Homeಕರ್ನಾಟಕFACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು 'ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ...

FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

- Advertisement -
- Advertisement -

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದರು.

ವಿಭಿನ್ನ ತಲೆಬರಹದಡಿ ಸುದ್ದಿ ಬಿತ್ತರಿಸಿದ್ದ ಮಾದ್ಯಮಗಳು:

ಕನ್ನಡದ ಸುದ್ದಿ ಮಾಧ್ಯಮಗಳಾದ ಟಿವಿ9, ಸುವರ್ಣ ನ್ಯೂಸ್, ಪಬ್ಲಿಕ್ ಟಿವಿ, ವಿಸ್ತಾರ ನ್ಯೂಸ್, ನ್ಯೂಸ್ ಫಸ್ಟ್ ಹಾಗೂ ರಿಪಬ್ಲಿಕ್ ಕನ್ನಡ ಸೇರಿದಂತೆ ಬಹುತೇಕ ಮಾಧ್ಯಮಗಳು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಸುದ್ದಿ ಹರಡಿದೆ.

‘ವಿಧಾನ ಸೌಧದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನಿಂದ ಪಾಕ್‌ ಪರ ಘೋಷಣೆ’, ‘ವಿಧಾನಸೌಧದಲ್ಲಿ ಗೆಲುವಿನ ಸಂಭ್ರಮದಲ್ಲಿ ಮೊಳಗಿದ ಪಾಕಿಸ್ತಾನ ಝಿಂದಾಬಾದ್‌’ ಎಂದು ಭಿನ್ನ ತಲೆಬರಹದ ಜೊತೆ ಟಿವಿ9 ವರದಿ ಮಾಡಿದೆ.

‘ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ’ ಎಂದು ಇನ್ನೊಂದು ಕನ್ನಡ ಮಾದ್ಯಮ ವಿಸ್ತಾರ ನ್ಯೂಸ್ ವರದಿ ಮಾಡಿದೆ.
ಇನ್ನೊಂದು ಮುಖ್ಯವಾಹಿನಿ ಮಾಧ್ಯಮ ‘ನ್ಯೂಸ್‌ 18 ಕನ್ನಡ’ ‘ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರು’ ಎಂದು ಸುದ್ದಿಯನ್ನು ಬಿತ್ತರಿಸಿದೆ.

‘ರಿಪಬ್ಲಿಕ್ ಕನ್ನಡ’ ಸುದ್ದಿ ಮಾದ್ಯಮ ವಿಧಾನ ಸೌಧದಲ್ಲಿ ಪಾಕ್‌ ಪರ ಘೋಷಣೆ ಎಂದು ತಲೆಬರಹದಡಿ ಸುದ್ದಿಯನ್ನು ಬಿತ್ತರಿಸಿದೆ.

‘ವಿಧಾನ ಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ ಕೂಗಿದ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ಬೆಂಬಲಿಗರು’ ಎಂದು ವಿಜಯವಾಣಿ ಸುದ್ದಿಯನ್ನು ಪ್ರಕಟಿಸಿದೆ.

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ ಘಟನೆ ಮಂಗಳವಾರ ನಡೆದಿದೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ಈ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ‘ಸುವರ್ಣ ನ್ಯೂಸ್’ ವರದಿ ಮಾಡಿದೆ.

https://twitter.com/AsianetNewsSN/status/1762480895762526555

ರಾಜ್ಯಸಭಾ ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್‌ ಘೋಷಣೆ.. ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಜೈಕಾರ ಕೂಗಿದ ಬೆಂಬಲಿಗರು ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

 

ಬಿಜೆಪಿಯಿಂದ ಪ್ರತಿಭಟನೆ

ವಿಧಾನ ಸೌಧದಲ್ಲಿ ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್‌’  ಘೋಷಣೆ ಕೂಗಿದ್ದಾರೆಂದು  ಬಿಜೆಪಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದೆ. ವಿಧಾನಸೌಧದ ಲಾಂಜ್​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೋಲಾರದಲ್ಲಿ ಈ ಬಗ್ಗೆ ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಾಸೀರ್ ಹುಸೇನ್ ವಿರುದ್ದ ಘೋಷಣೆ ಕೂಗಿದ್ದರು. ಅಲ್ಲದೆ ನಾಸಿರ್ ಹುಸೇನ್ ಬಾವಚಿತ್ರಕ್ಕೆ ಬೆಂಕಿ ಹಚ್ಚಿದ್ದರು. ವಿವಿಧೆಡೆ ಬಿಜೆಪಿ ಯುವ ಮೋರ್ಚಾ ಕೂಡ ಪ್ರತಿಭಟನೆ ನಡೆಸಿತ್ತು.

