Homeಮುಖಪುಟ‘ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

‘ನಾನೂ ಗೌರಿ’ ಕಿರುಚಿತ್ರ ಬಿಡುಗಡೆ: ವಾರ್ತಾಭಾರತಿಯಿಂದ ದಿಟ್ಟ ಪತ್ರಕರ್ತೆಗೆ ಗೌರವ ಸಮರ್ಪಣೆ

- Advertisement -
- Advertisement -

ಗೌರಿ ಲಂಕೇಶ್‌ ಅವರು ಹಿಂದುತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾಗಿ ನಾಲ್ಕು ವರ್ಷಗಳಾಗಿವೆ. ಭಾನುವಾರದಂದು ಅವರ ನೆನಪಿನಲ್ಲಿ ಹಲವಾರು ಕಾರ್ಯಕ್ರಮಗಳು ನಡೆದಿವೆ. ಈ ಮೂಲಕ ದಿಟ್ಟ ಪತ್ರಕರ್ತೆಯನ್ನು ವಿಶ್ವದಾದ್ಯಂತ ಜನರು ನೆನಪಿಸಿಕೊಂಡಿದ್ದಾರೆ.

ಗೌರಿ ಲಂಕೇಶ್‌‌ ಅವರ ಹತ್ಯೆಯಾಗಿ ನಾಲ್ಕು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ‘ವಾರ್ತಾಭಾರತಿ’ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ‘ನಾನೂ ಗೌರಿ’ ಕಿರುಚಿತ್ರವನ್ನು ಭಾನುವಾರ ಸಂಜೆ ಬಿಡುಗಡೆಗೊಳಿಸಿದೆ. ಈ ಮೂಲಕ ಗೌರಿ ಲಂಕೇಶ್‌ ಅವರಿಗೆ ವಾರ್ತಾಭಾರತಿ ಪತ್ರಿಕೆ ತಮ್ಮ ಗೌರವ ಸಲ್ಲಿಸಿದೆ. ಈಗಾಗಲೆ ಸಾವಿರಾರು ಜನರು ಕಿರುಚಿತ್ರವನ್ನು ವೀಕ್ಷಿಸಿದ್ದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…!

ಇಬ್ಬರು ವ್ಯಕ್ತಿಗಳು ಯಾರದೋ ‘ಅಣತಿ’ಯಂತೆ ಗೌರಿ ಲಂಕೇಶ್‌ ಅವರನ್ನು ಕೊಂದು, ‘ಕೆಲಸ ಮುಗಿಯಿತು’ ಎಂದು ತಿಳಿಸುತ್ತಾರೆ. ಆದರೆ ಈ ಸಮಯದಲ್ಲಿ ಸಮಾಜ ಅವರಿಗೆ ಏನು ಹೇಳುತ್ತದೆ ಎಂಬುವುದು ಕಿರು ಚಿತ್ರದಲ್ಲಿ ತಿಳಿಸಲಾಗಿದೆ.

ಚಿತ್ರದ ನಿರ್ದೇಶನವನ್ನು ವಾರ್ತಾಭಾರತಿಯ ಪತ್ರಕರ್ತರಾದ ಬಾತಿಶ್ ಅವರು ನಿರ್ವಹಿಸಿದ್ದಾರೆ. ಚಿತ್ರಕ್ಕೆ ಸ್ಕ್ರಿಪ್ಟ್‌ ಮತ್ತು ಸಾಹಿತ್ಯವನ್ನು ಕೂಡಾ ಅವರೇ ಬರೆದಿದ್ದಾರೆ. ಕಿರುಚಿತ್ರವನ್ನು ಕೆಳಗೆ ವೀಕ್ಷಿಸಬಹುದಾಗಿದೆ.

ಕಿರುಚಿತ್ರ ಮಾತ್ರವಲ್ಲದೆ, ವಾರ್ತಾಭಾರತಿ ಪತ್ರಿಕೆಯು ಗೌರಿ ಲಂಕೇಶ್‌‌‌ ನೆನಪಿನಲ್ಲಿ ಸಂದರ್ಶನ, ಕವನ ವಾಚನ, ಸಂವಾದ ಸೇರಿದಂತೆ ದಿನವಿಡಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು.

ಗೌರಿ ಲಂಕೇಶ್ ಅವರ ನೆನಪಿನಲ್ಲಿ ಭಾನುವಾರ (ಸೆಪ್ಟಂಬರ್ 05) ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹುತಾತ್ಮರಾದ ಗೌರಿ ಲಂಕೇಶ್ ಅವರಿಗೆ ಹೋರಾಟದ ವಂದನೆಗಳನ್ನು ಅವರ ಸಮಾಧಿ ಬಳಿಗೆ ತೆರಳಿ ಸಲ್ಲಿಸಲಾಯಿತು.


 

ಇದನ್ನೂ ಓದಿ: ಗೌರಿ ಲಂಕೇಶ್ ದಿನ: ’ಗೌರಿ ನೆನಹು’ ಕಾರ್ಯಕ್ರಮದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತುಂಬಾ ಚೆನ್ನಾಗಿದೆ. ಮೂಲಭೂತವಾದಿಗಳ ವಿರುದ್ಧದ ಮಾನವೀಯ ಧ್ವನಿ ಎಂದಿಗೂ ಸಾಯದು ಎಂಬ ಎಚ್ಚರಿಕೆಯನ್ನು ಈ ಕಿರು ಚಿತ್ರದ ಮೂಲಕ ನೀಡಿದ್ದೀರಿ. ಧನ್ಯವಾದಗಳು.-ವೆಂಕಟೇಶ ಮಾನು

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...