Homeಮುಖಪುಟಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ: ಬಿಜೆಪಿ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್

"ಚುನಾವಣೆಯಲ್ಲಿ ಸೋಲಿಸಲಾಗದ ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ" -ಕೇಜ್ರಿವಾಲ್

- Advertisement -
- Advertisement -

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದ ಬಿಜೆಪಿ ಕಾರ್ಯಕರ್ತರು ತಮ್ಮ ಮನೆಯ ಮೇಲೆ ದಾಳಿ ನಡೆಸಿದ್ದನ್ನು ಖಂಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ‘ಗೂಂಡಾಗಿರಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ’ ಎಂದಿದ್ದಾರೆ.

“ಪ್ರಪಂಚದ ಅತಿ ದೊಡ್ಡ ಪಕ್ಷ ಮತ್ತು ಭಾರತದಲ್ಲಿ ಆಡಳಿತದಲ್ಲಿರುವ ಬಿಜೆಪಿಯು ಈ ರೀತಿಯ ಗೂಂಡಾಗಿರಿ ನಡೆಸಿದರೆ ದೇಶದ ಯುವಜನರಿಗೆ ಯಾವ ಸಂದೇಶ ನೀಡಿದಂತಾಗುತ್ತದೆ? ಈ ರೀತಿಯಿಂದ ದೇಶ ಅಭಿವೃದ್ದಿಯಾಗುವುದಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಬಿಜೆಪಿಯವರು ನನ್ನನ್ನು ಕೊಲ್ಲಲು ಯತ್ನಿಸುತ್ತಿದ್ದಾರೆ. ಏಕೆಂದರೆ ಚುನಾವಣೆಯಲ್ಲಿ ನಮ್ಮನ್ನು ಸೋಲಿಸಲು ನಿಮಗೆ ಸಾಧ್ಯವಿಲ್ಲ. ಆದರೆ ಕೇಜ್ರಿವಾಲ್ ಮುಖ್ಯವಲ್ಲ. ನಾನು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ದನಿದ್ದೇನೆ” ಕೇಜ್ರಿವಾಲ್ ಹೇಳಿದ್ದಾರೆ.

ಕಾಶ್ಮೀರ್ ಫೈಲ್ಸ್ ಚಿತ್ರದ ಕುರಿತು ಕೇಜ್ರಿವಾಲ್‌ ನೀಡಿದ ಹೇಳಿಕೆ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಲಾಗಿದ್ದು ಕೇಜ್ರಿವಾಲ್ ಮನಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸಿದೆ ಎಂದು ಆಮ್‌ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿದ್ದು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ.

ಪಂಜಾಬ್ ವಿಧಾನಸಭೆಯಲ್ಲಿ ಎಎಪಿ ಗೆಲುವು ಬಿಜೆಪಿಯನ್ನು ಕಂಗೆಡಿಸಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ. ಪಂಜಾಬ್ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣ, ಬಿಜೆಪಿ ಈಗ ಅವರನ್ನು ಕೊಲ್ಲಲು ಬಯಸಿದೆ ಎಂದಿದ್ದಾರೆ.

ಬುಧವಾರ ಮುಖ್ಯಮಂತ್ರಿಯವರ ಮನೆ ಮೇಲೆ ನಡೆದ ದಾಳಿಯು, ಪೊಲೀಸರ ಸಹಾಯದಿಂದ ಕೇಜ್ರಿವಾಲ್ ಅವರನ್ನು ಬಿಜೆಪಿ ಕೊಲ್ಲಲು ಬಯಸುತ್ತಿದೆ ಎಂಬುದನ್ನು ತೋರಿಸುತ್ತದೆ. ಇದರ ವಿರುದ್ಧ ನಾವು ಔಪಚಾರಿಕ ದೂರು ನೀಡುತ್ತೇವೆ ಎಂದು ಸಿಸೋಡಿಯಾ ಮಾಹಿತಿ ನೀಡಿದ್ದಾರೆ.

