Homeಕರ್ನಾಟಕಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ: ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟ ನಾಸಿರ್ ಹುಸೇನ್

ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಆರೋಪ: ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟ ನಾಸಿರ್ ಹುಸೇನ್

- Advertisement -
- Advertisement -

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಝಿಂದಾಬಾಂದ್’ ಘೋಷಣೆ ಕೂಗಲಾಗಿದೆ ಎಂಬ ಬಿಜೆಪಿ ಮತ್ತು ಮಾಧ್ಯಮಗಳ ಆರೋಪದ ಕುರಿತು ರಾಜ್ಯಸಭಾ ಸದಸ್ಯ ಡಾ. ಸೈಯ್ಯದ್ ನಾಸಿರ್ ಹುಸೇನ್ ವಿಡಿಯೋ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ.

ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಅವರು, “ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಕ್ಕೆ, ನಮ್ಮ ಕಾರ್ಯಕರ್ತರು ಮತ್ತು ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ನಾನೂ ಅಲ್ಲಿದ್ದೆ. ನಮ್ಮ ಬೆಂಬಲಿಗರು ನಾಸಿರ್ ಹುಸೇನ್ ಝಿಂದಾಬಾದ್, ನಾಸಿರ್ ಖಾನ್ ಝಿಂದಾಬಾದ್, ನಾಸಿರ್ ಸಾಬ್ ಝಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ” ಎಂದಿದ್ದಾರೆ.

“ನಾನು ಮನೆಗೆ ಹೊರಟಾಗ ಮಾಧ್ಯಮಗಳಿಂದ ನನಗೆ ಕರೆ ಬಂತು. ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಅವರು ಹೇಳಿದರು. ಅದಕ್ಕೆ ಉತ್ತರಿಸಿದ ನಾನು, ಅಲ್ಲಿ ಹಲವು ಘೋಷಣೆಗಳನ್ನು ಕೂಗಲಾಗಿದೆ. ಪಾಕಿಸ್ತಾನ್ ಝಿಂದಾಬಾದ್ ಎಂಬ ಘೋಷಣೆ ಕೂಗಿರುವುದು ನನ್ನ ಕಿವಿಗೆ ಬಿದ್ದಿಲ್ಲ ಎಂದಿದ್ದೇನೆ. ಅದು ಏನೇ ಆಗಿದ್ದರೂ ತನಿಖೆ ನಡೆಸುವಂತೆ ಪೊಲೀಸರನ್ನು ಕೇಳುತ್ತೇನೆ. ಅವರು ತನಿಖೆ ನಡೆಸಲಿ” ಎಂದು ನಾಸಿರ್ ಹುಸೇನ್ ಹೇಳಿದ್ದಾರೆ.

“ಯಾರಾದರು ಆ ರೀತಿಯ ಘೋಷಣೆ ಕೂಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಕುರಿತು ತನಿಖೆಯಾಗಬೇಕು. ವಿಡಿಯೋವನ್ನು ತಿರುಚಿದ್ದರೆ ಆ ಬಗ್ಗೆಯೂ ತನಿಖೆ ನಡೆಯಬೇಕು. ಯಾರಾದರು ಘೋಷಣೆ ಕೂಗಿದ್ದರೆ, ಆ ವ್ಯಕ್ತಿ ಯಾರು? ಆತ ಎಲ್ಲಿಯವನು? ಮತ್ತು ಆತ ವಿಧಾನಸೌಧಕ್ಕೆ ಪ್ರವೇಶ ಪಡೆದಿದ್ದು ಹೇಗೆ? ಈ ರೀತಿ ಘೋಷಣೆ ಕೂಗಿರುವುದರ ಹಿಂದಿನ ಉದ್ದೇಶವೇನು? ಈ ಎಲ್ಲದರ ಬಗ್ಗೆ ತನಿಖೆ ಆಗಬೇಕು” ಎಂದಿದ್ದಾರೆ.

“ನನ್ನ ಗಮನಕ್ಕೆ ಬಂದ ಹಾಗೆ ಆ ಸ್ಥಳದಲ್ಲಿ ಆ ರೀತಿಯ ಯಾವುದೇ ಘೋಷಣೆ ಕೂಗಲಾಗಿಲ್ಲ. ಒಂದು ವೇಳೆ ನನ್ನ ಸಮ್ಮುಖದಲ್ಲಿ ಯಾರಾದರೂ ಅಂತಹ ಘೋಷಣೆ ಕೂಗಿದ್ದರೆ ನಾನು ಸುಮ್ಮನಿರುತ್ತಿರಲಿಲ್ಲ. ಯಾವುದೇ ಒಬ್ಬ ಭಾರತೀಯ ಅಂತಹದ್ದನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿ, ಈ ಬಗ್ಗೆ ತನಿಖೆ ನಡೆಯುವವರೆಗೂ ಕಾಯೋಣ’ ಎಂದು ಹೇಳಿದ್ದಾರೆ.

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರು ವಿಭಿನ್ನ ಹೇಳಿಕೆಗಳನ್ನು ಕೊಟ್ಟಿದ್ದಾರೆ.

ಇದನ್ನೂ ಓದಿ : FACT CHECK| ನಾಸೀರ್‌ ಹುಸೇನ್‌ ಬೆಂಬಲಿಗರು ‘ಪಾಕಿಸ್ತಾನ್‌ ಝಿಂದಾಬಾದ್ʼ ಘೋಷಣೆ ಕೂಗಿದ್ದಾರಾ? ಕನ್ನಡ ಮಾದ್ಯಮಗಳ ಸುದ್ದಿಯ ವಾಸ್ತವಾಂಶವೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...