Homeಮುಖಪುಟಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

ಗುಜರಾತ್ ಗಲಭೆಗೆ ನರೇಂದ್ರ ಮೋದಿಯವರೆ ಹೊಣೆ: ಡಿಲೀಟ್ ಆಗಿದ್ದ ಬಿಬಿಸಿ ಸಾಕ್ಷ್ಯಚಿತ್ರ ನೋಡಿ

- Advertisement -
- Advertisement -

2002ರ ಗುಜರಾತ್ ಗಲಭೆಯ ವಿಚಾರಣೆಗೆ ಬ್ರಿಟನ್ ಸರ್ಕಾರ ಕಳುಹಿಸಿದ ತಂಡವೊಂದು, “ಹಿಂಸಾಚಾರಕ್ಕೆ ಕಾರಣ ಅವತ್ತಿನ ಅಲ್ಲಿಯ ಭಯದ ವಾತಾವರಣ ಹಾಗಾಗಿ ಆ ಪರಿಸ್ಥಿತಿಗೆ ರಾಜ್ಯದ ಅವತ್ತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರೇ ನೇರ ಹೊಣೆ” ಎಂದು ಉಲ್ಲೇಖಿಸಿರುವ ಬಿಬಿಸಿ ಸಾಕ್ಷ್ಯಚಿತ್ರವನ್ನು ಮತ್ತೆ ಮರು ಅಪ್ಲೋಡ್ ಮಾಡಲಾಗಿದೆ. ಅಧಿಕೃತವಾಗಿ ಮಂಗಳವಾರ ಬಿಡುಗಡೆಯಾಗಿದ್ದ ‘ಮೋದಿ ಪ್ರಶ್ನೆ’ ಎಂಬ ಶೀರ್ಷಿಕೆಯ ಈ ಸಾಕ್ಷ್ಯಚಿತ್ರವನ್ನು ಯೂಟ್ಯೂಬ್‌ನಿಂದ ಬುಧವಾರ ತೆಗೆದುಹಾಕಲಾಗಿತ್ತು. ಈಗ ಬಿಬಿಸಿ ವೆಬ್‌ಸೈಟ್ ನಲ್ಲಿ ಅದನ್ನು ನೋಡಬಹುದಾಗಿದೆ.

ಗುಜರಾತ್‌ನ ಗೋಧ್ರಾದಲ್ಲಿ 2002ರ ಫೆಬ್ರವರಿ ಮತ್ತು ಮಾರ್ಚ್‌ ಸಮಯದಲ್ಲಿ ಹಿಂದೂ ಯಾತ್ರಾರ್ಥಿಗಳು ತುಂಬಿದ್ದ ಪ್ಯಾಸೆಂಜರ್ ರೈಲಿನ ಕೋಚ್‌ಗೆ ಬೆಂಕಿ ಹಚ್ಚಿದ ನಂತರ ಗುಜರಾತ್‌ನಲ್ಲಿ ದೊಡ್ಡ ಪ್ರಮಾಣದ ಕೋಮುಗಲಭೆ ಭುಗಿಲೆದ್ದಿತ್ತು. ಗಲಭೆಯಲ್ಲಿ 790 ಮುಸ್ಲಿಮರು ಮತ್ತು 254 ಹಿಂದೂಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ. ಈ ಗಲಭೆಯನ್ನು ತಡೆಯಲು ಸರ್ಕಾರ ಪ್ರಯತ್ನ ಮಾಡಿಲ್ಲ ಮತ್ತು ಗಲಭೆಗೆ ಮೋದಿಯವರೆ ಹೊಣೆ ಎಂಬ ಆರೋಪಗಳು ಕೇಳಿಬಂದಿದ್ದವು.

ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆದ ಈ ಹಿಂಸಾಚಾರವನ್ನು ತಡೆಯಲು ಗುಜರಾತ್ ಪೊಲೀಸರಿಗೆ ಕಾರ್ಯನಿರ್ವಹಿಸದಂತೆ ಮೋದಿ ತಡೆದಿದ್ದಾರೆ ಎಂದು ಬ್ರಿಟಿಷ್ ತನಿಖಾ ತಂಡ ಆರೋಪಿಸಿದೆ ಎಂದು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಹೇಳಿಕೊಂಡಿದೆ. ಸಾಕ್ಷ್ಯ ಚಿತ್ರ ನೋಡಲು ಇಲ್ಲಿ ಕ್ಲಿಕ್ ಮಾಡಿ