“ಕೇಜ್ರಿವಾಲ್ ಮೇಲೆ ನಡೆದಿರುವ ಜೀವ ಬೆದರಿಕೆಯ ದಾಳಿ ಇದಾಗಿದೆ. ದಾಳಿಯನ್ನು ವ್ಯವಸ್ಥಿತವಾಗಿ ಯೋಜಿಸಲಾಗಿದೆ” ಎಂದು ಅವರು ದೂರಿದ್ದಾರೆ.

“ಎಎಪಿ ಸಮಾಜದ ಎಲ್ಲಾ ವರ್ಗಗಳಿಂದ ಬೆಂಬಲ ಪಡೆಯುತ್ತಿರುವುದರಿಂದ ಬಿಜೆಪಿ ಪ್ಯಾನಿಕ್ ಮೋಡ್‌ನಲ್ಲಿದೆ. ಬಿಜೆಪಿಯ ಗೂಂಡಾಗಳಿಂದ ಕೇಜ್ರಿವಾಲ್-ಜಿ ಮೇಲಾದ ದಾಳಿಯು ಭಾರತದ ಜನರ ಮೇಲಿನ ದಾಳಿಯಾಗಿದೆ. ಜನರು ಬಿಜೆಪಿಗೆ ತಕ್ಕ ಪ್ರತ್ಯುತ್ತರ ನೀಡಲಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು ಸಂಸದರ ನೇತೃತ್ವದಲ್ಲಿ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತರು ಬುಧವಾರ ದೆಹಲಿ ಮುಖ್ಯಮಂತ್ರಿಯವರ ನಿವಾಸದ ಬಳಿ ಘೋಷಣೆಗಳನ್ನು ಕೂಗಿದರು. ಕಾಶ್ಮೀರಿ ಪಂಡಿತರ ದುಸ್ಥಿತಿಯನ್ನು ಕೇಜ್ರಿವಾಲ್ ಅಣಕಿಸಿದ್ದಾರೆಂದು ಆರೋಪಿಸಿ, ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.

ಸೂರ್ಯ ಸೇರಿದಂತೆ ಕೆಲವು ಸದಸ್ಯರು ಸಿಎಂ ನಿವಾಸದ ಮುಖ್ಯ ಗೇಟ್ ತಲುಪಲು ಯಶಸ್ವಿಯಾದರು. ಸ್ಟೀಲ್ ಬಾಗಿಲಿಗೆ ಬಣ್ಣ ಎಸೆದರು. ಗೇಟ್ ಬಳಿ ಅಳವಡಿಸಲಾದ ಸಿಸಿಟಿವಿಯನ್ನು ಹಾನಿಗೊಳಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸೂರ್ಯ, “ಅವರು (ಕೇಜ್ರಿವಾಲ್) ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಅಸತ್ಯ ಎಂದು ಲೇವಡಿ ಮಾಡಿದರು. ಬೇಷರತ್ ಕ್ಷಮೆಯಾಚಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ಅವರು ಕ್ಷಮೆಯಾಚಿಸುವವರೆಗೂ ನಮ್ಮ ಪ್ರತಿಭಟನೆಗಳು ಮುಂದುವರೆಯುತ್ತವೆ” ಎಂದಿದ್ದಾರೆ.

“ಈ ಪ್ರತಿಭಟನೆಯು ಚಲನಚಿತ್ರದ ಪರವಾಗಿ ಅಥವಾ ‘ದಿ ಕಾಶ್ಮೀರ ಫೈಲ್ಸ್’ ಬಗ್ಗೆ ಅಲ್ಲ. ಈ ಪ್ರತಿಭಟನೆಯು ಕಾಶ್ಮೀರದಲ್ಲಿನ ಹಿಂದೂಗಳ ನರಮೇಧವನ್ನು ನಿರಾಕರಿಸುವ ಕೇಜ್ರಿವಾಲ್ ಅವರ ಅಮಾನವೀಯ ಮನಸ್ಥಿತಿಯ ವಿರುದ್ಧವಾಗಿದೆ” ಎಂದು ಸೂರ್ಯ ಹೇಳಿದರು.

