Homeಕರ್ನಾಟಕದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

ದೇಶ-ವಿದೇಶದಲ್ಲೂ ನಂದಿನಿ ಹಾಲು ಲಭ್ಯ, ಬೆಂಗಳೂರಿನಲ್ಲಿ ಮಾತ್ರ ಲಭ್ಯವಿಲ್ಲ!: ಇದು ಕೃತಕ ಅಭಾವದ ಸೃಷ್ಟಿನಾ?

- Advertisement -
- Advertisement -

ದೇಶ- ವಿದೇಶಗಳಲ್ಲೂ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಲಭ್ಯವಾಗುತ್ತಿದೆ. ಆದರೆ ಸ್ಥಳೀಯವಾಗಿ ಕರ್ನಾಟಕದಲ್ಲಿ ಮಾತ್ರ ನಂದಿನಿ ಹಾಲು ಸಿಗುತ್ತಿಲ್ಲ. ಬೆಂಗಳೂರಿನ ನಂದಿನಿ ಮಿಲ್ಕ್ ಪಾರ್ಲರ್‌ ಗಳಲ್ಲಿ ನಂದಿನಿ ಉತ್ಪನ್ನಗಳು ಸಿಗುತ್ತಿಲ್ಲ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಸೇರಿ ವಿವಿಧ ದೇಶಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಿಗುತ್ತವೆ. ಪ್ರಮುಖವಾಗಿ ಸಿಂಗಪುರ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ನಂದಿನಿ ಹಾಲಿನ ಉತ್ಪನ್ನಗಳು ಪೂರೈಕೆಯಾಗುತ್ತಿವೆ.

ರಾಜ್ಯದಲ್ಲಿ ನಂದಿನಿ ಉತ್ಪನ್ನ ಪೂರೈಕೆ ಕಡಿಮೆಯಾಗಿರುವುದನ್ನೇ ನೋಡಿಕೊಂಡು ಅಮುಲ್ ಹಾಲು ಮತ್ತು ಮೊಸರನ್ನು ಇ–ಕಾಮರ್ಸ್‌ ಮೂಲಕ ಮಾರುಕಟ್ಟೆಗೆ ಪ್ರವೇಶ ಮಾಡಿಸಲಾಗುತ್ತಿದೆ. ಈ ಹಿಂದೆ ಕೆಎಂಎಫ್ ಮತ್ತು ಅಮುಲ್ ವಿಲೀನದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಸ್ತಾಪಿಸಿದ್ದರು. ಆದರೆ ರಾಜ್ಯದಲ್ಲಿ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಇದೀಗ ಕೃತಕ ಅಭಾವ ಸೃಷ್ಟಿಸಿ, ಅಮುಲ್‌ನ್ನು ರಾಜ್ಯದಲ್ಲಿ ಪ್ರವೇಶ ಮಾಡಿಸಲಾಗುತ್ತಿದೆ ಎನ್ನುವ ಅನುಮಾನ ರೈತರು ಮತ್ತು ಗ್ರಾಹಕರಲ್ಲಿ ಮೂಡಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು, ”ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು” ಎಂದಿದ್ದಾರೆ.

”ಇಲ್ಲಿನ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್ʼನ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ಬಂದು ಹೋದ ಬಳಿಕ ರಾಜ್ಯದಲ್ಲಿ ಹೈನುಗಾರಿಕೆ ಹೆಚ್ಚಾಗಿತ್ತು, ಅದರಂತೆ ಹಾಲು ಶೇಖರಣೆ ಪ್ರಮಾಣವೂ ಹೆಚ್ಚಾಗಿತ್ತು. ಕೆಎಮ್‌ಎಫ್‌ ದಿನಕ್ಕೆ 96 ಲಕ್ಷ ಕೆ.ಜಿ ತನಕವೂ ಹಾಲು ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿತ್ತು. ಹಾಲಿನ ಪ್ರಮಾಣ ಏರಿಕೆಯಾದ ಬಳಿಕ ಕೆಎಂಎಫ್ ತನ್ನ ಮಾರುಕಟ್ಟೆಯನ್ನು ವಿಸ್ತರಣೆ ಮಾಡಿಕೊಂಡಿದೆ. ಹಾಲಿನ ಪುಡಿ, ಐಸ್‌ಕ್ರೀಮ್, ಚೀಸ್‌, ಬೆಣ್ಣೆ, ತುಪ್ಪ, ಸಿಹಿ ತಿನಿಸು ತಯಾರಿಕೆಯನ್ನೂ ಹೆಚ್ಚಳ ಮಾಡಿಕೊಂಡಿದೆ. ಶಾಲಾ ಮಕ್ಕಳಿಗೆ, ಮಿಲಿಟರಿ ಕ್ಯಾಂಪ್‌ಗಳಿಗೆ ಗುಡ್‌ಲೈಫ್ ಹಾಲು ಪೂರೈಕೆಯಾಗುತ್ತಿದೆ.

