Homeಮುಖಪುಟಕಾಶ್ಮೀರ ವಿಭಜನೆ ಮತ್ತು 370ನೇ ವಿಧಿ ರದ್ದು: ಕೇಂದ್ರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ...

ಕಾಶ್ಮೀರ ವಿಭಜನೆ ಮತ್ತು 370ನೇ ವಿಧಿ ರದ್ದು: ಕೇಂದ್ರದ ಕ್ರಮ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ದಾಖಲು

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹೋಗಲಾಡಿಸುವ ಆರ್ಟಿಕಲ್ 370 ನೇ ವಿಧಿ ರದ್ದು ಮಾಡುವ ರಾಷ್ಟ್ರಪತಿಗಳ ಆದೇಶವನ್ನು ಪ್ರಶ್ನಿಸಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಶುಕ್ರವಾರ ಅಂಗೀಕರಿಸಿದ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ಅನ್ನು ಸಹ ಅಸಂವಿಧಾನಿಕ ಎಂದು ಘೋಷಿಸುವಂತೆ ಸುಪ್ರೀಂಕೋರ್ಟ್‌ನಿಂದ ನಿರ್ದೇಶನ ನೀಡಬೇಕೆಂದು ಪಕ್ಷವು ಕೋರಿದೆ.

ಜಮ್ಮು ಮತ್ತು ಕಾಶ್ಮೀರದ ಕುರಿತು ಕೇಂದ್ರದ ನಿರ್ಧಾರಗಳ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ನ ಮುಖಂಡರಾದ ಮೊಹಮ್ಮದ್ ಅಕ್ಬರ್ ಲೋನ್ ಮತ್ತು ಹಸ್ನೈನ್ ಮಸೂದಿ ಅವರು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ವಿಭಜನೆ ಕುರಿತು ಕೇಂದ್ರವು ಎರಡು ನಿರ್ಣಯಗಳನ್ನು ಮತ್ತು ಮಸೂದೆಯನ್ನು ಮಂಡಿಸುವಾಗ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಮವಾರ ಗೃಹಬಂಧನದಲ್ಲಿರಿಸಲಾಗಿತ್ತು.

ಹಿಂಸಾಚಾರವನ್ನು ತಡೆಗಟ್ಟಲು ರಾಜ್ಯದಲ್ಲಿ ಸಾವಿರಾರು ಸೈನಿಕರನ್ನು ನಿಯೋಜಿಸಿದ್ದು ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಹಲವಾರು ರಾಜಕೀಯ ಮುಖಂಡರನ್ನು ಸಹ ಆಗ ಗೃಹಬಂಧನದಲ್ಲಿಡಲಾಗಿತ್ತು.

ಈ ನಡುವೆ, ಶ್ರೀನಗರದ ಜಿಲ್ಲಾಧಿಕಾರಿ ಶಾಹಿದ್ ಚೌಧರಿ ಶನಿವಾರ ನಗರದ ಹೆಚ್ಚಿನ ಭಾಗಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಹೇಳಿದ್ದಾರೆ ಮತ್ತು ಬೀದಿಗಳಲ್ಲಿ ಜನರು ಓಡಾಡುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.

ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆಯ ನಂತರ ಸಾವಿರಾರು ಜನರು ಶ್ರೀನಗರದಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದಾರೆಂದು ವರದಿಯಾಗಿದೆ. ಭದ್ರತಾ ಪಡೆಗಳ ಸಿಬ್ಬಂದಿಯು ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಮತ್ತು ಹಲವು ಸುತ್ತುಗಳನ್ನು ಗಾಳಿಯಲ್ಲಿ ಹಾರಿಸಿದರು. ಶುಕ್ರವಾರದ ಪ್ರತಿಭಟನೆಯಲ್ಲಿ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿದರೆ, ಭಾರತ ಸರ್ಕಾರ ಅದನ್ನು ನಿರಾಕರಿಸಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...