Homeಮುಖಪುಟ10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ 'ಮನ್-ಕಿ-ಬಾತ್'!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

10 ಲಕ್ಷ ಡಿಸ್‌ಲೈಕ್ ಮೂಲಕ ದಾಖಲೆ ಬರೆದ ಮೋದಿಯ ‘ಮನ್-ಕಿ-ಬಾತ್’!: ಡಿಸ್‌ಲೈಕ್‌ ತೆಗೆದುಹಾಕಲಾಗಿದೆಯೆಂಬ ಆರೋಪ?

ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

- Advertisement -
- Advertisement -

ಹತ್ತುಲಕ್ಷ ಡಿಸ್‌ಲೈಕ್ ಗಳಿಸಿ, ಪ್ರಧಾನಿ ಮೋದಿಯ ‘ಮನ್-ಕಿ-ಬಾತ್’ ಕಾರ್ಯಕ್ರಮ ದಾಖಲೆ ಬರೆದಿದೆ. ಅದಾಗ್ಯೂ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಪ್ರತಿ ಬಾರಿ ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿತ್ತು. ಆದರೆ ಈ ಬಾರಿಯ ಆಗಸ್ಟ್ 30ರ ಮನ್ ಕಿ ಬಾತ್‌ಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿಯವರ ಜನಪ್ರಿಯತೆ ಕುಸಿದಿದೆ ಎಂಬ ಚರ್ಚೆ ಆರಂಭವಾಗಿತ್ತು.

ಮನ್‌ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿತ್ತು. ಅಲ್ಲೆ ಅತ್ಯಧಿಕ ಜನ ಡಿಸ್‌ಲೈಕ್ ಮಾಡುವ ಮೂಲಕ ತಮ್ಮ ವಿರೋಧ ದಾಖಲಿಸಿದ್ದಾರೆ. ಈ ವರದಿ ಬರೆಯುವ ವೇಳೆಗೆ ಒಂದೇ ದಿನದಲ್ಲಿ, ಆ ವಿಡಿಯೋಗೆ 3 ಲಕ್ಷ ಜನರು ಲೈಕ್ ಒತ್ತಿದರೆ 10 ಲಕ್ಷ ಜನರು ಡಿಸ್‌ಲೈಕ್‌ ಒತ್ತುವ ಮೂಲಕ ಮೋದಿಯವರನ್ನು ಮುಜುಗರಕ್ಕೀಡುಮಾಡಿದ್ದಾರೆ.

ಇದನ್ನೂ ಓದಿ: ಮೋದಿಯವರದ್ದೇ ಯೂಟ್ಯೂಬ್‌ನಲ್ಲಿ ಅವರ ಜನಪ್ರಿಯತೆ ಕುಸಿತ: ಮನ್ ಕಿ ಬಾತ್ ತಿರಸ್ಕರಿಸಿದ ವಿದ್ಯಾರ್ಥಿಗಳು!

ಆದರೆ ಇಂದು ಈ ವರದಿ ಬರೆಯುವ ವೇಳೆಗೆ ಡಿಸ್ಲೈಕ್ ಗಳ ಸಂಖ್ಯೆ 1 ಮಿಲಿಯನ್ ದಾಟಿ ದಾಖಲೆ ಬರೆದಿದೆ. ಲೈಕ್ ಗಳ ಸಂಖ್ಯೆ ಕೇವಲ 3 ಲಕ್ಷ ದಾಟಿದೆ.

ಈ ನಡುವೆ ಡಿಸ್‌ಲೈಕ್‌ಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದರ ಕುರಿತು ಪ್ರಜಾವಾಣಿ ವರದಿ ಮಾಡಿದೆ.

