Homeಮುಖಪುಟನ್ಯಾಷನಲ್ ಹೆರಾಲ್ಡ್ ಪ್ರಕರಣ: ಸತತ ಮೂರನೇ ದಿನವು ರಾಹುಲ್ ಗಾಂಧಿ ವಿಚಾರಣೆಗೆ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸತತ ಮೂರನೇ ದಿನವು ರಾಹುಲ್ ಗಾಂಧಿ ವಿಚಾರಣೆಗೆ ಸಮನ್ಸ್

- Advertisement -
- Advertisement -

ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸತತ ಮೂರನೇ ದಿನವೂ ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ (ಇಡಿ) ಸೂಚಿಸಿದೆ.

ಜೂನ್ 13 (ಸೋಮವಾರ) ರಿಂದ ಪ್ರಾರಂಭಾವಾಗಿರುವ ವಿಚಾರಣೆ ಇನ್ನು ನಡೆಯುತ್ತಿದ್ದು, ಸತತ ಮೂರನೇ ದಿನವೂ ತನಿಖೆಗೆ ಸಹಕರಿಸುವಂತೆ ಸೂಚಿಸಲಾಗಿದೆ. ಸೋಮವಾರ 10 ಗಂಟೆಗಳ ವಿಚಾರಣೆ, ಮಂಗಳವಾರ ಇಡೀ ದಿನ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು.

ದೇಶದ ಹಲವು ಭಾಗಗಳಲ್ಲಿ ಜಾರಿ ನಿರ್ದೇಶನಾಲಯದ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ದೆಹಲಿಯ ಕಾಂಗ್ರೆಸ್ ಕಚೇರಿಯ ಹೊರಗಡೆ ಪೊಲೀಸರು ಮತ್ತು ಇತರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಪಿಜ್ಜಾ ಡೆಲಿವರಿ ಯುವತಿಯ ಮೇಲೆ ನಾಲ್ವರು ಯುವತಿಯರಿಂದ ಅಮಾನವೀಯ ಹಲ್ಲೆ

ಪ್ರತಿಭಟನೆಗಳ ಬಗ್ಗೆ ಮಾತನಾಡಿರುವ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, “ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯವು ಎಲ್ಲಿಯವರೆಗೆ ಪ್ರಶ್ನಿಸುತ್ತಿರುತ್ತದೋ ಅಲ್ಲಿಯವರೆಗೂ ಕಾಂಗ್ರೆಸ್ ಪ್ರತಿಭಟನೆಗಳು ಮುಂದುವರಿಯುತ್ತವೆ. ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಇನ್ನೂ ಹೆಚ್ಚಾಗಬಹುದು” ಎಂದು ಹೇಳಿದ್ದಾರೆ.

ಇನ್ನು ಮಂಗಳವಾರ ಇಡೀ ದಿನ ಇಡಿ ವಿಚಾರನೆಯಲ್ಲಿದ್ದ ಕಾರಣ, ರಾಹುಲ್ ಗಾಂಧಿ ಆಸ್ಪತ್ರೆಯಲ್ಲಿರುವ ಸೋನಿಯಾ ಗಾಂಧೀಯವರನ್ನು ತಡರಾತ್ರಿಯಲ್ಲಿ ಹೋಗಿ ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವವನ್ನು ಹೊಂದಿರುವ ಯಂಗ್ ಇಂಡಿಯನ್‌ನಲ್ಲಿ ಹಣಕಾಸಿನ ಅಕ್ರಮಗಳು ನಡೆದಿವೆ ಎಂದು ತನಿಖೆ ನಡೆಸಲಾಗುತ್ತಿದೆ. 2013ರಲ್ಲಿ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಪರಿಗಣಿಸಿದ ನಂತರ ಇ.ಡಿ.ಯು ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ನಿಬಂಧನೆಗಳ ಅಡಿಯಲ್ಲಿ ಹೊಸ ಪ್ರಕರಣವನ್ನು ದಾಖಲಿಸಿದೆ.


ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ:10 ಗಂಟೆಗೂ ಹೆಚ್ಚು ಕಾಲ ರಾಹುಲ್ ಗಾಂಧಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...