Homeಅಂತರಾಷ್ಟ್ರೀಯಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

- Advertisement -
- Advertisement -

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ ನೆಟ್‌ವರ್ಕಿಂಗ್ ಮತ್ತು ಹೂಡಿಕೆಯ ಚರ್ಚೆಗಳಿಗೆ ಸೀಮಿತವಾಗಿದ್ದರೂ ಸಹ, ಈ ಹಿಂದೆ ಬಿಜೆಪಿ ನೀಡಿದ್ದ ಸ್ಪಷ್ಟನೆಯನ್ನು ಇವು ಪ್ರಶ್ನಿಸುವಂತೆ ಮಾಡಿವೆ. ಪುರಿಯವರ ಹೆಸರನ್ನು ಎಪ್‌ಸ್ಟೀನ್ ಕೇವಲ ‘ಸಾಂದರ್ಭಿಕವಾಗಿ ಬಳಸಿದ್ದಾರೆ’ ಎಂಬ ಬಿಜೆಪಿಯ ವಾದವು ಈಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಏಕೆಂದರೆ ಈ-ಇಮೇಲ್‌ಗಳು ಇಬ್ಬರ ನಡುವೆ ನಿಕಟ ಸಂಪರ್ಕವಿತ್ತೆಂದು ಸೂಚಿಸುತ್ತಿವೆ ಎಂದು ದಿ ವೈರ್ ವರದಿ ಮಾಡಿದೆ.

ಅಮೆರಿಕದ ನ್ಯಾಯ ಇಲಾಖೆಯು ಜನವರಿ 30, 2026ರಂದು ಬಿಡುಗಡೆ ಮಾಡಿರುವ ಸುಮಾರು 30 ಲಕ್ಷ ಪುಟಗಳ ಜೆಫ್ರಿ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್‌ಸ್ಟೀನ್‌ ನಡುವಿನ ಇ-ಮೇಲ್ ಸಂಭಾಷಣೆಗಳು ಲಭ್ಯವಾಗಿವೆ. ಪುರಿಯವರು ಎಪ್‌ಸ್ಟೀನ್ ಅನ್ನು ಆತನ ನ್ಯೂಯಾರ್ಕ್‌ನ ಮನೆಯಲ್ಲಿ ಕನಿಷ್ಠ ಮೂರು ಬಾರಿ (ಫೆಬ್ರವರಿ 4, 2015, ಜನವರಿ 6, 2016 ಮತ್ತು ಮೇ 19, 2017) ಭೇಟಿಯಾಗಿದ್ದರು ಎಂದು ದಾಖಲೆಗಳು ದೃಢಪಡಿಸಿವೆ. ಎಪ್‌ಸ್ಟೀನ್‌ ಲಿಂಕ್ಡ್‌ಇನ್ ಸಹ-ಸಂಸ್ಥಾಪಕ ರೀಡ್ ಹಾಫ್‌ಮನ್ ಸೇರಿದಂತೆ ಸಿಲಿಕಾನ್ ವ್ಯಾಲಿಯ ಪ್ರಮುಖ ಹೂಡಿಕೆದಾರರೊಂದಿಗೆ ಪುರಿಯವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಪುರಿಯವರು ಈ ಸಂಭಾಷಣೆಗಳಲ್ಲಿ ಪ್ರಧಾನಿ ಮೋದಿಯವರ ‘ಡಿಜಿಟಲ್ ಇಂಡಿಯಾ’ ಮತ್ತು ‘ಮೇಕ್ ಇನ್ ಇಂಡಿಯಾ’ ಯೋಜನೆಗಳ ಬಗ್ಗೆ ವಿವರಿಸಿದ್ದರು. ಅಂದಿನ ಸಮಯದಲ್ಲಿ ಪುರಿಯವರು ಯಾವುದೇ ಸಾರ್ವಜನಿಕ ಹುದ್ದೆಯಲ್ಲಿರಲಿಲ್ಲ ಎಂದು ವರದಿ ವಿವರಿಸಿದೆ.

