Homeಕರ್ನಾಟಕಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

ಚುನಾವಣೆಯಲ್ಲಿ BJP ಸೋಲಿಸಿದರೆ ಇಂಧನ ದರ ಇಳಿಯುತ್ತದೆ ಎಂಬ ಪಾಠ ಕಲಿಸಿಕೊಟ್ಟ ಮೋದಿ: ಸಿದ್ದರಾಮಯ್ಯ

- Advertisement -
- Advertisement -

ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂಧನ ದರ ಇಳಿಕೆಯ ಬಗ್ಗೆ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

“ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್‌‌ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 100 ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ. ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 12 ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆ: ಯಾರ್ಯಾರು, ಎಷ್ಟೆಷ್ಟು?

“ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ. ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು
ಸೋಲಿಸುತ್ತಲೇ ಇರಬೇಕು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಸದ್ಯದಲ್ಲಿಯೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು” ಎಂದು ಅವರು ರಾಜ್ಯದ ಜನತೆಯಲ್ಲಿ ವಿನಂತಿಸಿದ್ದಾರೆ.

ಕಳೆದೊಂದು ವರ್ಷದಿಂದ ಹೆಚ್ಚಳವಾಗುತ್ತಲೆ ಇದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 10 ರಾಜ್ಯಗಳು ಮತ್ತು ಇತರ ಎರಡು ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ.

ಇತ್ತೀಚೆಗೆ ದೇಶದಾದ್ಯಂತ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ತುಸು ಮಟ್ಟಿನ ಹಿನ್ನಡೆಯನ್ನು ಅನುಭವಿಸಿತ್ತು. ಈ ಹಿನ್ನಲೆ ಮತ್ತು ಮುಂಬರುವ ವರ್ಷಗಳಲ್ಲಿ ಉತ್ತರ ಪ್ರದೇಶ ಮತ್ತು ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಚುನಾವಣೆಯ ದೃಷ್ಟಿಯಿಂದ ಇಂಧನ ದರಗಳು ಇಳಿಕೆಯಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿವೆ.

ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...