Homeಮುಖಪುಟಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

ಮೋದಿಗೆ ಬೃಂದಾ, ಪ್ರಿಯಾಂಕಾ, ಅಂಜಲಿ, ಶಬನಂ ಮತ್ತಿತರರ ಸವಾಲ್

- Advertisement -
- Advertisement -

ನಾನುಗೌರಿ ಡೆಸ್ಕ್

ಗೋಡ್ಸೆ ಗೋಲ್ವಾಲ್ಕರ್ ಹೆಸರಿನಲ್ಲಿ ಚುನಾವಣೆ ಎದುರಿಸಿ: ಬೃಂದಾ ಕಾರಟ್

ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ: ಪ್ರಿಯಾಂಕಾ

ಮಹಿಳೆಯರ 56 ‘ರಾಜಕೀಯೇತರ’ ಪ್ರಶ್ನೆಗಳಿಗೆ ಉತ್ತರ ಕೊಡಿ: ವಿಮೆನ್ಸ್ ಮಾರ್ಚ್

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 5 ವರ್ಷಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿಲ್ಲ ಎಂಬ ಟೀಕೆಗೆ ಇಂಬು ಕೊಡುವಂತೆ ಬೇರೆ ಬೇರೆ ವಲಯಗಳಿಗೆ ಸೇರಿದ ಹಲವರು ಒಂದೇ ದಿನ ಸವಾಲು ಎಸೆದಿದ್ದಾರೆ. ನಿಮ್ಮ ತಂದೆ ರಾಜೀವ್‍ಗಾಂಧಿ ಹೆಸರನ್ನೇ ಇಟ್ಟುಕೊಂಡು ಮುಂದಿನ ಎರಡು ಹಂತದ ಚುನಾವಣೆ ಎದುರಿಸಿ ಎಂದು ಮೋದಿ ಕಾಂಗ್ರೆಸ್‍ಗೆ ಸವಾಲು ಹಾಕಿದ ನಂತರದ ದಿನ ಮೋದಿಯವರು ಈ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬಂದಿರುವುದು ವಿಪರ್ಯಾಸ. ಈ ರೀತಿ ಸವಾಲು ಒಡ್ಡಿದವರೆಲ್ಲರೂ ಮಹಿಳೆಯರೇ ಆಗಿರುವುದೊಂದು ವಿಶೇಷ.

ಸಿಪಿಎಂ ನಾಯಕಿ ಬೃಂದಾ ಕಾರಟ್ ಅವರು ‘ನಿಮ್ಮ ರಾಜಕೀಯ ತಂದೆಯರಾದ ಗೋಡ್ಸೆ ಮತ್ತು ಗೋಳ್ವಾಲ್ಕರ್ ಅವರ ಹೆಸರುಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಲು ನೀವು ಸಿದ್ಧರಿದ್ದೀರಾ?’ ಎಂದು ಸವಾಲೆಸೆದಿದ್ದಾರೆ. ಇದನ್ನು ಪೋಸ್ಟರ್ ಮಾಡಿ ಸಿಪಿಎಂ ಜಾಲತಾಣಗಳಲ್ಲಿ ಹಂಚಲಾಗುತ್ತಿದೆ.

ಗೋಡ್ಸೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರನ್ನು ಕೊಲೆಗೈದ ವ್ಯಕ್ತಿಯಾಗಿದ್ದು, ಸಂಘಪರಿವಾರವು ಆತನನ್ನು ಆರಾಧಿಸುತ್ತಿದೆ. ಆರೆಸ್ಸೆಸ್‍ಗೂ ಆತನಿಗೂ ಸಂಬಂಧವಿಲ್ಲವೆಂದು ಹೇಳುವ ಪ್ರಯತ್ನಗಳೂ ವಿಫಲಗೊಂಡಿದ್ದು, ಗಾಂಧಿ ಹತ್ಯೆಯತಾದಾಗ ಆರೆಸ್ಸೆಸ್ ಎಲ್ಲೆಡೆ ಸಿಹಿ ಹಂಚಿ ಸಂಭ್ರಮಿಸಿದ್ದು ಆಗಲೇ ಸುದ್ದಿಯಾಗಿತ್ತು. ಅದೇ ರೀತಿಯಲ್ಲಿ ಆರೆಸ್ಸೆಸ್ ಚಿಂತನೆಗಳನ್ನು ರೂಪಿಸಿದ ಅದರ ಎರಡನೇ ಸರಸಂಘಚಾಲಕ ಗೋಲ್ವಾಲ್ಕರ್ ಆರೆಸ್ಸೆಸ್‍ನೊಳಗೆ ಸದಾ ಆರಾಧಿಸಲ್ಪಡುವ ವ್ಯಕ್ತಿ. ಆದರೆ ಚಿಂತನಾಗಂಗಾ ಮತ್ತಿತರ ಪುಸ್ತಕಗಳಲ್ಲಿ ನಿಜವಾದ ಭಾರತೀಯತೆಯನ್ನು ಹೀಗಳೆಯುವ ಮತ್ತು ದಲಿತರು ಶೂದ್ರರು ಮತ್ತು ಮಹಿಳೆಯರನ್ನು ಹೀಗಳೆಯುವ ಚಿಂತನೆಗಳು ಇವೆ. ಹೀಗಾಗಿ ಬಹಿರಂಗವಾಗಿ ಅವರನ್ನು ಪದೇ ಪದೇ ಚರ್ಚೆಗೆ ತರಲಾಗುವುದಿಲ್ಲ. ಹಾಗಾಗಿಯೇ ಬೃಂದಾ ಅವರು ಈ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ವರ್ಸಸ್ ಮೋದಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ‘ಜಿಎಸ್‍ಟಿ, ನೋಟು ರದ್ದತಿ, ಮಹಿಳಾ ಸುರಕ್ಷೆಗಳ ಸಾಧನೆಯನ್ನು ಮುಂದಿಟ್ಟು ಚುನಾವಣೆ ಎದುರಿಸಿ. ನೀವು ನೀಡಿದ ಫೇಕ್ ಭರವಸೆಗಳನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದಲ್ಲವೇ’ ಎಂದು ಕೇಳಿದ್ದಾರೆ.

