Homeಮುಖಪುಟಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ವಿವರಣೆ ಕೋರಿದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ

ಪೂಂಛ್‌ನಲ್ಲಿ ನಾಗರಿಕರ ಹತ್ಯೆ ಪ್ರಕರಣ: ವಿವರಣೆ ಕೋರಿದ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ರಜೌರಿ ಪ್ರದೇಶದಲ್ಲಿ ಮೂವರು ನಾಗರಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿವರಣೆಯನ್ನು ಕೋರಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಅತುಲ್ ದುಲ್ಲೊ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಜನವರಿ 15ರೊಳಗೆ ನೊಟೀಸ್‌ಗೆ ಉತ್ತರಿಸುವಂತೆ ಸೂಚಿಸಿದೆ.

ಮಾನವ ಹಕ್ಕುಗಳ ಕಾರ್ಯಕರ್ತ ದೆಹಲಿ ಮೂಲದ ಸದ್ದಾಂ ಮುಜೀಬ್ ಅವರ ದೂರಿನ ಬೆನ್ನಲ್ಲೇ ಘಟನೆಯ ಬಗ್ಗೆ ವಿವರಣೆ ಕೇಳಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೊಟೀಸ್‌ ಜಾರಿ ಮಾಡಿದೆ. ಮುಜೀಬ್ ಅವರು ನಾಗರಿಕರ ಬಗ್ಗೆ ಸೇನೆಯ ವರ್ತನೆಯನ್ನು ವಿವರಿಸುವ ಸುದ್ದಿ ವರದಿಗಳು ಮತ್ತು ಗಾಯಗೊಂಡ ಸಂತ್ರಸ್ತರಿಗೆ ವೈದ್ಯಕೀಯ ಆರೈಕೆ, ಮೃತ ನಾಗರಿಕರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಆಯೋಗಕ್ಕೆ ಪತ್ರ ಬರೆದಿದ್ದರು.

ತಮ್ಮ ದೂರಿನಲ್ಲಿ, ಮುಜೀಬ್ ಅವರು ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ  ವೈರಲ್‌ ಆದ 29 ಸೆಕೆಂಡುಗಳ ವೀಡಿಯೊ ಕ್ಲಿಪ್ ಬಗ್ಗೆ ಉಲ್ಲೇಖಿಸಿದ್ದಾರೆ. ಅದರಲ್ಲಿ ಸೇನಾ ಸಿಬ್ಬಂದಿ ಮೂವರಿಗೆ ಚಿತ್ರಹಿಂಸೆ ನೀಡುವುದು,ಗಾಯದ ಮೇಲೆ ಮೆಣಸಿನ ಪುಡಿ ಹಾಕುವುದು ಸೆರೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ರಜೌರಿ ಪ್ರದೇಶದಲ್ಲಿ ಸೇನಾ ಸಿಬ್ಬಂದಿಗಳ ಚಿತ್ರಹಿಂಸೆಯಿಂದ ಸಫೀರ್ ಹುಸೇನ್ (43), ಮೊಹಮ್ಮದ್ ಶೌಕತ್‌ (27) ಮತ್ತು ಶಬೀರ್ ಅಹ್ಮದ್ (32) ಮೃತಪಟ್ಟಿದ್ದರು. ಅವರು ಗುಜ್ಜರ್-ಬಕರ್ವಾಲ್ ಸಮುದಾಯಕ್ಕೆ ಸೇರಿದವರಾಗಿದ್ದರು.

ಡಿಸೆಂಬರ್ 22ರಂದ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಸೇನಾ ಸಿಬ್ಬಂದಿಗಳು ಎಂಟು ನಾಗರಿಕರನ್ನು ವಶಕ್ಕೆ ಪಡೆದುಕೊಂಡಿತ್ತು. ಅವರಲ್ಲಿ ಮೂವರು ಚಿತ್ರಹಿಂಸೆಗೆ ಒಳಗಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇತರ ಐವರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಿದ್ದಾರೆ. ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸೋಮವಾರ ಪೂಂಛ್‌ಗೆ ಭೇಟಿ ನೀಡಿದ್ದರು. ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದರು. ಭದ್ರತಾ ಪಡೆಗಳು ತಮ್ಮೊಂದಿಗಿದ್ದಾರೆ ಎಂದು ಕುಟುಂಬಗಳಿಗೆ ಭರವಸೆ ನೀಡಿದ ಅವರು ಈಗಾಗಲೇ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಕೆಲವು ಅಧಿಕಾರಿಗಳನ್ನು ತಮ್ಮ ಹುದ್ದೆಯಿಂದ ತೆಗೆದು ಹಾಕಲಾಗಿದೆ ಎಂದು ಅವರು ತಿಳಿಸಿದ್ದರು.

ಮೃತರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ, ಸರ್ಕಾರಿ ನೌಕರಿ ಹಾಗೂ ಸೂರಂಕೋಟೆಯಲ್ಲಿ ನಿವೇಶನ ನೀಡುವುದಾಗಿ ಸಂತ್ರಸ್ತ ಕುಟುಂಬಕ್ಕೆ ಈಗಾಗಲೇ ಜಿಲ್ಲಾಡಳಿತ ಭರವಸೆ ನೀಡಿದೆ. ಇದರಲ್ಲಿ ಈಗಾಗಲೇ ತಲಾ 10 ಲಕ್ಷ ರೂ.ಗಳ ಚೆಕ್‌ಗಳನ್ನು ಪಾವತಿಸಿದೆ. ಇದಲ್ಲದೆ ಮೃತ ಮೂವರು ನಾಗರಿಕರ ಕುಟುಂಬಸ್ಥರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭೇಟಿ ಮಾಡಿದ್ದು, ಸಂತ್ರಸ್ತರ ಕುಟುಂಬದ ಸದಸ್ಯರ ಜೊತೆ ಮಾತುಕತೆ ನಡೆಸಿದ್ದರು.

ಇದನ್ನು ಓದಿ: ಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...