Homeಮುಖಪುಟನಾರದಾ ಪ್ರಕರಣ: ನಾಲ್ವರು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದ ಕೊಲ್ಕತ್ತಾ ಹೈಕೋರ್ಟ್

ನಾರದಾ ಪ್ರಕರಣ: ನಾಲ್ವರು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದ ಕೊಲ್ಕತ್ತಾ ಹೈಕೋರ್ಟ್

- Advertisement -

ನಾರದಾ ಪ್ರಕರಣದಲ್ಲಿ ಮೇ 17 ರಂದು ಕೇಂದ್ರ ತನಿಖಾ ಸಂಸ್ಥೆ (ಸಿಬಿಐ)ಯಿಂದ ಬಂಧಿಸಲ್ಪಟ್ಟ ಪಶ್ಚಿಮ ಬಂಗಾಳದ ಇಬ್ಬರು ಮಂತ್ರಿಗಳು ಸೇರಿದಂತೆ ನಾಲ್ವರು ರಾಜಕಾರಣಿಗಳಿಗೆ ಶುಕ್ರವಾರ ಕೊಲ್ಕತ್ತಾ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.

ಕೊಲ್ಕತ್ತಾ ಹೈಕೋರ್ಟ್‌ನ ಐದು ನ್ಯಾಯಾಧೀಶರ ನ್ಯಾಯಪೀಠ ಶುಕ್ರವಾರ ಟಿಎಂಸಿ ನಾಯಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್, ಮದನ್ ಮಿತ್ರ ಮತ್ತು ಮಾಜಿ ಮೇಯರ್ ಮತ್ತು ಮಾಜಿ ಟಿಎಂಸಿ ಸದಸ್ಯ ಸೋವನ್ ಚಟರ್ಜಿ ಅವರಿಗೆ ಮಧ್ಯಂತರ ಜಾಮೀನು ನೀಡಿತು.

ಇದನ್ನೂ ಓದಿ: ನಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಸರು ಉಲ್ಲೇಖಿಸಿದ ಸಿಬಿಐ

ನಾರದಾ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಾಲ್ವರು ಮುಖಂಡರಿಗೆ ತಲಾ 2 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಅನ್ನು ಇಬ್ಬರು ವ್ಯಕ್ತಿಗಳ ಜಾಮೀನುಗಳೊಂದಿಗೆ ಸಲ್ಲಿಸುವಂತೆ ಹೈಕೋರ್ಟ್ ನ್ಯಾಯಪೀಠ ಕೇಳಿದೆ. ಹಗರಣದ ಬಗ್ಗೆ ಪತ್ರಿಕಾ ಸಂದರ್ಶನಗಳನ್ನು ನೀಡಬಾರದು ಹಾಗೂ ತನಿಖೆಯಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಅದು ಹೇಳಿದೆ. “ಜಾಮೀನಿನ ಯಾವುದೇ ಷರತ್ತಿನ ಉಲ್ಲಂಘನೆ ಮಾಡಿದರೆ ಜಾಮೀನು ರದ್ದಾಗುತ್ತದೆ” ಎಂದು ಕೊಲ್ಕತ್ತಾ ಹೈಕೋರ್ಟ್ ಎಚ್ಚರಿಸಿದೆ.

ತೃಣಮೂಲ ಕಾಂಗ್ರೆಸ್‌ನ ಉನ್ನತ ನಾಯಕರನ್ನು ಗುರಿಯಾಗಿಸಿಕೊಂಡು ಪತ್ರಕರ್ತ ಮ್ಯಾಥ್ಯೂ ಸ್ಯಾಮ್ಯುಯೆಲ್ ನಡೆಸಿದ ಕುಟುಕು ಕಾರ್ಯಾಚರಣೆಯಾಗಿದೆ ‘ನಾರದಾ ಕುಟುಕು ಕಾರ್ಯಾಚರಣೆ’. ಈ ಕಾರ್ಯಾಚರಣೆಯ ಮೂಲಕ ಹಲವಾರು ರಾಜಕಾರಣಿಗಳು ಮತ್ತು ಉನ್ನತ ದರ್ಜೆಯ ಪೊಲೀಸ್ ಅಧಿಕಾರಿಯೊಬ್ಬರು ಕಂಪನಿಗೆ ಅನಧಿಕೃತವಾಗಿ ಬೆಂಬಲಿಸುತ್ತೇವೆ ಎಂದು ನಗದು ಲಂಚ ಪಡೆದೂದನ್ನು ಬಯಲಿಗೆಳೆದಿತ್ತು. 2016 ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಲಾದ ಈ ಕುಟುಕು ಕಾರ್ಯಾಚರಣೆಯನ್ನು 2014 ರಲ್ಲಿ ಚಿತ್ರೀಕರಿಸಲಾಗಿತ್ತು.

ನಾರದಾ ಲಂಚ ಪ್ರಕರಣವನ್ನು ಉಲ್ಲೇಖಿಸಿ ಕೇಂದ್ರ ತನಿಖಾ ದಳ (ಸಿಬಿಐ) ವು ಮೇ 17 ರಂದು ತೃಣಮೂಲ ಕಾಂಗ್ರೆಸ್‌ ಶಾಸಕರಾದ ಫಿರ್ಹಾದ್ ಹಕೀಮ್, ಸುಬ್ರತಾ ಮುಖರ್ಜಿ, ಮದನ್ ಮಿತ್ರ ಮತ್ತು ಮಾಜಿ ಸಚಿವ, ಕೋಲ್ಕತಾ ಮೇಯರ್ ಶೋವನ್ ಚಟರ್ಜಿಯನ್ನು ವಶಕ್ಕೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಪಿ ಚುನಾವಣೆ: ಮಹಿಳೆಯರಿಗೆ ಕಾಂಗ್ರೆಸ್‌ ಆದ್ಯತೆ; ಉಳಿದ ಪಕ್ಷಗಳ ಕಥೆಯೇನು..?

0
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಬಿಜೆಪಿ ನೇತೃತ್ವದ ಎನ್‌ಡಿಎ, ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷ, ಕಾಂಗ್ರೆಸ್ ಪಕ್ಷಗಳ ನಡುವಿನ ಸ್ಪರ್ಧೆಯಾಗಿದೆ. ಮಾಯಾವತಿಯವರ ಬಿಎಸ್‌ಪಿ ಪಕ್ಷ ಈ ಬಾರಿ ಇದ್ದು ಇಲ್ಲದಂತಾಗಿದೆ. ಬಿಜೆಪಿಯ...
Wordpress Social Share Plugin powered by Ultimatelysocial