ಅದೇ ರೀತಿ ‘ವಿಮೆನ್ಸ್ ಮಾರ್ಚ್’ ವೇದಿಕೆಯ ವತಿಯಿಂದ ಪ್ರೆಸ್‍ಕ್ಲಬ್ ಆಫ್ ಇಂಡಿಯಾದಿಂದ ಪತ್ರಿಕಾಗೋಷ್ಠಿ ನಡೆಸಿದ ಪ್ರಸಿದ್ಧ ಹೋರಾಟಗಾರ್ತಿಯರು ಮತ್ತು ಚಿಂತಕಿಯರಾದ ಅಂಜಲಿ ಭಾರದ್ವಾಜ್, ಶಬನಂ ಹಷ್ಮಿ, ಪೂರ್ಣಿಮಾ ಗುಪ್ತಾ, ದೀಪ್ತಾ ಭೋಗ್, ಅಮೃತಾ ಜೋಹ್ರಿ ಮತ್ತಿತರರು ಮೋದಿಯವರಿಗೆ 56 ಪ್ರಶ್ನೆಗಳನ್ನು ಎಸೆದಿದ್ದಾರೆ. ಸ್ವಾರಸ್ಯಕರ ಸಂಗತಿಯೆಂದರೆ, ಇವರುಗಳು ಈ ಪತ್ರಿಕಾಗೋಷ್ಟಿಯನ್ನು ನಾನ್-ಪೊಲಿಟಿಕಲ್ (ರಾಜಕೀಯೇತರ) ಎಂದು ಕರೆದಿದ್ದರು. ಆ ಮೂಲಕ ಕೆನಡಾ ದೇಶದ ಪ್ರಜೆ, ನಟ ಅಕ್ಷಯ್ ಕುಮಾರ್ ನಡೆಸಿದ ಮೋದಿಯವರ ಸಂದರ್ಶನವನ್ನು ಲೇವಡಿ ಮಾಡಿದಂತಿತ್ತು. ಮಹಿಳೆಯರು ಮತ್ತು ಜನಸಾಮಾನ್ಯರೆಲ್ಲರ ಬದುಕಿಗೆ ಸಂಬಂಧಿಸಿದ ಈ ಪ್ರಶ್ನೆಗಳು ಒಂದಕ್ಕಿಂತ ಒಂದು ಗಮನ ಸೆಳೆಯುವಂತಿದೆ.

ಪ್ರಶ್ನೆಗಳ ಸಂಪೂರ್ಣ ವಿವರಗಳಿಗೆ: ಇಲ್ಲಿ ಕ್ಲಿಕ್ ಮಾಡಿ

ಒಟ್ಟಿನಲ್ಲಿ ಸೈನ್ಯ, ಪಾಕಿಸ್ತಾನ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆಯೇ ಪದೇ ಪದೇ ಮಾತಾಡುತ್ತಿರುವ ಮೋದಿಯವರು ಮತ್ತೆ ಮತ್ತೆ ದೇಶದ ಜನರ ಸಮಸ್ಯೆಗಳು ಮತ್ತು ಅವರ 5 ವರ್ಷಗಳ ಸಾಧನೆಯ ಕುರಿತೇ ಪ್ರಶ್ನೆಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇದನ್ನೂ ಓದಿ: ರಾಜೀವ್ ಗಾಂಧಿ ಮತ್ತು ಸರ್ಜಿಕಲ್ ಸ್ಟ್ರೈಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...