ಇದಲ್ಲದೆ ಬಿಜೆಪಿ ನಾಯಕರು ಒಬ್ಬರ ಹಿಂದೆ ಒಬ್ಬರಂತೆ ಹೇಳಿಕೆಯನ್ನು ಕೊಟ್ಟಿದ್ದಾರೆ. ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಮಾತನಾಡಿ, ಕಾಂಗ್ರೆಸ್‌ನವರಿಗೆ ಮಾನ ಮರ್ಯಾದೆ ಇದ್ದರೆ ಅಧಿಕಾರದಲ್ಲಿ ಇರಬಾರದು, ಸಿಎಂ ರಾಜೀನಾಮೆ ನೀಡಬೇಕು, ರಾಜ್ಯಪಾಲರು ಸರಕಾರವನ್ನು ವಜಾ ಮಾಡಬೇಕು ಎಂದೆಲ್ಲಾ ಆಗ್ರಹಿಸಿದ್ದರು. ಬಿಜೆಪಿ ಶಾಸಕ ಹರೀಶ್‌ ಪೂಂಜಾ ಮಾತನಾಡಿ, ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕುತ್ತೇವೆ, ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದ್ದರು. ಘಟನೆಯ ಪೂರ್ಣ ಚಿತ್ರಣ ನಾಸೀರ್‌ ಹಸೇನ್‌ಗೆ ಗೊತ್ತಿತ್ತು ಎಂದು ಇದೊಂದು ಪೂರ್ವ ನಿಯೋಜಿತ ಎಂಬಂತೆ ಹೇಳಿಕೆ ಕೊಟ್ಟಿದ್ದರು.

ಈ ಬಗ್ಗೆ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜಕೀಯ ಕಾರ್ಯದರ್ಶಿ, ಕಾಂಗ್ರೆಸ್ ನ ನಸೀರ್ ಹುಸೇನ್ ಗೆದ್ದ ನಂತರ ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಮೊಳಗಿದೆ ಎಂದು ಆಪಾದಿಸಿದ್ದರು.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

ಪಾಕಿಸ್ತಾನದ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು ಮಾಡಲಾಗಿದೆ. ಕರ್ತವ್ಯನಿರತ ಎಎಸ್​ಐ ಶಿವಕುಮಾರ್ ದೂರಿನ ಅನ್ವಯ ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 505(1)(B), 153B ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಫ್ಯಾಕ್ಟ್‌ಚೆಕ್‌:

ಈ ಬಗ್ಗೆ ನಾನು ಗೌರಿ.ಕಾಂ ವಾಸ್ತವಾಂಶಗಳನ್ನು ಪರಿಶೀಲನೆ ನಡೆಸಿದ್ದು, ಸುದ್ದಿ ಮಾದ್ಯಮಗಳು ವರದಿ ಮಾಡಿದ ವಿಡಿಯೋ ಹಾಗೂ ಇತರ ಹಲವು ವಿಡಿಯೋಗಳನ್ನು ಅವಲೋಕಿಸಿದೆ. ಈ ವೇಳೆ ವಾಸ್ತವವೇ ಬೇರೆ, ಕನ್ನಡ ಸುದ್ದಿ ಮಾದ್ಯಮಗಳು ಹರಡಿರುವುದು ಸುಳ್ಳು ಸುದ್ದಿ ಎನ್ನುವುದು ಬಯಲಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ಅವರ ಬೆಂಬಲಿಗರು ಅವರ ಪಕ್ಕದಲ್ಲೇ ನಿಂತುಕೊಂಡು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಘೋಷಣೆ ಕೂಗಿರುವುದು ಸ್ಪಷ್ಟವಾಗಿ ವಿಡಿಯೋಗಳಲ್ಲಿ ಸೆರೆಯಾಗಿದೆ. ನಾಸೀರ್‌ ಹುಸೇನ್‌ ಗೆಲುವನ್ನು ಸಂಭ್ರಮಿಸುತ್ತಿರುವಾಗ ನೂರಾರು ಬೆಂಬಲಿಗರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಸೇರಿದ್ದರು. ಅವರು ‘ನಾಸೀರ್ ಸಾಬ್ ಝಿಂದಾಬಾದ್’ ಎಂದು ಕೂಗಿದ್ದಾರೆ ಹೊರತು ಪಾಕಿಸ್ತಾನ ಝಿಂದಾಬಾದ್‌ ಎಂದು ಕೂಗಿಲ್ಲ ಎನ್ನುವುದು ಬಯಲಾಗಿದೆ.

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮುಹಮ್ಮದ್‌ ಝುಬೈರ್‌ ಅವರೂ, ಈ ವೀಡಿಯೊ ವನ್ನು ಸ್ಲೋ ಮೋಷನ್‌ನಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅದರಲ್ಲಿ ಸ್ಪಷ್ಟವಾಗಿ ನಾಸಿರ್‌ ಸಾಬ್‌ ಝಿಂದಾಬಾದ್‌ ಎಂದು ಕೂಗುವುದು ಕೇಳಿಸುತ್ತಿದೆ.
https://twitter.com/zoo_bear/status/1762496344563040310
ವೈರಲ್ ಆಗುತ್ತಿರುವ ವಿಡಿಯೋದಲ್ಲಿ, “ನಾಸೀರ್ ಸಾಬ್ ಜಿಂದಾಬಾದ್‌” ಎಂದು ಕೂಗುತ್ತಿರುವುದು ಸ್ಪಷ್ಟವಾಗಿ ಕೇಳಿಸುತ್ತಿದ್ದರೂ, ಮಾಧ್ಯಮಗಳು “ಪಾಕಿಸ್ತಾನ ಜಿಂದಾಬಾದ್‌” ಎಂದು ಕೂಗುತ್ತಿದ್ದಾರೆ ಎಂದು ಸುದ್ದಿ ಬಿತ್ತರಿಸಿ ಸಮಾಜದ ಸಾಮರಸ್ಯವನ್ನು ಕದಡುವ ಕೆಲಸ ಮಾಡಿದೆ ಎನ್ನುವುದು ಪರಿಶೀಲನೆಯ ವೇಳೆ ಕಂಡು ಬಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...