Homeಕರ್ನಾಟಕಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

ಬಿಲ್ಲವರ ಆಕ್ರೋಶಕ್ಕೆ ಮಣಿದ ಸರ್ಕಾರ: ನಾರಾಯಣ ಗುರು ಪಾಠ ‘ಸಮಾಜ ವಿಜ್ಞಾನ’ಕ್ಕೆ ಮರುಸೇರ್ಪಡೆ

- Advertisement -
- Advertisement -

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಕ್ಕೆ ನಾರಾಯಣ ಗುರು ಪಾಠವನ್ನು ಮರು ಸೇರ್ಪಡೆ ಮಾಡುವಂತೆ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕರಾವಳಿ ಭಾಗದಲ್ಲಿ ಭುಗಿಲೆದ್ದಿದ್ದ ಬಿಲ್ಲವ ಸಮಾಜದ ಹೋರಾಟಕ್ಕೆ ಕೇಸರಿ ಪಡೆ ಮಣಿದಿದೆ.

ಅವ್ಯವಸ್ಥೆಗಳ ಆಗರವಾಗಿರುವ ಪಠ್ಯಪುಸ್ತಕ ಪರಿಷ್ಕರಣೆಯು, ಮುಗಿಯದ ಪುರಾಣವಾಗಿ ಮಾರ್ಪಟ್ಟಿದೆ. ಅಲ್ಲಿದ್ದದ್ದನ್ನು ಇಲ್ಲಿಗೆ, ಇಲ್ಲಿದ್ದಿದ್ದನ್ನು ಅಲ್ಲಿಗೆ ಸ್ಥಾನ ಪಲ್ಲಟ ಮಾಡುವಲ್ಲಿ ಸರ್ಕಾರ ಕಾಲ ಕಳೆಯುತ್ತಿದೆ. ಇಡೀ ಪಠ್ಯಪುಸ್ತಕವನ್ನೇ ರದ್ದು ಮಾಡಬೇಕೆಂಬ ಆಗ್ರಹ ಕೇಳಿ ಬರುತ್ತಿದ್ದರೂ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲಷ್ಟೇ ಮುಂದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪರಿಷ್ಕರಣೆ ಸಮಿತಿಯು ಹತ್ತನೇ ತರಗತಿಯ ಸಮಾಜ ವಿಜ್ಞಾನದಲ್ಲಿದ್ದ ಶ್ರೀ ನಾರಾಯಣಗುರು ವಿಷಯಾಂಶವನ್ನು ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕಕ್ಕೆ ವರ್ಗಾಯಿಸಿತ್ತು. ಆದರೆ ಅದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಕನ್ನಡ ಭಾಷಾ ವಿಷಯದಿಂದ ಪುನಃ ಸಮಾಜ ವಿಜ್ಞಾನಕ್ಕೆ ನಾರಾಯಣ ಗುರು ಪಠ್ಯ ವರ್ಗಾಯಿಸಿ ಸರ್ಕರ ಆದೇಶ ಹೊರಡಿಸಿದೆ.

“10ನೇ ತರಗತಿಯ ಕನ್ನಡ ಪ್ರಥಮ ಭಾಷಾ ಪಠ್ಯಪುಸ್ತಕದಲ್ಲಿ ಇರುವ ಶ್ರೀ ನಾರಾಯಣಗುರು ಅವರ ವಿಷಯಾಂಶಗಳನ್ನು 2022-23ನೇ ಸಾಲಿಗೆ ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನದಿಂದ ಕೈಬಿಟ್ಟು, ಹಿಂದಿನಂತೆ ಹತ್ತನೇ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿ ಅಳವಡಿಸಿಕೊಂಡು ಬೋಧನೆ, ಕಲಿಕೆ ಹಾಗೂ ಮೌಲ್ಯಮಾಪನಕ್ಕೆ ಪರಿಗಣಿಸಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯದಲ್ಲಿದ್ದ ನಾರಾಯಣಗುರುಗಳ ಪಾಠವನ್ನು ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಶೀಲನಾ ಸಮಿತಿ ತೆಗೆದಿದ್ದರಿಂದ ಕರಾವಳಿ ಭಾಗದಲ್ಲಿ ಬಿಲ್ಲವ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ಕುಮಾರ್‌‌ ಪತ್ರವನ್ನೂ ಬರೆದಿದ್ದರು.

