Homeಮುಖಪುಟನಿರ್ಮಾಣ ಹಂತದಲ್ಲೆ ಕುಸಿದ ‘ನಮೋ’ ಕಾಲೇಜ್; ‘ಬ್ರಾಂಡ್‌ನೇಮ್‌ ಎಫೆಕ್ಟ್‌‌? - ಮಾಜಿ ಐಎಎಸ್‌ ಪ್ರಶ್ನೆ!

ನಿರ್ಮಾಣ ಹಂತದಲ್ಲೆ ಕುಸಿದ ‘ನಮೋ’ ಕಾಲೇಜ್; ‘ಬ್ರಾಂಡ್‌ನೇಮ್‌ ಎಫೆಕ್ಟ್‌‌? – ಮಾಜಿ ಐಎಎಸ್‌ ಪ್ರಶ್ನೆ!

- Advertisement -
- Advertisement -

ಗುಜರಾತ್‌ ಬಳಿಯ ಕೇಂದ್ರಾಡಳಿತ ಪ್ರದೇಶವಾದ ದಾನಾದ ಸಿಲ್ವಾಸಾದಲ್ಲಿ 139 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ‘ನಮೋ’ ವೈದ್ಯಕೀಯ ಕಾಲೇಜಿನ ಮೇಲ್ಚಾವಣಿ ನಿಮಾರ್ಣ ಹಂತದಲ್ಲೆ ಕುಸಿದು ಬಿದ್ದಿದೆ. ಇದನ್ನು ಪ್ರಧಾನಿ ಮೋದಿಗೆ ಟ್ವಿಟರ್‌ನಲ್ಲಿ ಟ್ಯಾಗ್ ಮಾಡಿರುವ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್ ಗೋಪಿನಾಥ್‌, ‘ಇದ ಮುಂಬರುವ ದಿನಗಳ ಚಿತ್ರಣವೇ’ ಎಂದು ಪ್ರಶ್ನಿಸಿದ್ದಾರೆ.

ಗುರುವಾರದಂದು ಈ ಘಟನೆ ನಡೆದಿದೆ ಎಂದು ದೈನಿಕ್ ಭಾಸ್ಕರ್‌ ಪತ್ರಿಕೆ ವರದಿ ಮಾಡಿದ್ದು, ಯಾವುದೆ ಜೀವ ಹಾನಿ ಆಗಿಲ್ಲ ಎಂದು ಅದು ಹೇಳಿದೆ. ನಿರ್ಮಾಣ ಕಾರ್ಯದ ಗುಣಮಟ್ಟ ಮತ್ತು ಭವಿಷ್ಯದಲ್ಲಿ ಇಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆ ಜನರಲ್ಲಿ ವಿವಿಧ ಪ್ರಶ್ನೆಗಳು ಉಧ್ಭವಿಸಿದೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಒಂದು ವರ್ಷದಲ್ಲಿ ಪ್ರಧಾನಿ ಮೋದಿ ಜನಪ್ರಿಯತೆ 66% ರಿಂದ 24% ಕ್ಕೆ ಕುಸಿತ: ಇಂಡಿಯಾ ಟುಡೆ ಸಮೀಕ್ಷೆ

ಘಟನೆ ವರದಿಯಾದ ತಕ್ಷಣ ದಾನ ಆಡಳಿತ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದಾರೆ. ಆದರೆ ಈ ಸಮಯದಲ್ಲಿ ಸ್ಥಳದಲ್ಲೆ ಅವರು ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ದೈನಿಕ್ ಭಾಸ್ಕರ್‌ ಹೇಳಿದೆ.

ಘಟನೆ ಬಗ್ಗೆ ಟ್ವಿಟರ್‌ನಲ್ಲಿ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್ ಗೋಪಿನಾಥ್‌ ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ, “ಆತ್ಮೀಯ ಪ್ರಧಾನಿ ನರೇಂದ್ರ ಮೋದಿಯವರೆ, ಸಿಲ್ವಾಸಾದಿಂದ ಸಂಕಷ್ಟಕರ ಸುದ್ದಿ ಬರುತ್ತಿದೆ. ನಿರ್ಮಾಣ ಹಂತದಲ್ಲಿರುವ ‘ನಮೋ’ ವೈದ್ಯಕೀಯ ಕಾಲೇಜಿನ ಮುಂಭಾಗ ಕುಸಿದು ಬಿದ್ದಿದೆ. ಇದ ಮುಂಬರುವ ದಿನಗಳ ಚಿತ್ರಣವೇ? ಅಥವಾ ನಿಮ್ಮ ಬ್ರ್ಯಾಂಡ್ ಅನ್ನು ವ್ಯಾಖ್ಯಾನಿಸುವ ಅಗ್ಗದ ವಸ್ತುಗಳ ಸಂಕೇತವೇ?” ಎಂದು ಚಿತ್ರದ ಸಮೇತ ಟ್ವೀಟ್ ಮಾಡಿದ್ದಾರೆ.

139 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವೈದ್ಯಕೀಯ ಕಾಲೇಜಿನ ನಿರ್ಮಾಣ ಕಾರ್ಯ ಆರಂಭವಾದಾಗಿನಿಂದಲೂ, ದಾನಾ ಮತ್ತು ದಮನ್-ದಿಯು ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಮತ್ತು ಇತರ ಅಧಿಕಾರಿಗಳು ಕಾಲಕಾಲಕ್ಕೆ ಈ ನಿರ್ಮಾಣ ಕಾರ್ಯವನ್ನು ಪರಿಶೀಲಿಸುತ್ತಲೆ ಇದ್ದರು. ಅದಾಗ್ಯೂ, ಅವಘಡ ಸಂಭವಿಸಿದ್ದು ರಾಜ್ಯದಲ್ಲಿ ಚರ್ಚೆಯಾಗುತ್ತಿದೆ ಎಂದು ದೈನಿಕ್ ಭಾಸ್ಕರ್‌ ಪತ್ರಿಕೆ ಹೇಳಿದೆ.

ಇದನ್ನೂ ಓದಿ: ಅಬಕಾರಿ ಶುಂಕ: ಮೋದಿ ಸರ್ಕಾರದಿಂದ 4 ಲಕ್ಷ ಕೋಟಿ ಬೃಹತ್ ದೇಶದ್ರೋಹಿ ಭ್ರಷ್ಟಾಚಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...