Homeಮುಖಪುಟನರೇಂದ್ರ ಮೋದಿ ಸರ್ಕಾರದ ಹೇಡಿತನ ಬಯಲಾಗಿದೆ: ಸಿದ್ದರಾಮಯ್ಯ

ನರೇಂದ್ರ ಮೋದಿ ಸರ್ಕಾರದ ಹೇಡಿತನ ಬಯಲಾಗಿದೆ: ಸಿದ್ದರಾಮಯ್ಯ

- Advertisement -
- Advertisement -

“ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ” ಎಂದು ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಸೂರತ್ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಲೋಕಸಭಾ ಸ್ಥಾನ ಅನರ್ಹಗೊಳಿಸಿರುವುದರ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ” ಎಂದಿದ್ದಾರೆ.

ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್.ಡಿ.ಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿ ಅವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಬೇಧ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಸಿಟ್ಟು-ಆಕ್ರೋಶದ ಕೈಗೆ ಬುದ್ದಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...