‘ಇದು ಕೇಜ್ರಿವಾಲ್ ಅವರನ್ನು ಕೊಲ್ಲುವ ಪ್ರಯತ್ನವಾಗಿದೆ’ ಎಂಬ ಸಿಸೋಡಿಯಾ ಹೇಳಿಕೆಯನ್ನು ಉಲ್ಲೇಖಿಸಿದ ಸೂರ್ಯ, “ನಾವು ಅವರನ್ನು (ಕೇಜ್ರಿವಾಲ್) ಭೇಟಿ ಮಾಡಿ ನಮ್ಮ ದುಃಖವನ್ನು ವ್ಯಕ್ತಪಡಿಸಲು ಬಯಸಿದ್ದೇವೆ. ಇದು ಕೇಜ್ರಿವಾಲ್ ಅವರನ್ನು ಹತ್ಯೆ ಮಾಡುವ ಯತ್ನ ಎಂದಿರುವುದು ಉನ್ಮಾದ ಮತ್ತು ಕಲ್ಪನೆಯಿಂದ ಕೂಡಿದೆ” ಎಂದಿದ್ದಾರೆ.

ಎಎಪಿ ಶಾಸಕ ಅತಿಶಿ ಪೊಲೀಸರ ನಿಷ್ಕ್ರಿಯತೆಯನ್ನು ಪ್ರಶ್ನಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿಎಂ ಮನೆಗೆ ಹೇಗೆ ತಲುಪಲು ಸಾಧ್ಯವಾಯಿತು ಎಂದು ಕೇಳಿದ್ದಾರೆ. “ಶಾಕಿಂಗ್! ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಆಕ್ರೋಶ ವ್ಯಕ್ತಪಡಿಸಿದಾಗ ದೆಹಲಿ ಪೊಲೀಸರು ಏನು ಮಾಡುತ್ತಿದ್ದರು?” ಎಂದು ಟ್ವೀಟ್ ಮಾಡಿದ್ದಾರೆ.

ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. 70 ಮಂದಿಯನ್ನು ಬಂಧಿಸಿ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 11.30 ರ ಸುಮಾರಿಗೆ ಐಪಿ ಕಾಲೇಜು ಬಳಿಯ ಲಿಂಕ್ ರಸ್ತೆಯಲ್ಲಿರುವ ಸಿಎಂ ನಿವಾಸದ ಹೊರಗೆ ಬಿಜೆವೈಎಂನ ಸುಮಾರು 150-200 ಪ್ರತಿಭಟನಾಕಾರರು ಧರಣಿ ಆರಂಭಿಸಿದರು ಎಂದು ಪೊಲೀಸ್ ಉಪ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಮಾಹಿತಿ ನೀಡಿದ್ದಾರೆ.

“ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ದೆಹಲಿ ಸಿಎಂ ನೀಡಿದ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಕೆಲವು ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಸಿಎಂ ನಿವಾಸದ ಹೊರಗೆ ಬಂದು ಗದ್ದಲ ಎಬ್ಬಿಸಿ ಘೋಷಣೆಗಳನ್ನು ಕೂಗಿದರು. ಸಿಎಂ ಮನೆ ಬಾಗಿಲಿಗೂ ಬಣ್ಣ ಎರಚಿದ್ದಾರೆ. ಬೂಮ್ ತಡೆಗೋಡೆ ಮತ್ತು ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾವನ್ನೂ ಧ್ವಂಸಗೊಳಿಸಲಾಗಿದೆ” ಎಂದು ಹೇಳಿದರು.