ಈ ಹಿಂದೆ ಬಿಜೆಪಿ ಈ ಸಂಪರ್ಕವನ್ನು ಕೇವಲ ಎಪ್‌ಸ್ಟೀನ್‌ “ಹೆಸರು ಹೇಳಿಕೊಳ್ಳುವಿಕೆ” (name-dropping) ಎಂದು ತಳ್ಳಿಹಾಕಿತ್ತು. ಆದರೆ, ಹೊಸ ಇ-ಮೇಲ್‌ಗಳು ಇಬ್ಬರ ನಡುವೆ ನಿರಂತರ ಮತ್ತು ವ್ಯವಹಾರಿಕ ಪರಿಚಿತತೆ ಇತ್ತೆಂದು ತೋರಿಸುತ್ತಿವೆ. ಎಪ್‌ಸ್ಟೀನ್‌ನ ಇಮೇಲ್‌ಗಳಲ್ಲಿ ಭಾರತದ ಪ್ರಧಾನಿ ಮತ್ತು ಇತರರ ಬಗ್ಗೆ ಇರುವ ಉಲ್ಲೇಖಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ “ಅಪರಾಧಿಯ ನಿರರ್ಥಕ ಮಾತುಗಳು” ಎಂದು ತಿರಸ್ಕರಿಸಿದೆ ಎಂದು ವರದಿ ಹೇಳಿದೆ.

ಎಪ್‌ಸ್ಟೀನ್‌ ಜೊತೆ ಇ-ಮೇಲ್ ಸಂಭಾಷಣೆಗಳು ನಡೆದ ಸಮಯದಲ್ಲಿ ಹರ್ದೀಪ್‌ ಸಿಂಗ್ ಪುರಿಯವರು ಯಾವುದೇ ಸಾರ್ವಜನಿಕ ಅಥವಾ ಸರ್ಕಾರಿ ಹುದ್ದೆಯನ್ನು ಹೊಂದಿರಲಿಲ್ಲ. ವೃತ್ತಿಪರ ರಾಜತಾಂತ್ರಿಕರಾಗಿದ್ದ ಅವರು, ಭಾರತೀಯ ವಿದೇಶಾಂಗ ಸೇವೆಯಿಂದ ನಿವೃತ್ತರಾದ ನಂತರ, ನ್ಯೂಯಾರ್ಕ್‌ನಲ್ಲಿರುವ ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ ಎಂಬ ಪ್ರಮುಖ ಥಿಂಕ್-ಟ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 2014ರಲ್ಲಿ ಬಿಜೆಪಿ ಸೇರಿದರು ಮತ್ತು ಸುಮಾರು ಮೂರು ವರ್ಷಗಳ ನಂತರ, ಅಂದರೆ ಸೆಪ್ಟೆಂಬರ್ 2017ರಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಸ್ತುತ, ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಪ್ರಸ್ತುತ ಬಿಡುಗಡೆಯಾದ ಫೈಲ್‌ಗಳು ಇ-ಮೇಲ್ ವೇಳಾಪಟ್ಟಿಗಳು, ಸಭೆಗಳ ದೃಢೀಕರಣ ಮತ್ತು ಭಾರತದ ಇಂಟರ್ನೆಟ್ ಆರ್ಥಿಕತೆಯ ವ್ಯವಹಾರಿಕ ಅವಕಾಶಗಳ ಬಗ್ಗೆ ನಡೆದ ಗಂಭೀರ ಚರ್ಚೆಗಳನ್ನು ಒಳಗೊಂಡಿವೆ. ಮುಖ್ಯವಾಗಿ, ಈ ಇ-ಮೇಲ್‌ಗಳು ಎಪ್‌ಸ್ಟೀನ್‌ ಭಾಗಿಯಾಗಿದ್ದ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿವೆ. ಈ ಸಂಭಾಷಣೆಗಳು ಕೇವಲ ಹೂಡಿಕೆ ಮತ್ತು ವಾಣಿಜ್ಯ ವಿಷಯಗಳಿಗೆ ಮಾತ್ರ ಸೀಮಿತವಾಗಿದ್ದವು ಎಂಬುದು ಇಲ್ಲಿ ಗಮನಾರ್ಹ ಅಂಶವಾಗಿದೆ.

