Homeಮುಖಪುಟಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

ಸುಪ್ರಿಯ ಸುಳೆಯನ್ನು ಮಂತ್ರಿ ಮಾಡುವ ಆಫರ್‌ ಅನ್ನು ಮೋದಿ ನೀಡಿದ್ದರು: ಶರದ್‌ ಪವಾರ್‌

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರು “ಒಟ್ಟಾಗಿ ಕೆಲಸ ಮಾಡುವ” ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಆದರೆ ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರಿಗೆ ಸ್ಪಷ್ಟಪಡಿಸಿದೆ ಎಂದು ಶರದ್‌ ಪವಾರ್ ಹೇಳಿದ್ದಾರೆ.

ಸೋಮವಾರ ಮರಾಠಿ ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯ ಬಹಿರಂಗಪಡಿಸಿರುವ ಶರದ್‌ ಪವಾರ್‌, “ನಾವು ಒಟ್ಟಿಗೆ ಕೆಲಸ ಮಾಡಬೇಕೆಂದು ಮೋದಿ ಪ್ರಸ್ತಾಪಿಸಿದರು. ನಮ್ಮ ವೈಯಕ್ತಿಕ ಸಂಬಂಧಗಳು ತುಂಬಾ ಚೆನ್ನಾಗಿವೆ ಮತ್ತು ಅವುಗಳು ಹಾಗೇ ಉಳಿಯಬೇಕು, ಹಾಗಾಗಿ ನಾವು ಒಟ್ಟಿಗೆ ಕೆಲಸ ಮಾಡಲು ಸಾಧ್ಯವಿಲ್ಲ” ಎಂದು ನಾನು ಅವರಿಗೆ ಹೇಳಿದೆ ಎಂದಿದ್ದಾರೆ.

ಮೋದಿ ಸರ್ಕಾರವು ಅವರನ್ನು ಭಾರತದ ರಾಷ್ಟ್ರಪತಿಗಳನ್ನಾಗಿ ಮಾಡಲು ಮುಂದಾಗಿದೆ ಎಂಬ ವರದಿಗಳನ್ನು ಶರದ್‌ ಪವಾರ್ ತಳ್ಳಿಹಾಕಿದ್ದಾರೆ. “ಆದರೆ ಮೋದಿ ನೇತೃತ್ವದ ಸಂಪುಟದಲ್ಲಿ ಪವಾರ್‌ ಮಗಳಾದ ಸುಪ್ರಿಯ ಸುಳೆಯವರನ್ನು ಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವಿತ್ತು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಬೆಳವಣಿಗೆಗಳ ಮಧ್ಯೆಯೇ ಪವಾರ್ ಕಳೆದ ತಿಂಗಳು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದರು.

ಕಳೆದ ತಿಂಗಳು ರಾಜ್ಯಸಭೆಯ 250 ನೇ ಅಧಿವೇಶನದಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಅವರು ಶರದ್‌  ಪವಾರ್ ಅವರನ್ನು ಶ್ಲಾಘಿಸಿದ್ದರು. ಅಲ್ಲಿ ಬಿಜೆಪಿ ಸೇರಿದಂತೆ ಕೆಲವು ಪಕ್ಷಗಳು ಸಂಸತ್ತಿನ ಮಾನದಂಡಗಳನ್ನು ಹೇಗೆ ಪಾಲಿಸಬೇಕು ಎಂಬುದರ ಕುರಿತು ಎನ್‌ಸಿಪಿಯಿಂದ ಕಲಿಯಬೇಕು ಎಂದು ಮೋದಿ ಹೇಳಿದ್ದರು.

2016 ರಲ್ಲಿ, ಮೋದಿಯವರು ಪವಾರ್ ಅವರ ಆಹ್ವಾನದ ಮೇರೆಗೆ ಪುಣೆಯ ವಸಂತದಾದ ಸಕ್ಕರೆ ಸಂಸ್ಥೆಗೆ ಭೇಟಿ ನೀಡಿದಾಗ, ಅವರು ಎನ್‌ಸಿಪಿ ಮುಖ್ಯಸ್ಥ ಪವಾರ್‌ರನ್ನು ಸಾರ್ವಜನಿಕ ಜೀವನದಲ್ಲಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ಹೊಗಳಿದ್ದರು.

“ನನಗೆ ಪವಾರ್ ಬಗ್ಗೆ ವೈಯಕ್ತಿಕವಾಗಿ ಗೌರವವಿದೆ. ನಾನು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಅವರು ನನ್ನ ಬೆರಳು ಹಿಡಿದು ನಡೆಯಲು ಸಹಾಯ ಮಾಡಿದ್ದರು. ಇದನ್ನು ಸಾರ್ವಜನಿಕವಾಗಿ ಉಚ್ಚರಿಸಲು ನನಗೆ ಹೆಮ್ಮೆ ಇದೆ” ಎಂದು ಪ್ರಧಾನಿ ಮೋದಿ ಹೇಳಿದ್ದರು.

“ಅಜಿತ್ ಪವಾರ್‌ ಏಕಾಏಕಿ ಫಡ್ನವೀಸ್‌ಗೆ ಬೆಂಬಲ ನೀಡಿದ ವಿಷಯ ತಿಳಿದಾಗ, ನಾನು ಮೊದಲು ಸಂಪರ್ಕಿಸಿದ ವ್ಯಕ್ತಿ ಉದ್ಧವ್‌ ಠಾಕ್ರೆ. ಏನಾಯಿತು ಎಂಬುದು ಸರಿಯಾಗಿ ಗೊತ್ತಿಲ್ಲ. ಆದರೆ ನಾನು ಬಂಡಾಯವನ್ನು ಶಮನಮಾಡುತ್ತೇನೆ ಎಂದು ಅವರಿಗೆ ವಿಶ್ವಾಸ ಕೊಟ್ಟಿದ್ದೆ” ಎಂದು ಪವಾರ್ ಹೇಳಿದ್ದಾರೆ.

“ಅಜಿತ್ ಪವಾರ್‌ ಅವರ ಕ್ರಮಕ್ಕೆ ನನ್ನ ಬೆಂಬಲ ಇಲ್ಲ ಎಂದು ಎನ್‌ಸಿಪಿಯಲ್ಲಿರುವ ಎಲ್ಲರಿಗೂ ತಿಳಿದಾಗ, ಅವರೊಂದಿಗೆ ಇದ್ದ ‍ಶಾಸಕರು ಕೂಡ ನಮ್ಮ ಜೊತೆ ಬಂದರು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...