Homeಚಳವಳಿಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ, ತಲೆಕೆಡಿಸಿಕೊಳ್ಳಬೇಡಿ: ಯಡಿಯೂರಪ್ಪ

ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇರುವಂತಹ ಸರ್ಕಾರ. ರೈತರಿಗೆ ಧಕ್ಕೆಯಾಗುವ ಕೆಲಸವನ್ನು ನರೇಂದ್ರ ಮೋದಿ ಎಂದಿಗೂ ಮಾಡುವುದಿಲ್ಲ: ಬಿಎಸ್‌ವೈ

- Advertisement -
- Advertisement -

ರೈತ ವಿರೋಧಿ ಕೃಷಿ ಮಸೂದೆಗಳನ್ನು ವಿರೋಧಿಸಿ ಇಂದು ದೇಶದಾದ್ಯಂತ ಭಾರತ್ ಬಂದ್‌ಗೆ ಕರೆ ನೀಡಲಾಗಿದ್ದು, ಕರ್ನಾಟಕದಲ್ಲಿಯೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, “ಈ ಬಂದ್‌ಗೆ ಯಾರೂ ಸಹಕಾರ ಕೊಡುವುದಿಲ್ಲ. ಹಾಗಾಗಿ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೇಶದಾದ್ಯಂತ ಇರುವ ನೂರಾರು ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದವು. ಇದನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ಸಹ ರೈತ, ದಲಿತ ಮತ್ತು ಕಾರ್ಮಿಕ ಸಂಘಟನೆಗಳ ಒಕ್ಕೂಟದ ಐಕ್ಯ ಹೋರಾಟ ಸಮಿತಿ ಸೇರಿದಂತೆ ಅನೇಕ ಪಕ್ಷ, ಸಂಘಟನೆಗಳು ಭಾರತ್ ಬಂದ್‌ ನಲ್ಲಿ ತೊಡಗಿವೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸಿದ್ದಕ್ಕೆ ದೆಹಲಿ ಸಿಎಂ ಕೇಜ್ರಿವಾಲ್‌ರನ್ನೆ ಗೃಹ ಬಂಧನದಲ್ಲಿಟ್ಟ ಪೊಲೀಸರು: ಆಪ್ ಆರೋಪ

ಈ ಕುರಿತು ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಯಡಿಯೂರಪ್ಪ, “ರಾಜ್ಯದಲ್ಲಿರಬಹುದು ಅಥವಾ ಕೇಂದ್ರದಲ್ಲಿರಬಹುದು, ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇರುವಂತಹ ಸರ್ಕಾರ. ರೈತರಿಗೆ ಧಕ್ಕೆಯಾಗುವಂತಹ ಕೆಲಸವನ್ನು ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಎಂದಿಗೂ ಮಾಡುವುದಿಲ್ಲ. ಇದೆಲ್ಲಾ ಗೊತ್ತಿದ್ದರೂ ಸಹ ಯಾವುದೋ ರಾಜಕೀಯ ಕಾರಣಕ್ಕಾಗಿ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಇದಕ್ಕೆ ಜನ ಸಹಕಾರ ಕೊಡುವುದಿಲ್ಲ. ಬೆಂಗಳೂರಿನಲ್ಲಿಯೂ ಕರ್ನಾಟಕದಲ್ಲಿಯೂ ಸಹ ಯಾರೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ದಿನನಿತ್ಯದಂತೆ ಜನರ ಜೀವನ ಸುಸೂತ್ರವಾಗಿ ನಡೆಯಬೇಕು. ಯಾರಾದರೂ ಅಡ್ಡಿಪಡಿಸಿದರೆ ಕಾನೂನು ಮತ್ತು ಪೊಲೀಸರು ಕ್ರಮ ಕೈಗೊಳ್ಳುತ್ತಾರೆ” ಎಂದು ಹೇಳಿದರು.

ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ಇದನ್ನೂ ಓದಿ: ರೈತ ಇದ್ರೇನೆ ದೇಶ: ರೈತ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್ ಬೆಂಬಲ

ಕಾಂಗ್ರೆಸ್ ಪಕ್ಷ ಕೂಡ ಈ ಬಂದ್ ಅನ್ನು ಬೆಂಬಲಿಸಿದ್ದು, ಅಧಿವೇಶನಕ್ಕೆ ಕಪ್ಪುಪಟ್ಟಿ ಧರಿಸಿ ಬರುವುದಾಗಿ ಹೇಳಿದ್ದಾರೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, “ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಕಪ್ಪು ಪಟ್ಟಿ ಧರಿಸಿದರೂ ಬಿಳಿಪಟ್ಟಿ ಧರಿಸಿದರೂ ಅವರನ್ನು ಕೇಳುವವರಾರು” ಎಂದು ಹೇಳಿದ್ದಾರೆ.

ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕಳೆದ 13 ದಿನಗಳಿಂದ ಕೊರೆವ ಚಳಿಯಲ್ಲಿ ಹೋರಾಟ ನಡೆಸಿರುವ ರೈತರು ಕರೆ ನೀಡಿದ್ದ ಇಂದಿನ ಭಾರತ್ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತರಾಗಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು ತಮ್ಮ ದಿನನಿತ್ಯದ ಕೆಲಸಗಳಿಗೆ ಹಾಜರಾಗದೇ ಮನೆಯಲ್ಲಯೇ ಉಳಿದಿದ್ದಾರೆ. ಹಾಗಾಗಿ ಬೆಂಗಳೂರಿನ ಬಹುತೇಕ ರಸ್ತೆಗಳು ಖಾಲಿ ಖಾಲಿಯಾಗಿವೆ.

ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕೆ ವೇಗವಾಗಿ ಧುಮುಕುವ ನಟರು ರೈತರ ಪರ ಒಂದು ಮಾತನ್ನೂ ಆಡಿಲ್ಲ: ನಟ…

ಬೆಂಗಳೂರಿನಲ್ಲಿ ಬಂದ್‌ಗೆ ಕರೆ ನೀಡಿರುವ ರೈತ-ದಲಿತ-ಕಾರ್ಮಿಕರ ‘ಐಕ್ಯ ಹೋರಾಟ’ ಸಮಿತಿಯು ಬೆಳಿಗ್ಗೆಯಿಂದಲೇ ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಜಮಾಯಿಸಿ ಹೋರಾಟ ಆರಂಭಿಸಿದ್ದಾರೆ.

ರೈತರು ನಡೆಸುತ್ತಿರುವ ಹೋರಾಟಕ್ಕೆ ಖ್ಯಾತ ಕನ್ನಡ ಚಿತ್ರನಟ ಡಾ.ಶಿವರಾಜ್‌ ಕುಮಾರ್ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ.. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ.. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಡಿ.‌ 15ರೊಳಗೆ ಶಾಲೆ ಆರಂಭಿಸಿ: ಸಂಘಟನೆಗಳಿಂದ ಶಿಕ್ಷಣ ಸಚಿವರಿಗೆ ಬಹಿರಂಗ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕೇಜ್ರಿವಾಲ್‌ಗೆ ಇನ್ಸುಲಿನ್ ಅಗತ್ಯವಿದೆಯೇ ಎಂಬುದನ್ನು ನಿರ್ಧರಿಸಲು ವೈದ್ಯಕೀಯ ತಂಡ ರಚಿಸಿ..’; ಸುಪ್ರೀಂ ಕೋರ್ಟ್‌ ಸೂಚನೆ

0
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವೈದ್ಯರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರತಿದಿನ ಸಮಾಲೋಚನೆ ನಡೆಸುವಂತೆ ಮಾಡಿದ ಮನವಿಯನ್ನು ತಿರಸ್ಕರಿಸಿದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು, ಇನ್ಸುಲಿನ್ ಅಗತ್ಯವಿದೆಯೇ ಅಥವಾ...