ಕಳೆದ ಗುರುವಾರ, ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡುವಾಗ ಕೇಜ್ರಿವಾಲ್ ಅವರು ಕಾಶ್ಮೀರ ಫೈಲ್‌ ಸಿನಿಮಾ ಸಂಬಂಧ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಬೇಕು ಎಂಬ ಬಿಜೆಪಿ ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್ ಅವರು, “ನೀವು ಇದಕ್ಕಾಗಿಯೇ ರಾಜಕೀಯ ಸೇರಿದ್ದೀರಾ? ಚಿತ್ರ ನಿರ್ಮಾಪಕರು ಕೋಟಿಗಟ್ಟಲೆ ಹಣ ಗಳಿಸುತ್ತಿದ್ದರೆ, ಬಿಜೆಪಿ ಸದಸ್ಯರು ಸಿನಿಮಾ ಪ್ರಚಾರಕ್ಕೆ ಇಳಿದು ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ” ಎಂದು ಟೀಕಿಸಿದ್ದರು.

“ಇದಕ್ಕಾಗಿಯೇ ನೀವು ರಾಜಕೀಯಕ್ಕೆ ಬಂದಿದ್ದೀರಾ? ಸಿನಿಮಾಗಳ ಪೋಸ್ಟರ್ ಹಾಕಲು? ನಿಮ್ಮ ಕೆಲಸದ ಬಗ್ಗೆ ನಿಮ್ಮ ಮಕ್ಕಳಿಗೆ ಕೇಳಿದಾಗ ನೀವು ಏನು ಹೇಳುತ್ತೀರಿ. ಚಿತ್ರ ಕಾ ಪೋಸ್ಟರ್ ಲಗಾತಾ ಹೂಂ? (ನಾನು ಚಲನಚಿತ್ರ ಪೋಸ್ಟರ್‌ಗಳನ್ನು ಹಾಕಿದ್ದೇನೆ) ಎನ್ನುವಿರಾ?” ಎಂದು ಕೇಜ್ರಿವಾಲ್ ಕುಟುಕಿದ್ದರು.

ಮುಂದುವರಿದು, “ನಿಜವಾಗಲೂ ಸಾರ್ವಜನಿಕ ಹಿತಾಸಕ್ತಿಯಿಂದ ಸಿನಿಮಾ ಮಾಡಿದ್ದರೆ ಸಿನಿಮಾ ನಿರ್ಮಾಪಕರು ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಬೇಕು” ಎಂದು ಕೇಜ್ರಿವಾಲ್ ಆಗ್ರಹಿಸಿದ್ದು ಜನರ ಪ್ರಶಂಸೆಗೆ ಪಾತ್ರವಾಗಿತ್ತು.

ಕಾಶ್ಮೀರಿ ಪಂಡಿತರ ನಿರ್ಗಮನವನ್ನು “ದೊಡ್ಡ ದುರಂತ” ಮತ್ತು “ಅನ್ಯಾಯ” ಎಂದು ಕರೆದಿರುವ ಕೇಜ್ರಿವಾಲ್, “ಬಿಜೆಪಿಗೆ ಕಾಶ್ಮೀರ ಫೈಲ್‌ಗಳು ಮುಖ್ಯವಾಗಿದೆ. ನನಗೆ ಕಾಶ್ಮೀರಿ ಪಂಡಿತರು ಹೆಚ್ಚು ಮುಖ್ಯ. ಕಾಶ್ಮೀರದಿಂದ ಪಂಡಿತರು ವಲಸೆ ಬಂದಾಗ 1993ರಲ್ಲಿ 233 ಪಂಡಿತರು ದೆಹಲಿ ಸರ್ಕಾರಕ್ಕೆ ಗುತ್ತಿಗೆ ಶಿಕ್ಷಕರಾಗಿ ಸೇರಿದ್ದರು. ನಮ್ಮ ಸರ್ಕಾರ ಬಂದಾಗ ಅವರನ್ನೆಲ್ಲ ಖಾಯಂ ಮಾಡಿದೆವು. ನಾವು ಅವರ ಮೇಲೆ ಸಿನಿಮಾ ಮಾಡಿಲ್ಲ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಧಾರ್ಮಿಕ ವಿಭಜನೆಯು ಭಾರತದ ಐಟಿ ನಾಯಕತ್ವವನ್ನು ನಾಶಪಡಿಸುತ್ತದೆ: ಮಜುಂದಾರ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...