Homeಮುಖಪುಟನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

- Advertisement -
- Advertisement -

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 16) ನಿರಾಕರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಈ ಕುರಿತು ಆದೇಶ ಪ್ರಕಟಿಸಿದ್ದಾರೆ.

ಇಡಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ದ ಸಲ್ಲಿಸಿರುವ ಪ್ರಾಸಿಕ್ಯೂಷನ್ ದೂರು ಕಾನೂನುಬದ್ಧವಾಗಿಲ್ಲ. ಏಕೆಂದರೆ, ಅದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಿಗದಿತ ಅಪರಾಧಕ್ಕೆ ಸಂಬಂಧಿಸಿದ ಎಫ್‌ಐಆರ್ ಅನ್ನು ಆಧರಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಕ್ರಿಯೆಗಳು ಸಂಜ್ಞೇ ಪರಿಗಣಿಸಿ ನಡೆಸಲಾಗಿದೆ ಮತ್ತು ಸಮನ್ಸ್ ಆದೇಶವನ್ನು ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಿಆರ್‌ಪಿಸಿ ಸೆಕ್ಷನ್ 200 ಅಡಿಯಲ್ಲಿ ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನೀಡಲಾಗಿದೆಯೇ ಹೊರತು, ಎಫ್‌ಐಆರ್ ಮೇಲೆ ಅಲ್ಲ ಎಂದು ನ್ಯಾಯಾಲಯ ಹೇಳಿದೆ.

ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಈ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್ ದಾಖಲಿಸಿದೆ. ಆದ್ದರಿಂದ ಅರ್ಹತೆಯ ಆಧಾರದ ಮೇಲೆ ಪ್ರಕರಣದಲ್ಲಿ ಇಡಿಯ ವಾದಗಳ ಮೇಲೆ ತೀರ್ಪು ನೀಡುವುದು ಅಕಾಲಿಕವಾಗಿರುತ್ತದೆ ಎಂದು ನ್ಯಾಯಾಧೀಶರು ಆದೇಶವನ್ನು ಪ್ರಕಟಿಸುವಾಗ ತಿಳಿಸಿದ್ದಾರೆ.

ಪ್ರಸ್ತುತ ದೂರಿನಲ್ಲಿ ಸಂಜ್ಞೇ ಪರಿಗಣಿಸುವ ಅವಕಾಶ ಕಾನೂನಿನಲ್ಲಿ ಇಲ್ಲ. ನಿಗದಿತ ಅಪರಾಧಕ್ಕೆ ಸಂಬಂಧಿಸಿದ ಎಫ್‌ಐಆರ್ ಇಲ್ಲದಿದ್ದಾಗ ಪಿಎಂಎಲ್‌ಎಯ ಸೆಕ್ಷನ್ 3 ಮತ್ತು 4ರ ಅಡಿಯಲ್ಲಿ ಹಣ ವರ್ಗಾವಣೆ ಅಪರಾಧಕ್ಕಾಗಿ ತನಿಖೆ ಮತ್ತು ಅದರ ಪರಿಣಾಮವಾಗಿ ಪ್ರಾಸಿಕ್ಯೂಷನ್ ದೂರನ್ನು ಉಳಿಸಿಕೊಳ್ಳಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಇದು ಇಡಿಯ ದೂರನ್ನು ವಜಾಗೊಳಿಸಲು ಕಾರಣವಾಗುತ್ತದೆ ಎಂದಿದೆ.

2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಯ ಸೆಕ್ಷನ್ 44 ಮತ್ತು 45 ರ ಅಡಿಯಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ಧ ಇಡಿ ಹೊಸ ಪ್ರಾಸಿಕ್ಯೂಷನ್ ದೂರು ದಾಖಲಿಸಿದ್ದು, ಸೆಕ್ಷನ್ 3ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ಹಣ ವರ್ಗಾವಣೆ ಅಪರಾಧಕ್ಕಾಗಿ ಸೆಕ್ಷನ್ 70 ರೊಂದಿಗೆ ಓದಲಾಗಿದೆ ಮತ್ತು ಪಿಎಂಎಲ್‌ಎಯ ಸೆಕ್ಷನ್ 4ರ ಅಡಿಯಲ್ಲಿ ಶಿಕ್ಷಾರ್ಹವಾಗಿದೆ.

ಈ ಪ್ರಕರಣವು ಈಗ ಮುಚ್ಚಿಹೋಗಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕರಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (Associated Journals Limited – AJL)ನ ಖರೀದಿ ಅಥವಾ ಸ್ವಾಧೀನಕ್ಕೆ ಸಂಬಂಧಿಸಿದೆ.

2010ರಲ್ಲಿ ಹೊಸದಾಗಿ ಸ್ಥಾಪಿತವಾದ ಕಂಪನಿಯಾದ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ (ವೈಐಎಲ್‌) ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನಿಂದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜಿಎಲ್‌) ಸುಮಾರು 90.21 ಕೋಟಿ ರೂಪಾಯಿ ಸಾಲದ ಹಕ್ಕನ್ನು ಕೇವಲ ರೂ. 50 ಲಕ್ಷಕ್ಕೆ ಖರೀದಿಸಿತ್ತು.

ತರುವಾಯ, ವೈಐಎಲ್‌ 2,000 ಕೋಟಿಗೂ ಹೆಚ್ಚು ಮೌಲ್ಯದ ಎಜಿಎಲ್‌ನ ಆಸ್ತಿಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತ್ತು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವೈಐಎಲ್‌ ಬಹುಪಾಲು ಪಾಲನ್ನು ಹೊಂದಿದ್ದರು. ಇದರಿಂದಾಗಿ ಅವರು ಎಜಿಎಲ್‌ ಅಮೂಲ್ಯ ಆಸ್ತಿಗಳ ಮೇಲೆ ಹಿಡಿತ ಸಾಧಿಸಲು ಪಕ್ಷದ ನಿಧಿಯನ್ನು ಬಳಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

2014ರಲ್ಲಿ ಪ್ರಾರಂಭವಾದ ಇಡಿ ತನಿಖೆಯು ಕಾಂಗ್ರೆಸ್ ಪಕ್ಷ, ಎಜಿಎಲ್‌ ಮತ್ತು ವೈಐಎಲ್‌ ನಡುವಿನ ಹಣಕಾಸಿನ ವಹಿವಾಟುಗಳ ಮೇಲೆ ಕೇಂದ್ರೀಕರಿಸಿದೆ.

ಗಾಂಧಿ ಕುಟುಂಬ ಮತ್ತು ಇತರ ಕಾಂಗ್ರೆಸ್ ನಾಯಕರು ಎಜೆಎಲ್‌ನ ಆಸ್ತಿಗಳನ್ನು ವೈಯಕ್ತಿಕ ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಯೋಜನೆಯಲ್ಲಿ ತೊಡಗಿದ್ದಾರೆ ಎಂದು ಇಡಿ ಆರೋಪಿಸಿದೆ.

ಇತ್ತೀಚೆಗೆ, ಇಡಿ ಎಜೆಎಲ್‌ಗೆ ಸಂಬಂಧಿಸಿದ ಸುಮಾರು 661 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...