ಆದರೆ ನರೇಂದ್ರ ಮೋದಿಯವರು ಅದನ್ನು ಅಲ್ಲಗೆಳೆದಿದ್ದರು. ಹಿಂಸಾಚಾರದ ಬಗ್ಗೆ ಭಾರತದ ಸುಪ್ರೀಂ ಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿ ಅಂತಿಮ ವರದಿ ನೀಡಿದೆ. ಈ ವರದಿಯು, 2012ರ ಫೆಬ್ರವರಿ ನಲ್ಲಿ ಮೋದಿ ಮತ್ತು ಇತರ 63 ಜನರ ವಿರುದ್ಧ ವಿಚಾರಣೆ ಮಾಡಬಹುದಾದ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಹೇಳಿದೆ. 2013 ರಲ್ಲಿ ತಂಡದ ವರದಿಯನ್ನು ಮ್ಯಾಜಿಸ್ಟ್ರೇಟ್ ಒಪ್ಪಿಕೊಂಡರು.

ಕಳೆದ ವರ್ಷ ಜೂನ್ 24 ರಂದು, ಎಸ್‌ಐಟಿ ವರದಿಯನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ಮನೆಗಳಿಗೆ ಬೆಂಕಿ ಹಚ್ಚಿದಾಗ 69 ಜನರು ಸಾವಿಗೀಡಾದರು ಆದರಲ್ಲಿ ಎಹ್ಸಾನ್ ಜಾಫ್ರಿ ಕೂಡ ಒಬ್ಬರಾಗಿದ್ದಾರೆ.

ಮಂಗಳವಾರ ಬಿಡುಗಡೆಯಾದ BBC ಸಾಕ್ಷ್ಯಚಿತ್ರವು ಮಾಜಿ ಹಿರಿಯ ರಾಜತಾಂತ್ರಿಕ ಸಂದರ್ಶನವನ್ನು ಒಳಗೊಂಡಿದೆ. ಯುನೈಟೆಡ್ ಕಿಂಗ್‌ಡಮ್ ಸರ್ಕಾರ ಕಳುಹಿಸಿದ ತನಿಖಾಧಿಕಾರಿಗಳಲ್ಲಿ ಒಬ್ಬರು, “ಹಿಂಸಾಚಾರವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಂಗಸಂಸ್ಥೆಯಾದ ವಿಶ್ವ ಹಿಂದೂ ಪರಿಷತ್ತು ಯೋಜಿಸಿದೆ” ಎಂದು ಹೇಳಿದ್ದಾರೆ.

“ವಿಎಚ್‌ಪಿ ಮತ್ತು ಅದರ ಮಿತ್ರಪಕ್ಷಗಳು, ರಾಜ್ಯ ಸರ್ಕಾರವು ಸೃಷ್ಟಿಸಿದ ಭಯದ ವಾತಾವರಣವಿಲ್ಲದೆ ಇಷ್ಟು ಹಾನಿಯನ್ನುಂಟುಮಾಡಲು ಸಾಧ್ಯವಿಲ್ಲ” ಎಂದು ಬ್ರಿಟಿಷ್ ಸರ್ಕಾರದ ತನಿಖಾ ತಂಡದ ವರದಿಯು ಹೇಳಿತ್ತು.

ಫೆಬ್ರವರಿ 27, 2002 ರಂದು ಮೋದಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಗಲಭೆಯಲ್ಲಿ ಮಧ್ಯಪ್ರವೇಶಿಸದಂತೆ ಅವರಿಗೆ ಆದೇಶಿಸಿದ್ದಾರೆ ಎಂದು “ವಿಶ್ವಾಸಾರ್ಹ ಸಂಪರ್ಕಗಳನ್ನು” ತಂಡವು ಉಲ್ಲೇಖಿಸಿದೆ ಎಂದು ಸಾಕ್ಷ್ಯಚಿತ್ರವು ಹೇಳಿಕೊಂಡಿದೆ.

ಇದನ್ನೂ ಓದಿ: 2002 ಗುಜರಾತ್‌ ಗಲಭೆಕೋರರಿಗೆ ಪಾಠ ಕಲಿಸಿದ್ದೇವೆ ಎಂದ ಅಮಿತ್‌ ಶಾ; ಓವೈಸಿ ತಿರುಗೇಟು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...