Homeಮುಖಪುಟನಂದಿಗ್ರಾಮ: ಮಮತಾ ಬ್ಯಾನರ್ಜಿ ಆರೋಪ ತಪ್ಪು ಎಂದ ಚುನಾವಣಾ ಆಯೋಗ

ನಂದಿಗ್ರಾಮ: ಮಮತಾ ಬ್ಯಾನರ್ಜಿ ಆರೋಪ ತಪ್ಪು ಎಂದ ಚುನಾವಣಾ ಆಯೋಗ

- Advertisement -
- Advertisement -

ಕಳೆದ ವಾರ ನಡೆದ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ನಂದಿಗ್ರಾಮದಲ್ಲೂ ಮತದಾನವಾಗಿದೆ. ನಂದಿಗ್ರಾಮದ ಬೂತ್‌ಗಳಲ್ಲಿ ಮತ ಚಲಾವಣೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾಡಿದ್ದ ಆರೋಪ ತಪ್ಪಾಗಿದೆ ಎಂದು ದೂರನ್ನು ಚುನಾವಣಾ ಆಯೋಗ ವಜಾಗೊಳಿಸಿದೆ.

ಬ್ಯಾನರ್ಜಿಯವರ ದೂರು ಸರಿಯಿಲ್ಲ ಎಂದಿರುವ ಆಯೋಗ ನಂದಿಗ್ರಾಮದ ಮತದಾನ ಕೇಂದ್ರವೊಂದರಲ್ಲಿ ಅವರ ವರ್ತನೆ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು, ವಿಚಾರಣಾ ಹಂತದಲ್ಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಇದನ್ನೂ ಓದಿ: ಅಸ್ಸಾಂ: ಬಿಜೆಪಿ ಮುಖಂಡನ ಮೇಲಿನ ಪ್ರಚಾರ ನಿಷೇಧ ಅರ್ಧ ತೆರವುಗೊಳಿಸಿದ ಚುನಾವಣಾ ಆಯೋಗ!

ಮಮತಾ ಬ್ಯಾನರ್ಜಿಯವರ ಕೈಬರಹದ ದೂರನ್ನು “ವಾಸ್ತವಿಕವಾಗಿ ತಪ್ಪಾಗಿದೆ” ಎಂದು ಕರೆದ ಆಯೋಗವು, ಮತದಾನ ಕೇಂದ್ರದಲ್ಲಿ ಬ್ಯಾನರ್ಜಿಯ ವರ್ತನೆಯು “ಕಾನೂನು ಮತ್ತು ಪಶ್ಚಿಮ ಬಂಗಾಳದ ಮೇಲೆ ಮತ್ತು ಇತರ ರಾಜ್ಯಗಳಲ್ಲಿ ಪ್ರತಿಕೂಲ ಪರಿಣಾಮ ಬೀರುವ ಅಪಾರ ಸಾಮರ್ಥ್ಯವನ್ನು ಹೊಂದಿದೆ” ಎಂದು ಹೇಳಿದೆ.

ಪಶ್ಚಿಮ ಬಂಗಾಳ ಚುನಾವಣೆಯ ಕೇಂದ್ರಬಿಂದುವಾಗಿದ್ದ ನಂದಿಗ್ರಾಮದಲ್ಲಿ ಚುನಾವಣೆಗೆ ಸಂಬಂಧಿಸಿದಂತೆ  ನಡೆಯುತ್ತಿರುವ ಘಟನೆಗಳ ಕುರಿತು, ಬಿಜೆಪಿ ಬೆಂಬಲಿಗರು ಬೂತ್‌ಗಳನ್ನು ವಶಪಡಿಸಿಕೊಂಡಿರುವ ಕುರಿತು ಚುನಾವಣಾ ಆಯೋಗಕ್ಕೆ ಸುಮಾರು 63 ದೂರುಗಳನ್ನು ಟಿಎಂಸಿ ನೀಡಿತ್ತು. ದೂರು ನೀಡಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರು.

ಮತದಾನ ಕೇಂದ್ರವೊಂದರ ಬಳಿಯಿಂದಲೇ ರಾಜ್ಯಪಾಲರಿಗೆ ಕರೆ ಮಾಡಿ ಚುನಾವಣೆಗೆ ಬಿಜೆಪಿ ಬೆಂಬಲಿಗರು ಅಡ್ಡಿ ಪಡಿಸುತ್ತಿದ್ದಾರೆ ಎಂದು ದೂರು ನೀಡಿದ್ದರು.


ಇದನ್ನೂ ಓದಿ: ನಂದಿಗ್ರಾಮ: ಬಿಜೆಪಿ ಕಾರ್ಯಕರ್ತರಿಂದ ಬೂತ್ ವಶ ಎಂದು ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...