“ಮಂಗಳವಾರ ಸಂಜೆ 6.30ರಲ್ಲಿ ಪರಿಶೀಲಿಸದಾಗ ಡಿಸ್‌ಲೈಕ್‌ಗಳ ಸಂಖ್ಯೆ 9.92 ಲಕ್ಷ ಇತ್ತು. 7 ಗಂಟೆಯಲ್ಲಿ 9.98 ಲಕ್ಷದಷ್ಟಿತ್ತು. ಆದರೆ ರಾತ್ರಿ 8.40 ರಲ್ಲಿ ಪರಿಶೀಲಿಸಿದಾಗ, ಡಿಸ್‌ಲೈಕ್‌ಗಳ ಸಂಖ್ಯೆ 9.3 ಲಕ್ಷಕ್ಕೆ ಕುಸಿದಿತ್ತು. ಅದು ಹೇಗೆ ಕುಸಿಯಲು ಸಾಧ್ಯ ಎಂದು ಪತ್ರಿಕೆ ಪ್ರಶ್ನಿಸಿದೆ.

ಬಿಜೆಪಿ ಐಟಿ ಸೆಲ್ ದೇಶದಲ್ಲಿ ಅತ್ಯಂತ ಪ್ರಭಾವಿ ಮತ್ತು ವಿಸ್ತೃತ ಜಾಲ ಹೊಂದಿದೆ ಎಂದು ಹೇಳಲಾಗುತ್ತದೆ. ಡಿಸ್‌ಲೈಕ್‌ಗಳಿಗಿಂತ ಲೈಕ್ ಸಂಖ್ಯೆ ಹೆಚ್ಚು ಮಾಡಿ ಅವಮಾನ ತಡೆಯಲು ಬಿಜೆಪಿ ಐಟಿ ಸೆಲ್ ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಒಂದೇ ಸಮನೇ ಡಿಸ್‌ಲೈಕ್‌ಗಳ ಸಂಖ್ಯೆ ಏರತೊಡಗಿದೆ. ಹಾಗಾಗಿ ಕೊನೆಗೆ ಅಧಿಕಾರದ ಪ್ರಭಾವ ಬಳಿಸಿ ಡಿಸ್‌ಲೈಕ್‌ಗಳನ್ನೇ ಇಳಿಸುವ ಕೆಲಸಕ್ಕೆ ಬಿಜೆಪಿ ಕೈಹಾಕಿದೆ ಎಂಬ ಆರೋಪ ಕೇಳಿಬಂದಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರವನ್ನು ಯೂಟ್ಯೂಬ್‌ನಲ್ಲಿ ಅತಿಹೆಚ್ಚು ಸಂಖ್ಯೆಯ ಜನರು ಡಿಸ್ ಲೈಕ್ ಮಾಡಿರುವ ಬೆನ್ನಲ್ಲೇ ಟ್ವಿಟರ್ ನಲ್ಲಿ #StudentsDislikePMModi ಹ್ಯಾಶ್‌ಟ್ಯಾಗ್ ಟ್ರೆಂಡಿಂಗ್ ಆಗಿತ್ತು.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹೊತ್ತಲ್ಲಿ, ಲಕ್ಷಾಂತರ ವಿದ್ಯಾರ್ಥಿಗಳ, ಹಲವು ರಾಜ್ಯಗಳ ವಿರೋಧದ ನಡುವೆಯೂ NEET ಮತ್ತು JEE ಪರೀಕ್ಷೆಗಳನ್ನು ನಡೆಸಲು ಕೇಂದ್ರ ತಯಾರಿ ನಡೆಸಿರುವುದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಮೋದಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಈಗಾಗಲೇ ಜೆಇಇ ಮತ್ತು ನೀಟ್ ಪರೀಕ್ಷೆಗಳು ಪ್ರಾರಂಭವಾಗಿವೆ. ಆದರೂ ಮನ್-ಕಿ-ಬಾತ್ ವೀಡಿಯೋಗೆ  ಡಿಸ್‌ಲೈಕ್‌ಗಳ ಸಂಖ್ಯೆ ಮಾತ್ರ ಒಂದೇ ಸಮನೆ ಏರುತ್ತಿದೆ (ಪ್ರಸ್ತುತ ಹತ್ತುಲಕ್ಷ). ಇದು ಮೋದಿ ಆಡಳಿತದ ವಿರುದ್ಧ ಜನಾಕ್ರೋಶ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...