ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೋಮವಾರ (ಜೂನ್.13) ಹತ್ತು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಇಂದು (ಜೂನ್.14) ಮತ್ತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ವಿಚಾರಣೆಗೆ ಸಮನ್ಸ್ ಜಾರಿ ಮಾಡಿತ್ತು. ಸೋನಿಯಾ ಗಾಂಧಿಯವರು ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವುದರಿಂದ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು.
ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ನಾಯಕರು ನಿನ್ನೆ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪಗಳು ಕೇಳಿ ಬಂದಿವೆ.
ಇದನ್ನೂ ಓದಿ: ಕಾಂಗ್ರೆಸ್ ಪ್ರತಿಭಟನೆ: ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ರನ್ನು ಎಳೆದೊಯ್ದ ಪೊಲೀಸರು
तानाशाही हुकूमत देखना है जोर कितना तुम्हारी सलाखों में है..
कांग्रेस कार्यकर्ताओं की गिरफ्तारियां भी हौसले को नहीं तोड़ पाएंगी।
लगातार दूसरे दिन पुलिसिया अत्याचार जारी, मगर ये संघर्ष जारी है, जारी रहेगा।#राहुल_का_सत्याग्रह pic.twitter.com/mIbB4rm5DP
— Congress (@INCIndia) June 14, 2022
ಜಾರಿ ನಿರ್ದೇಶನಾಲಯದ ಕಚೇರಿಗಳ ಹೊರಗೆ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಯೋಜಿಸಿತ್ತು. ದೆಹಲಿಯಲ್ಲಿ, ಪಕ್ಷದ ಸಂಸದರು ಸೇರಿದಂತೆ ಹಿರಿಯ ನಾಯಕರು ರಾಹುಲ್ ಗಾಂಧಿಯವರೊಂದಿಗೆ ಪಕ್ಷದ ಕಚೇರಿಯಿಂದ ಜಾರಿ ನಿರ್ದೇಶನಾಲಯದ ಕಚೇರಿಗೆ ಮೆರವಣಿಗೆ ನಡೆಸಲು ಯೋಜನೆ ಮಾಡಿತ್ತು. ಆದರೆ, ಪ್ರತಿಭಟನಾ ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದ ದೆಹಲಿ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರನ್ನು ಸುತ್ತುವರಿದು ಪ್ರತಿಭಟನೆಗೆ ತಡೆಯೊಡ್ಡಿದ್ದರು.
ಕಾಂಗ್ರೆಸ್ ನಾಯಕರಾದ ಪಿ.ಚಿದಂಬರಂ, ಅಧೀರ್ ರಂಜನ್ ಚೌಧರಿ, ಕೆಸಿ ವೇಣುಗೋಪಾಲ್, ದೀಪೇಂದರ್ ಹೂಡಾ ಮತ್ತು ಜೈರಾಮ್ ರಮೇಶ್ ಸೇರಿದಂತೆ ಅನೇಕರನ್ನು ಬಂಧಿಸಿ ಬಸ್‌ಗಳಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ನಾಯಕರನ್ನು ಅಮಾನುಷವಾಗಿ ನಡೆಸಿಕೊಂಡಿರುವ ವಿಡಿಯೋಗಳು ಹೊರಬಿದ್ದಿವೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರನ್ನು ಪೊಲೀಸರು ಎತ್ತಿಕೊಂಡು ಹೋಗಿ ಬಸ್‌ನಲ್ಲಿ ಕೂರಿಸಲಾಗಿತ್ತು. ಘಟನೆಯಲ್ಲಿ ಅವರ ಬಟ್ಟೆ ಹರಿದಿತ್ತು, ಅಸ್ವಸ್ಥರಾಗಿದರು ಎಂದು ಕಾಂಗ್ರೆಸ್ ಆರೋಪಿಸಿದೆ. ಇನ್ನು, ದೆಹಲಿ ಪೊಲೀಸರು ತಳ್ಳಿದ ನಂತರ ಚಿದಂಬರಂ ಅವರ ಪಕ್ಕೆಲುಬು ಮುರಿದಿದೆ. ಮತ್ತೋರ್ವ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿ ಅವರನ್ನು ರಸ್ತೆಗೆ ಎಸೆಯಲಾಗಿದ್ದು, ಅವರ ತಲೆಗೆ ಗಾಯವಾಗಿದೆ ಎಂದು ಹಿರಿಯ ನಾಯಕ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಂಡು ಓಡಿದ ಕುರಿತು ಯುವ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದೇನು?