“ಸಮಾಜ ಸುಧಾರಕ ನಾರಾಯಣಗುರು ಅವರ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸಿ” ಎಂದು ಸುನಿಲ್‌ಕುಮಾರ್‌ ಮನವಿ ಮಾಡಿದ್ದರು.

ಬಿಲ್ಲವ ಸಮಾಜದ ನಿರಂತರ ಪ್ರತಿರೋಧದ ಹೊರತಾಗಿಯೂ ಈ ಕುರಿತು ಸರ್ಕಾರ ಮೌನ ವಹಿಸಿತ್ತು. ಕನ್ನಡ ಭಾಷಾ ವಿಷಯದಲ್ಲಿ ನಾರಾಯಣಗುರುಗಳ ಪಾಠವಿದೆ ಎಂದು ಸಬೂಬು ಹೇಳುತ್ತಿತ್ತು. ಆದರೆ ಸಮಾಜ ವಿಜ್ಞಾನದಲ್ಲಿ ಪಾಠವಿದ್ದರೆ ಎಲ್ಲ ವಿದ್ಯಾರ್ಥಿಗಳು ಓದಲು ಸಾಧ್ಯವಾಗುತ್ತದೆ ಎಂದು ಸಮುದಾಯದ ಮುಖಂಡರು ಹೇಳುತ್ತಲೇ ಬಂದಿದ್ದರು. ಬೃಹತ್ ಹೋರಾಟವನ್ನು ಬಿಲ್ಲವ ಸಮುದಾಯ ಕೈಗೊಂಡಿತ್ತು.

ಇದನ್ನೂ ಓದಿರಿ: ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಈ ಹಿಂದೆ ಗಣರಾಜ್ಯೋತ್ಸವ ಟ್ಯಾಬ್ಲೋ ವಿಚಾರದಲ್ಲಿಯೂ ನಾರಾಯಣಗುರುಗಳಿಗೆ ಕೇಂದ್ರ ಸರ್ಕಾರ ಅವಮಾನ ಮಾಡಿತ್ತು. ಇದರ ನಡುವೆ ಪಠ್ಯ ಕೈಬಿಡಲಾಗಿತ್ತು. ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯನವರ ಹೆಸರಿಡಬೇಕು, ಬಿಲ್ಲವ ಅಭಿವೃದ್ದಿ ಮಂಡಳಿ ರಚಿಸಬೇಕು, ಬಿಲ್ಲವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿ ಹಲವು ಸೌಲಭ್ಯಗಳಿಗಾಗಿ ಬಿಲ್ಲವ ಸಮಾಜ ಹೋರಾಟ ಮಾಡುತ್ತಲೇ ಬಂದಿದೆ. ಆದರೆ ಇವೆಲ್ಲಕ್ಕೂ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದು ಬಿಲ್ಲವ ಮುಖಂಡರನ್ನು ಕೆರಳಿಸಿತ್ತು. ಹಾಗಾಗಿ ಬಿಲ್ಲವ ಸಂಘ ಸಂಸ್ಥೆಗಳು ರಿಲೇ ರೀತಿಯ ಪಾದಯಾತ್ರೆ, ಹೆದ್ದಾರಿ ಬಂದ್ ಸೇರಿದಂತೆ 50 ದಿನಗಳವರೆಗೆ ನಿರಂತರ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದವು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್, ಕಂಕನಾಡಿ ಗರಡಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಿತ್ತರಂಜನ್ ಕೆ, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಶೈಲೇಂದ್ರ ಬೈ, ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಸೇರಿದಂತೆ ನೂರಾರು ಹೋರಾಟಗಾರರು, ಮುಖಂಡರು ಸರ್ಕಾರದ ವಿರುದ್ಧ ಗುಡುಗಿದ್ದರು. ಈ ಹಿನ್ನೆಲೆಯಲ್ಲಿ ಆದೇಶ ಹೊರಬಿದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...