Homeಮುಖಪುಟನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

ನಂದಿಗ್ರಾಮ ಫಲಿತಾಂಶ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸುವೇಂದು ಅಧಿಕಾರಿ

- Advertisement -
- Advertisement -

ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಒಂದು ಕಡೆ ನಡೆಯುತ್ತಿದ್ದರೇ, ಮತ್ತೊಂದೆಡೆ ಸುವೇಂದು ಅಧಿಕಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ಹೊಸ ಬೆಳವಣಿಗೆಗೆ ಕಾರಣವಾಗಿದ್ದಾರೆ.

ಬುಧವಾರ ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶರಾದ ಶಂಪಾ ಸರ್ಕಾರ್, ಚುನಾವಣಾ ಆಯೋಗಕ್ಕೆ ಮತ್ತು ಚುನಾವಣಾ ರಿಟರ್ನಿಂಗ್ ಅಧಿಕಾರಿಗೆ ನೋಟಿಸ್ ನೀಡಬೇಕು ಎಂದು ಹೇಳಿದ್ದಾರೆ. ಜೊತೆಗೆ  ಮತದಾನಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು (EVMs) ಸಂರಕ್ಷಿಸಬೇಕು ಎಂದು ಆದೇಶಿಸಿದ್ದರು.

ಹೊಸ ಬೆಳವಣಿಗೆಯಲ್ಲಿ ನಂದಿಗ್ರಾಮದ ಶಾಸಕ ಬಿಜೆಪಿಯ ಸುವೇಂದು ಅಧಿಕಾರಿ, ಮಮತಾ ಬ್ಯಾನರ್ಜಿಯವರ ಅರ್ಜಿ ವಿಚಾರಣೆಯನ್ನು ಬೇರೆ ರಾಜ್ಯಗಳಿಗೆ ವರ್ಗಾಯಿಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಆದರೆ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಬೇರೆಡೆ ದೊಡ್ಡ ಜಯ ಸಾಧಿಸಿದೆ. ಅನೇಕ ತಿರುವುಗಳನ್ನು ಕಂಡು, ನಿಧಾನಗತಿಯ ಮತಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 2,000 ಕ್ಕಿಂತ ಕಡಿಮೆ ಮತಗಳಿಂದ ಸೋತಿದ್ದಾರೆ ಎಂದು ಘೋಷಿಸಲಾಗಿತ್ತು.

ಇದನ್ನೂ ಓದಿ: ನಂದಿಗ್ರಾಮ ಚುನಾವಣೆಯ ಇವಿಎಂ ಸಂರಕ್ಷಿಸಿ ಎಂದು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ಈ ತೀರ್ಪಿನ ವಿರುದ್ಧ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆಗೆ ಮನವಿ ಮಾಡಿದ್ದರು. ಆದರೆ, ಚುನಾವಣಾ ಆಯೋಗ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಮಮತಾ, ಕೋಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಬುಧವಾರ ಆನ್‌ಲೈನ್ ವಿಚಾರಣೆಗೆ ಹಾಜರಾಗಿದ್ದ ಮಮತಾ ಬ್ಯಾನರ್ಜಿ, ಸುವೇಂದು ಅಧಿಕಾರಿ ವಿರುದ್ಧ ಲಂಚ, ದ್ವೇಷ ಮತ್ತು ದ್ವೇಷದ ಪ್ರಚಾರ, ಬೂತ್ ಆಕ್ರಮಣ ಮತ್ತು ಧರ್ಮದ ಆಧಾರದ ಮೇಲೆ ಮತಗಳನ್ನು ಬೇಡುವುದು ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ.

ಈ ಮೊದಲು ನಂದಿಗ್ರಾಮ ಚುನಾವಣೆಯ ವಿಚಾರಣೆ ನಡೆಸುತ್ತಿದ್ದ ಕೊಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಕೌಶಿಕ್ ಚಂದಾ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ. ಇದು ಪಕ್ಷಪಾತಕ್ಕೆ ಕಾರಣವಾಗಬಹುದು ಎಂದು ಉಲ್ಲೇಖಿಸಿ ಬದಲಾಯಿಸುವಂತೆ ಮಮತಾ ಬ್ಯಾನರ್ಜಿ ಅರ್ಜಿ ಸಲ್ಲಿಸಿದ್ದರು. ಬ್ಯಾನರ್ಜಿಗೆ 5 ಲಕ್ಷ ರೂಪಾಯಿ ದಂಡ ವಿಧಿಸಿ, ಪ್ರಕರಣದಿಂದ ಹೊರ ಬಂದಿದ್ದ ನ್ಯಾಯಮೂರ್ತಿ ಕೌಶಿಕ್ ಚಂದಾ,  ಇದು ಮಮತಾ ಬ್ಯಾನರ್ಜಿ ಅವರ ನ್ಯಾಯಾಧೀಶರನ್ನು ಕೆಣಕುವ ಪೂರ್ವಯೋಜಿತ ಕ್ರಮ ಮತ್ತು ಅವರ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.


ಇದನ್ನೂ ಓದಿ: ಬಹುಜನ ಭಾರತ: ನಂದಿಗ್ರಾಮ ಬರೆಯಲಿದೆಯೇ ಜನತಂತ್ರದ ಭವಿಷ್ಯವನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...