Homeಮುಖಪುಟಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ

- Advertisement -
- Advertisement -

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಮಭದಲ್ಲಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಎರಡನೇ ಪ್ರಧಾನಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.

ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಜೊತೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಐದು ವರ್ಷಗಳ ನಂತರ ಸಂಪುಟಕ್ಕೆ ಮರಳಿದರೆ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹರ್ಯಾಣದ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರು ಮೋದಿ ಸಂಪುಟದಲ್ಲಿ ಹೊಸ ಮುಖಗಳಾಗಿದ್ದಾರೆ.

ಬಿಜೆಪಿ ನಾಯಕರಾದ ಪಿಯೂಷ್ ಗೋಯಲ್, ಜ್ಯೋತಿರಾದಿತ್ಯ ಸಿಂಧಿಯಾ, ಧರ್ಮೇಂದ್ರ ಪ್ರಧಾನ್ ಮತ್ತು ಭೂಪೇಂದರ್ ಯಾದವ್ ಅವರು ಈ ಹಿಂದೆ ರಾಜ್ಯಸಭೆಯಲ್ಲಿದ್ದರು. ಆದರೆ, ಈಗ ಲೋಕಸಭೆಗೆ ಆಯ್ಕೆಯಾಗಿದ್ದಾರೆ, ಅವರು ಸಚಿವರಾಗಿ ಮೋದಿ ಉಳಿಸಿಕೊಂಡವರ ಪಟ್ಟಿಯಲ್ಲಿ ಸೇರಿದ್ದಾರೆ.

ಬಿಜೆಪಿಯಿಂದ ಅಸ್ಸಾಂನ ಮಾಜಿ ಸಿಎಂ ಸರ್ಬಾನಂದ ಸೋನೊವಾಲ್, ಅಶ್ವಿನಿ ವೈಷ್ಣವ್, ವೀರೇಂದ್ರ ಕುಮಾರ್, ಪ್ರಲ್ಹಾದ್ ಜೋಶಿ, ಗಿರಿರಾಜ್ ಸಿಂಗ್ ಮತ್ತು ಜುಯಲ್ ಓರಾಮ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

73 ವರ್ಷದ ಮೋದಿ ಅವರು ಮೊದಲು 2014 ರಲ್ಲಿ ಪ್ರಧಾನಿಯಾದರು ಮತ್ತು ನಂತರ 2019 ರಲ್ಲಿ ಅಧಿಕಾರಕ್ಕೆ ಮರಳಿದರು. ಅವರು ವಾರಣಾಸಿಯಿಂದ ಲೋಕಸಭೆಗೆ ಮರು ಆಯ್ಕೆಯಾದರು. ಈ ಬಾರಿ ಸ್ವಂತವಾಗಿ ಬಹುಮತ ಪಡೆಯದ ಬಿಜೆಪಿಯ ಮಿತ್ರಪಕ್ಷಗಳಲ್ಲಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಎಚ್‌ಎಎಂ (ಜಾತ್ಯತೀತ) ಮುಖ್ಯಸ್ಥ ಜಿತನ್ ರಾಮ್ ಮಾಂಝಿ, ಜೆಡಿಯು ನಾಯಕ ಲಾಲನ್ ಸಿಂಗ್ ಮತ್ತು ಟಿಡಿಪಿಯ ಕೆ ರಾಮ್ ಮೋಹನ್ ನಾಯ್ಡು ಕೂಡ ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸ್ಪೀಕರ್ ಓಂಬಿರ್ಲಾ, ಉಪ ರಾಷ್ಟ್ರಪತಿ ಜಗದೀಪ್ ಧನ್‌ಕರ್, ನಟ ಶಾರುಖ್‌ ಖಾನ್, ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ರಜನಿಕಾಂತ್, ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಹಲವಾರು ವಿರೋಧ ಪಕ್ಷದ ನಾಯಕರು ಸಮಾರಂಭಕ್ಕೆ ಗೈರುಹಾಜರಾಗಿದ್ದರು.

ಭಾರತದ ನೆರೆಹೊರೆ ದೇಶಗಳಾದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜು, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ‘ಪ್ರಚಂಡ’, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೆ ಮತ್ತು ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿದ್ದರು.

ಹೊಸ ಸಂಸತ್ ಭವನ ನಿರ್ಮಾಣದಲ್ಲಿ ತೊಡಗಿರುವ ರಾಜಕೀಯ ಮುಖಂಡರು ಮತ್ತು ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು, ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಹಾಗೂ ನೈರ್ಮಲ್ಯ ಕಾರ್ಯಕರ್ತರು ಮತ್ತು ಕಾರ್ಮಿಕರು ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು. ಸುಮಾರು 9,000 ಜನರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಕಾರ್ಯಕ್ರಮಕ್ಕಾಗಿ ಉಪಸ್ಥಿತರಿರುವರು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ; ಎನ್‌ಡಿಎ ಮೈತ್ರಿಕೂಟದಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಸಮುದಾಯದ ಸಂಸದರೆ ಇಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...