84,539 (ಸಂಕ್ರಾಂತಿ ರಜಾ ದಿನ)

ಜನವರಿ 20: 8,79,537

ಜನವರಿ 27: 9,09,756

ಫೆಬ್ರವರಿ 3: 8,70,147

ಫೆಬ್ರವರಿ 10: 8,28,149

ಫೆಬ್ರವರಿ 11: 7,78,774 (ಮಂಗಳವಾರ)

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...

ಬಿಜೆಪಿ ಆಡಳಿತದಲ್ಲಿ 151 ಅಂಬೇಡ್ಕರ್ ಪ್ರತಿಮೆಗಳ ಧ್ವಂಸ: ಅಖಿಲೇಶ್ ಯಾದವ್ ಆರೋಪ

ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತದ ಅವಧಿಯಲ್ಲಿ 72 ಜಿಲ್ಲೆಗಳಲ್ಲಿ ಬಾಬಾಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ 151 ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ. ಆದರೆ ಈವರೆಗೆ ಕೇವಲ 14 ಮಂದಿಯನ್ನು ಮಾತ್ರ ಬಂಧಿಸಲಾಗಿದೆ ಎಂದು ಸಮಾಜವಾದಿ ಪಕ್ಷದ...

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...