ಜೆಫ್ರಿ ಎಪ್‌ಸ್ಟೀನ್‌ನ ಸಂಪೂರ್ಣ ಕ್ರಿಮಿನಲ್ ಹಿನ್ನೆಲೆ 2018ರ ಸುಮಾರಿಗೆ ಜಗತ್ತಿಗೆ ಬಹಿರಂಗವಾಯಿತು. ಆದರೆ, ಅದಕ್ಕೂ ಮೊದಲೇ ಅಂದರೆ 2008ರಲ್ಲಿಯೇ ಫ್ಲೋರಿಡಾದಲ್ಲಿ ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆಯ ಆರೋಪದ ಮೇಲೆ ಆತ ಶಿಕ್ಷೆಗೆ ಒಳಗಾಗಿದ್ದ. ಆದಾಗ್ಯೂ, ಆತ ಯುಎಸ್‌ನ ಶ್ರೀಮಂತ ಮತ್ತು ಪ್ರಸಿದ್ಧ ವ್ಯಕ್ತಿಗಳಿಗೆ ದಲ್ಲಾಳಿಯಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿದ್ದ. ಅವರಲ್ಲಿ ಹೆಚ್ಚಿನವರು ಈಗ ಆತನೊಂದಿಗೆ ಸಂಬಂಧ ಹೊಂದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯವು ಎಪ್‌ಸ್ಟೀನ್ ಒಬ್ಬ ‘ಶಿಕ್ಷೆಗೊಳಗಾದ ಅಪರಾಧಿ’ ಎಂಬ ಅಂಶವನ್ನು ಒತ್ತಿಹೇಳಿದೆ. ಈ ಉಲ್ಲೇಖವು 2008 ರ ಶಿಕ್ಷೆಯಾಗಿದೆ. ಅಪ್ರಾಪ್ತ ವಯಸ್ಕರ ಲೈಂಗಿಕ ಕಳ್ಳಸಾಗಣೆಗಾಗಿ ಫೆಡರಲ್ ಆರೋಪದ ಮೇಲೆ ಜುಲೈ 2019ರಲ್ಲಿ ಎಪ್‌ಸ್ಟೀನ್ ಅನ್ನು ಮತ್ತೆ ಬಂಧಿಸಲಾಗಿತ್ತು. ಇದಾಗಿ, ಒಂದು ತಿಂಗಳಿಗೆ ಆತ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಎನ್ನಲಾಗಿದೆ.

“ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖವಾಗಿ ಎಂಬ ವಿಷಯದ ಕುರಿತು ಪ್ರತಿಕ್ರಿಯೆ ಕೋರಿ ನಾವು ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಪರ್ಕಿಸಿದ್ದೆವು, ಈ ವೇಳೆ ಅವರು ಎಪ್‌ಸ್ಟೀನ್ ಜೊತೆಗಿನ ಭೇಟಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಈ ಭೇಟಿಗಳು ಕೇವಲ ವ್ಯವಹಾರಿಕ ಉದ್ದೇಶಕ್ಕೆ ಸೀಮಿತವಾಗಿದ್ದವು ಎಂದು ಸ್ಪಷ್ಟಪಡಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿದ್ದ ಎಂಟು ವರ್ಷಗಳ ಅವಧಿಯಲ್ಲಿ ನಾನು ಆತನನ್ನು ಕೇವಲ ಮೂರು ಬಾರಿ ಮಾತ್ರ ಭೇಟಿಯಾಗಿದ್ದೆ. ಈ ಎಲ್ಲಾ ಭೇಟಿಗಳು ತಾನು ‘ಇಂಟರ್ನ್ಯಾಷನಲ್ ಪೀಸ್ ಇನ್‌ಸ್ಟಿಟ್ಯೂಟ್’ನಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ನಡೆದವು ಎಂದು ಹೇಳಿದ್ದಾರೆ. ಎಪ್‌ಸ್ಟೀನ್‌ನ ಅಪರಾಧ ಹಿನ್ನೆಲೆಯ ಬಗ್ಗೆ ಆ ಸಮಯದಲ್ಲಿ ತನಗೆ ಯಾವುದೇ ಅರಿವಿರಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ” ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...