Homeಮುಖಪುಟಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನಿರಾಕರಿಸಿದ್ದಕ್ಕೆ ವಿಪಕ್ಷ ಸಂಸದರು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. ಈ ವೇಳೆ ಸ್ಪೀಕರ್ ಎಂಟು ಮಂದಿ ಸಂಸದರನ್ನು ಅಧಿವೇಶನದ ಮುಂದಿನ ಅವಧಿಗೆ ಅಮಾನತು ಮಾಡಿದರು.

ಕಾಂಗ್ರೆಸ್‌ ಸಂಸದರಾದ ಹೈಬಿ ಈಡನ್, ಸಿ ಕಿರಣ್ ಕುಮಾರ್ ರೆಡ್ಡಿ, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಮಾಣಿಕ್ಕಂ ಟ್ಯಾಗೋರ್, ಪ್ರಶಾಂತ್ ಪಡೋಲೆ ಮತ್ತು ಡೀನ್ ಕುರಿಯಾಕೋಸ್ ಹಾಗೂ ಪಿಐ(ಎಂ) ಎಸ್‌. ವೆಂಕಟೇಶನ್ ಅವರನ್ನು ಪೀಠದ ಕಡೆಗೆ ಕಾಗದಗಳನ್ನು ಎಸೆದ ಆರೋಪದ ಮೇಲೆ ಅಮಾನತುಗೊಳಿಸಲಾಗಿದೆ. ಗದ್ದಲ ಹೆಚ್ಚಾದ ಕಾರಣ ಕಲಾಪವನ್ನು ಬುಧವಾರಕ್ಕೆ (ನಾಳೆಗೆ) ಮುಂದೂಡಲಾಗಿದೆ.

ಅಮಾನತುಗೊಳಿಸಿರುವುದರ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಒಳಗೊಂಡ ರಾಜಕೀಯವಾಗಿ ಸೂಕ್ಷ್ಮ ಉಲ್ಲೇಖಗಳಿರುವ ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ಮಾತನಾಡಲು ರಾಹುಲ್ ಗಾಂಧಿಗೆ ಅವಕಾಶ ನಿರಾಕರಿಸಿದ್ದನ್ನು ಖಂಡಿಸಿ ವಿರೋಧ ಪಕ್ಷದ ಸಂಸದರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಂಗಳವಾರ ಬೆಳಿಗ್ಗೆ ನರಾವಣೆಯವರ ಅಪ್ರಕಟಿತ ‘ಆತ್ಮಕಥೆ’ಯನ್ನು ಉಲ್ಲೇಖಿಸಿದ ಲೇಖನದ ಪ್ರತಿಯನ್ನು ದೃಢೀಕರಿಸಿದ ರಾಹುಲ್ ಗಾಂಧಿ “ಇದು ನಮ್ಮ ರಾಷ್ಟ್ರಪತಿಗಳ ಭಾಷಣದ ಪ್ರಮುಖ ವಿಷಯವಾಗಿದೆ. ಚೀನಾ- ಭಾರತ ನಡುವೆ ಏನಾಯಿತು ಮತ್ತು ಅದಕ್ಕೆ ನಮ್ಮ ಪ್ರಧಾನಿ ಹೇಗೆ ಪ್ರತಿಕ್ರಿಯಿಸಿದರು ಎಂಬುದರ ಕುರಿತು ನಾನು ಹೇಳಿಕೆ ನೀಡುತ್ತೇನೆ ಎಂದು ಮಾತ್ರ ಹೇಳುತ್ತಿದ್ದೇನೆ. ನನ್ನನ್ನು ಏಕೆ ತಡೆಯಲಾಗುತ್ತಿದೆ? ಎಂದು ಪ್ರಶ್ನಿಸಿದ್ದರು.

ಸದನದ ಅಧ್ಯಕ್ಷತೆ ವಹಿಸಿದ್ದ ಕೃಷ್ಣ ಪ್ರಸಾದ್ ತೆನ್ನೆಟಿ ಅವರು, ಆ ದಾಖಲೆಯನ್ನು ಸಭೆಯ ಮುಂದಿಡುವಂತೆ ರಾಹುಲ್ ಗಾಂಧಿಯವರಿಗೆ ಸೂಚಿಸಿದರು ಮತ್ತು “ನಾವು ಇದನ್ನು ಪರಿಶೀಲಿಸಿ ನಿಮಗೆ ತಿಳಿಸುತ್ತೇವೆ” ಎಂದು ಹೇಳಿದರು. ತದನಂತರ ರಾಹುಲ್ ಗಾಂಧಿ ಅವರಿಗೆ ಹೆಚ್ಚಿನ ಮಾತನಾಡಲು ಅವಕಾಶ ನೀಡದಿದ್ದಾಗ, ಇದು ಕಾಂಗ್ರೆಸ್ ಸಂಸದರ ತೀವ್ರ ಪ್ರತಿಭಟನೆಗೆ ಕಾರಣವಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...