ಆದರೆ ಕೆಲದಿನಗಳಿಂದ ಹಾಲು ಸಂಗ್ರಹ ಪ್ರಮಾಣ ಸರಾಸರಿ 76 ಲಕ್ಷ ಕೆ.ಜಿಗೆ ಇಳಿಕೆಯಾಗಿದೆ. 20 ಲಕ್ಷ ಕೆ.ಜಿ ಹಾಲು ಕಡಿಮೆಯಾಗಿದ್ದು, ಈ ವ್ಯತ್ಯಯಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಮಾತನಾಡಿ, ”ಬೇಸಿಗೆಯಲ್ಲಿ ಹಾಲು ಉತ್ಪಾದನೆ ಕಡಿಮೆಯಾಗುವುದು ಸಾಮಾನ್ಯ. ಒಂದು ದಿನ ಮಾತ್ರ 96 ಲಕ್ಷ ಕೆ.ಜಿ ತನಕ ಹೋಗಿತ್ತು. ನಿತ್ಯ ಹಾಲು ಸಂಗ್ರಹ ಪ್ರಮಾಣ ಸರಾಸರಿ 81 ಲಕ್ಷ ಕೆ.ಜಿ. ಇತ್ತು. ಈಗ 5 ಲಕ್ಷ ಕೆ.ಜಿ ಕಡಿಮೆಯಾಗಿದ್ದು, ಹಾಲಿನ ಪುಡಿ ಸೇರಿ ಬೇರೆ ಉತ್ಪನ್ನಗಳ ತಯಾರಿಕೆ ಕಡಿಮೆ ಮಾಡಿ ಗ್ರಾಹಕರಿಗೆ ಹಾಲು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಾಲು ಸಂಗ್ರಹ ಕಡಿಮೆಯಾಗುತ್ತಿರುವ ಬಗ್ಗೆ ಹಾಲು ಒಕ್ಕೂಟ ಪ್ರತಿಕ್ರಿಯಿಸಿದ್ದು, ”ರೈತರಿಂದ ಹಾಲು ಖರೀದಿಯ ದರ ಕಡಿಮೆ ಇದೆ. ಇದೇ ಕಾರಣಕ್ಕೆ ಹಾಲು ಸಂಗ್ರಹ ಪ್ರಮಾಣ ಕಡಿಮೆಯಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ”ಬೇರೆ ರಾಜ್ಯಗಳಲ್ಲಿ ರೈತರಿಂದ ಲೀಟರ್‌ ಹಾಲಿಗೆ ₹50ರಿಂದ ₹60 ತನಕ ಹಣ ಕೊಟ್ಟು ಖರೀದಿ ಮಾಡಲಾಗುತ್ತದೆ ಆದರೆ ನಮ್ಮ ರಾಜ್ಯದಲ್ಲಿ ಲೀಟರ್‌ಗೆ ಕೇವಲ ₹39 ಮಾತ್ರ ನೀಡಲಾಗುತ್ತದೆ” ಎಂದು ತಿಳಿಸಿದ್ದಾರೆ.

ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ”ದುಬಾರಿ ಪಶು ಆಹಾರ ಖರೀದಿಸಿ ಹೈನುಗಾರಿಕೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಹಾಲು ಉತ್ಪಾದನೆ ಕಡಿಮೆಯಾಗಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...