Homeಮುಖಪುಟಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಬಂಧನ ಅಸಹ್ಯಕರ - ಚಿದಂಬರಂ

ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಬಂಧನ ಅಸಹ್ಯಕರ – ಚಿದಂಬರಂ

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂದಿಸಿರುವುದು ಅಸಹ್ಯ ಹುಟ್ಟಿಸುತ್ತದೆ ಎಂದು ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಚಿದಂಬರಂ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರ ಮೇಲೆ ಯಾವುದೇ ಆರೋಪಗಳು ಇಲ್ಲದಿದ್ದರೂ ಸಾರ್ವಜನಿಕ ಸುರಕ್ಷತೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುದು ಮತ್ತು ಬಂಧನದಲ್ಲಿಟ್ಟಿರುವುದು ಹೇಯ ಕೃತ್ಯ ಎಂದು ಟೀಕಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಚಿದಂಬರಂ, ಮಾಜಿ ಮುಖ್ಯಮಂತ್ರಿಗಳು ಮತ್ತು ಎರಡು ಪ್ರಮುಖ ರಾಜಕೀಯ ಪಕ್ಷಗಳ ನಾಯಕರ ವಿರುದ್ಧ ಸಾರ್ವಜನಿಕ ಸುರಕ್ಷತಾ ಕಾಯ್ದೆ ಬಳಸಿರುವುದು ಆಘಾತ ತಂದಿದೆ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಅವರು ಯಾವುದೇ ಕೃತ್ಯವನ್ನು ಮಾಡಿಲ್ಲ. ಅವರ ಮೇಲೆ ಯಾವುದೇ ಆರೋಪಗಳು ಇಲ್ಲ. ಆದರೂ ಬಂಧನ ಮಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಹ್ಯ ತರಿಸುತ್ತದೆ. ದೇಶದಲ್ಲಿ ಅನ್ಯಾಯದ ಕಾನೂನುಗಳು ಜಾರಿಯಾಗುತ್ತಿವೆ. ಅನ್ಯಾಯದ ಕಾನೂನುಗಳನ್ನು ಜನರ ಮೇಲೆ ಹೇರಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದನ್ನು ಆಯ್ಕೆ ಮಾಡಿಕೊಳ್ಳದೆ ಜನರು ಏನು ಮಾಡಬೆಕು ಎಂದು ಪ್ರಶ್ನಿಸಿದ್ದಾರೆ.

ಸಂಸತ್ತಿನಲ್ಲಿ ಅಂಗೀಕರಿಸುವ ಕಾನೂನುಗಳನ್ನು ಜನರು ಪಾಲನೆ ಮಾಡಬೇಕು ಜನಪ್ರತಿನಿಧಿಗಳು ಪಾಲಿಸಬೇಕು ಎಂದು ಪ್ರಧಾನಿಗಳು ಹೇಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇತಿಹಾಸವನ್ನು ಮರೆತಂತೆ ಕಾಣುತ್ತಿದೆ. ಮಹಾತ್ಮಗಾಂಧಿ, ಮಾರ್ಟಿನ್ ಲೂಥರ್ ಕಿಂಗ್ ಮತ್ತು ನೆಲ್ಸನ್ ಮಂಡೇಲ ಏನು ಮಾಡಿದರೆಂದು ತಿಳಿದುಕೊಳ್ಳಬೇಕು. ಜನರು ಅನ್ಯಾಯದ ಕಾನೂನುಗಳನ್ನು ವಿರೋಧಿಸಬೇಕು. ನಾಗರಿಕ ಅಸಹಕಾರ ತೋರಬೇಕು. ಇದು ಸತ್ಯಾಗ್ರಹ ಎಂದು ಮೋದಿ ಅವರನ್ನು ಮೂದಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜನನಾಯಕರನ್ನು ಸುದೀರ್ಘ ಕಾಲ ಜೈಲಿನಲ್ಲಿ ಇಡುವುದು ಹೇಡಿತನವೇ ಹೊರತು ಧೀರತನವಲ್ಲ.

  2. We see lot of leaders went on criticising running government since their ambition to be in power lost Reasons are either their way minting money from public budget and way for corruption is gone. They must understand that whatever you say will go in front of other countries and our position unwantedly goes down. This is due freedom for speech. So letting corrupt people in jail and keeping over talking people some time required. It is not as worst as the period in 1977 emergency. So atleast now onwards these do called leaders controll your tongue do that wrong message stop going to other countries.Go for discussion with Government as it is the correct way of democracy

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...