Homeಮುಖಪುಟನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

ನ್ಯಾಷನಲ್ ಹೆರಾಲ್ಡ್ ಪ್ರಕರಣ : ಮೋದಿ, ಅಮಿತ್ ಶಾ ರಾಜೀನಾಮೆಗೆ ಖರ್ಗೆ ಒತ್ತಾಯ

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇನಾಲಯ (ಇಡಿ) ದಾಖಲಿಸಿದ್ದ ಹಣ ಅಕ್ರಮ ವರ್ಗಾವಣೆ (ಪಿಎಂಎಲ್‌ಎ) ದೂರು ಸ್ವೀಕರಿಸಲು ದೆಹಲಿ ನ್ಯಾಯಾಲಯ ನಿರಾಕರಿಸಿರುವುದನ್ನು ಕಾಂಗ್ರೆಸ್‌ ಸ್ವಾಗತಿಸಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕೆ ನಮ್ಮ ನಾಯಕರ ಮೇಲೆ ಪ್ರಕರಣ ದಾಖಲಿಸಿದೆ ಎಂಬ ನಮ್ಮ ದೀರ್ಘ ಸಮಯದ ಆರೋಪವನ್ನು ನ್ಯಾಯಾಲಯದ ಆದೇಶ ಪುಷ್ಠೀಕರಿಸಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ನಿನ್ನೆ (ಡಿ.16 ಮಂಗಳವಾರ) ದೆಹಲಿಯ ರೋಸ್ ಅವೆನ್ಯೂ ವಿಚಾರಣಾ ನ್ಯಾಯಾಲಯ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪರ ಆದೇಶ ನೀಡಿದೆ. ಈ ಹಿನ್ನೆಲೆ, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಇಂದು (ಡಿ.17 ಬುಧವಾರ) ಕಾಂಗ್ರೆಸ್ ದೇಶದ ವಿವಿದೆಡೆ ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ಕರೆದಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಡೆಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನ್ಯಾಷನಲ್ ಹೆರಾಲ್ಡ್ ಪ್ರಕರಣದ ಉದ್ದೇಶ ಗಾಂಧಿ ಕುಟುಂಬಕ್ಕೆ ಕಿರುಕುಳ ಕೊಡುವುದು ಮತ್ತು ವಿಪಕ್ಷಗಳನ್ನು ಗುರಿಯಾಗಿಸುವುದು” ಎಂದರು.

“ಇದು ಸೇಡಿನ ಪ್ರಕರಣವಾಗಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಸತ್ಯಕ್ಕೆ ಯಾವಾಗಲೂ ಜಯವಾಗುತ್ತದೆ” ಎಂದು ಹೇಳಿದರು.

“ನ್ಯಾಯಾಲಯದ ತೀರ್ಪಿನ ಹಿನ್ನೆಲೆ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕಾರಣ, ತೀರ್ಪು ಅವರಿಗೆ ಕಪಾಳಮೋಕ್ಷವಾಗಿದೆ. ಅವರು ರಾಜೀನಾಮೆ ನೀಡಬೇಕು ಮತ್ತು ಈ ರೀತಿ ಜನರಿಗೆ ಕಿರುಕುಳ ಕೊಡುವುದನ್ನು ನಿಲ್ಲಿಸಬೇಕು. ಈ ರೀತಿ ನಡೆದುಕೊಂಡರೆ ಜನರು ಅದನ್ನು ಒಪ್ಪುವುದಿಲ್ಲ ಎಂಬುವುದನ್ನು ಅವರನ್ನು ತಿಳಿದುಕೊಳ್ಳಬೇಕು. ಕೇಂದ್ರ ತನಿಖಾ ಸಂಸ್ಥೆಗಳನ್ನು ಅವರು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಜೊತೆ, ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ಅಭಿಷೇಕ್ ಮನು ಸಿಂಘ್ವಿ, ಕೆ.ಸಿ ವೇಣುಗೋಪಾಲ್, ಪವನ್ ಖೇರಾ ಇದ್ದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು, ಸೇಡಿನ ರಾಜಕೀಯದ ಆರೋಪವನ್ನು ಪುನರುಚ್ಚರಿಸಿದರು. “ವಿರೋಧ ಪಕ್ಷಗಳನ್ನು ನಿರಂತರವಾಗಿ ಗುರಿಯಾಗಿಸಿಕೊಳ್ಳುವ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ನಮ್ಮ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ” ಎಂದು ಹೇಳಿದರು.

“ನಾವು ಸೇಡಿನ ರಾಜಕೀಯವನ್ನು ಬಯಲು ಮಾಡುತ್ತೇವೆ. ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ದೇಶದಾದ್ಯಂತ ಅವರು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿ. 16) ನಿರಾಕರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಈ ಕುರಿತು ಆದೇಶ ಪ್ರಕಟಿಸಿದ್ದಾರೆ.

ಇಡಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ವಿರುದ್ದ ಸಲ್ಲಿಸಿರುವ ಪ್ರಾಸಿಕ್ಯೂಷನ್ ದೂರು ಕಾನೂನುಬದ್ಧವಾಗಿಲ್ಲ. ಏಕೆಂದರೆ, ಅದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ನಿಗದಿತ ಅಪರಾಧಕ್ಕೆ ಸಂಬಂಧಿಸಿದ ಎಫ್‌ಐಆರ್ ಅನ್ನು ಆಧರಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಕ್ರಿಯೆಗಳು ಸಂಜ್ಞೇ ಪರಿಗಣಿಸಿ ನಡೆಸಲಾಗಿದೆ ಮತ್ತು ಸಮನ್ಸ್ ಆದೇಶವನ್ನು ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸಿಆರ್‌ಪಿಸಿ ಸೆಕ್ಷನ್ 200 ಅಡಿಯಲ್ಲಿ ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ನೀಡಲಾಗಿದೆಯೇ ಹೊರತು, ಎಫ್‌ಐಆರ್ ಮೇಲೆ ಅಲ್ಲ ಎಂದು ನ್ಯಾಯಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...